ಇಂದು ಮಾಜಿ ಸಚಿವ, ಹಿರಿಯ ನಾಯಕ ಡಿ ಬಿ ಚಂದ್ರೇಗೌಡ ಅಂತ್ಯಕ್ರಿಯೆ: ಅಂತಿಮ ದರ್ಶನ ಪಡೆಯಲಿರುವ ಸಿಎಂ ಸಿದ್ದರಾಮಯ್ಯ

ಮೊನ್ನೆ ಸೋಮವಾರ ರಾತ್ರಿ ನಿಧನರಾದ ಹಿರಿಯ ರಾಜಕಾರಣಿ, ಮಾಜಿ ಸಚಿವ ಡಿ.ಬಿ.ಚಂದ್ರೇಗೌಡ(Daradahalli Byregowda Chandregowda ) ಅವರ ಅಂತ್ಯ ಸಂಸ್ಕಾರ ಇಂದು ಬುಧವಾರ ಅವರ ಹುಟ್ಟೂರು ದಾರದಹಳ್ಳಿಯ ಪೂರ್ಣಚಂದ್ರ ಎಸ್ಟೇಟ್ ನಲ್ಲಿ ನೆರವೇರಲಿದೆ. ಮೂಡಿಗೆರೆ ತಾಲೂಕಿನ ದಾರದಹಳ್ಳಿ ಬಳಿಯ ಪೂರ್ಣಚಂದ್ರ  ಎಸ್ಟೇಟ್​ನಲ್ಲಿ ಅಂತ್ಯಕ್ರಿಯೆ ನಡೆಸಲು ಸಿದ್ಧತೆ ನಡೆದಿದೆ. 
ಡಿ ಬಿ ಚಂದ್ರೇಗೌಡ
ಡಿ ಬಿ ಚಂದ್ರೇಗೌಡ
Updated on

ಬೆಂಗಳೂರು:  ಮೊನ್ನೆ ಸೋಮವಾರ ರಾತ್ರಿ ನಿಧನರಾದ ಹಿರಿಯ ರಾಜಕಾರಣಿ, ಮಾಜಿ ಸಚಿವ ಡಿ.ಬಿ.ಚಂದ್ರೇಗೌಡ(Daradahalli Byregowda Chandregowda ) ಅವರ ಅಂತ್ಯ ಸಂಸ್ಕಾರ ಇಂದು ಬುಧವಾರ ಅವರ ಹುಟ್ಟೂರು ದಾರದಹಳ್ಳಿಯ ಪೂರ್ಣಚಂದ್ರ ಎಸ್ಟೇಟ್ ನಲ್ಲಿ ನೆರವೇರಲಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ದಾರದಹಳ್ಳಿ ಬಳಿಯ ಪೂರ್ಣಚಂದ್ರ  ಎಸ್ಟೇಟ್​ನಲ್ಲಿ ಅಂತ್ಯಕ್ರಿಯೆ ನಡೆಸಲು ಸಿದ್ಧತೆ ನಡೆದಿದೆ. 

ಅಂತಿಮ ದರ್ಶನ ಪಡೆಯಲಿರುವ ಸಿಎಂ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಡಿ.ಬಿ.ಚಂದ್ರೇಗೌಡ ಕಳೆದ ಸೋಮವಾರ ಮಧ್ಯರಾತ್ರಿ ಮೂಡಿಗೆರೆ ತಾಲೂಕಿನ ದಾರದಹಳ್ಳಿಯ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಅಡ್ಯಂತಾಯ ರಂಗಮಂದಿರದಲ್ಲಿ ಇಂದು ಮಧ್ಯಾಹ್ನ 2 ಗಂಟೆಯಿಂದ ಸಂಜೆ 6ರವರೆಗೆ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಸಿಎಂ ಸಿದ್ದರಾಮಯ್ಯ ಸಹ ಚಂದ್ರೇಗೌಡ ಅವರ ಅಂತಿಮ ದರ್ಶನ ಪಡೆಯಲಿದ್ದಾರೆ. ವಿವಿಧ ಪಕ್ಷಗಳ ನಾಯಕರು ಅಂತಿಮ ದರ್ಶನ ಮಾಡಲಿದ್ದಾರೆ.

ಚಿತ್ರದುರ್ಗಕ್ಕೆ ಸಿಎಂ ಭೇಟಿ: ಬಳಿಕ ಸಿಎಂ ಸಿದ್ದರಾಮಯ್ಯ ಅವರು ಚಿತ್ರದುರ್ಗಕ್ಕೆ ತೆರಳಲಿದ್ದಾರೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಸಾಣೇಹಳ್ಳಿಯ ತರಳಬಾಳು ಮಠಕ್ಕೆ ಭೇಟಿ ನೀಡಿ ತರಳಬಾಳು ಮಠ ಆಯೋಜಿಸಿರುವ ನಾಟಕೋತ್ಸವದಲ್ಲಿ ಭಾಗಿಯಾಗಲಿದ್ದಾರೆ. ಪಂಡಿತಾರಾಧ್ಯ ಶಿವಾಚಾರ್ಯಶ್ರೀ ನೇತೃತ್ವದಲ್ಲಿ ಸಂಜೆ 6ಕ್ಕೆ ನಾಟಕೋತ್ಸವ ಸಮಾರೋಪ ಕಾರ್ಯಕ್ರಮ‌ ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com