ಲುಫ್ತಾನ್ಸ ವಿಮಾನದಲ್ಲಿ ಸಹ ಪ್ರಯಾಣಿಕರಿಗೆ ಲೈಂಗಿಕ ಕಿರುಕುಳ: ವೃದ್ಧನ ಬಂಧನ

ಫ್ರಾಂಕ್‌ಫರ್ಟ್-ಬೆಂಗಳೂರು ನಡುವೆ ಹಾರಾಟ ನಡೆಸುತ್ತಿದ್ದ ಲುಫ್ತಾನ್ಸ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಮಹಿಳಾ ಪ್ರಯಾಣಿಕರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ 52 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಲುಫ್ತಾನ್ಸ ವಿಮಾನ
ಲುಫ್ತಾನ್ಸ ವಿಮಾನ
Updated on

ಬೆಂಗಳೂರು: ಫ್ರಾಂಕ್‌ಫರ್ಟ್-ಬೆಂಗಳೂರು ನಡುವೆ ಹಾರಾಟ ನಡೆಸುತ್ತಿದ್ದ ಲುಫ್ತಾನ್ಸ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಮಹಿಳಾ ಪ್ರಯಾಣಿಕರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ 52 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನವೆಂಬರ್ 6 ರಂದು ಈ ಘಟನೆ ನಡೆದಿದೆ. ಆಂಧ್ರಪ್ರದೇಶದ ತಿರುಪತಿ ಮೂಲದ 32 ವರ್ಷದ ಮಹಿಳೆ ಮಲಗಿದ್ದಾಗ ಆಕೆಯ ಪಕ್ಕದಲ್ಲಿ ಕುಳಿತಿದ್ದ ವ್ಯಕ್ತಿ ಆಕೆಯ ಖಾಸಗಿ ಅಂಗಗಳನ್ನು ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಿದ್ದಾರೆ.

ಘಟನೆ ನಂತರ, ಮಹಿಳೆ ಫ್ಲೈಟ್ ಅಟೆಂಡೆಂಟ್‌ಗೆ ವಿಷಯವನ್ನು ತಿಳಿಸಿದ್ದರು. ಹೀಗಾಗಿ ಪ್ರಯಾಣದ ವೇಳೆ ಆಕೆಯ ಸೀಟನ್ನು ಬದಲಾಯಿಸಿದ್ದರು. ವಿಮಾನ ಬೆಂಗಳೂರಿನಲ್ಲಿ ಇಳಿದ ನಂತರ ಮಹಿಳೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 ಎ (ಲೈಂಗಿಕ ಕಿರುಕುಳ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಘಟನೆ ಸಂಬಂಧ ವ್ಯಕ್ತಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com