ಬೆಂಗಳೂರು: ಪ್ಯಾಲೆಸ್ಟೀನ್‌ ಬೆಂಬಲಿಸಿ ಅನುಮತಿ ಪಡೆಯದೆ ಮೌನ ಮೆರವಣಿಗೆ; ಎಫ್‌ಐಆರ್ ದಾಖಲಿಸಿದ ಪೊಲೀಸರು

ಪ್ಯಾಲೆಸ್ಟೀನ್‌ಗೆ ಬೆಂಬಲ ಸೂಚಿಸಿ ಇಲ್ಲಿ ಮೌನ ಪ್ರತಿಭಟನೆ ನಡೆಸಿದ ಜನರ ಗುಂಪೊಂದರ ವಿರುದ್ಧ ಬೆಂಗಳೂರು ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ

ಬೆಂಗಳೂರು: ಪ್ಯಾಲೆಸ್ಟೀನ್‌ಗೆ ಬೆಂಬಲ ಸೂಚಿಸಿ ಇಲ್ಲಿ ಮೌನ ಪ್ರತಿಭಟನೆ ನಡೆಸಿದ ಜನರ ಗುಂಪೊಂದರ ವಿರುದ್ಧ ಬೆಂಗಳೂರು ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಭಾನುವಾರ ಪ್ಯಾಲೆಸ್ಟೀನ್‌‌ಗೆ ಬೆಂಬಲ ಸೂಚಿಸುವ ಸಲುವಾಗಿ ಫಲಕಗಳು ಮತ್ತು ಪೋಸ್ಟರ್‌ಗಳನ್ನು ಹಿಡಿದು ಸೈಂಟ್ ಮಾರ್ಕ್ಸ್ ರಸ್ತೆಯಲ್ಲಿ ಜನರ ಗುಂಪೊಂದು ಮೌನ ಮೆರವಣಿಗೆ ನಡೆಸಿತು. ಆದರೆ, ಇದಕ್ಕಾಗಿ ಅನುಮತಿ ಪಡೆದಿರಲಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹೈಕೋರ್ಟ್ ಆದೇಶದ ಪ್ರಕಾರ, ನಗರದ ಫ್ರೀಡಂ ಪಾರ್ಕ್‌ನಲ್ಲಿ ಮಾತ್ರ ಪ್ರತಿಭಟನೆ ನಡೆಸಲು ಅವಕಾಶ ನೀಡಲಾಗಿದೆ. ಈ ಗುಂಪಿನ ಮೌನ ಮೆರವಣಿಗೆಯು ಪಾದಚಾರಿಗಳ ಸಂಚಾರಕ್ಕೂ ಅಡ್ಡಿ ಉಂಟುಮಾಡಿತು ಎಂದರು.

ಈ ಸಂಬಂಧ ದೂರನ್ನು ಸ್ವೀಕರಿಸಿದ್ದು, ಅದರ ಆಧಾರದ ಮೇಲೆ, ಜನರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 149 (ಕಾನೂನುಬಾಹಿರ ಸಭೆ), 188 (ಸಾರ್ವಜನಿಕ ಸೇವಕರು ಘೋಷಿಸಿದ ಆದೇಶಕ್ಕೆ ಅವಿಧೇಯತೆ), 283 (ಸಾರ್ವಜನಿಕ ಮಾರ್ಗ ಅಥವಾ ನ್ಯಾವಿಗೇಷನ್ ಮಾರ್ಗದಲ್ಲಿ ಅಪಾಯ ಅಥವಾ ಅಡಚಣೆ), 290 (ಸಾರ್ವಜನಿಕ ತೊಂದರೆ) ಮತ್ತು 291 (ತಡೆಯಾಜ್ಞೆ ನಂತರವೂ ತೊಂದರೆ ಉಂಟುಮಾಡುವುದು) ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. 

ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com