ಬೆಂಗಳೂರು: ಮಳೆ ಅನಾಹುತ ತಡೆಗಾಗಿ ಪ್ರತಿ ವಾರ್ಡ್'ಗೆ ಎಂಜಿನಿಯರ್

ನಗರದಲ್ಲಿ ಭಾರೀ ಮಳೆಯಾದ ಹಿನ್ನೆಲೆಯಲ್ಲಿ ವಿಪತ್ತು ನಿರ್ವಹಣಗಾಗಿ ಪ್ರತಿ ವಾರ್ಡ್ ಒಬ್ಬ ಎಂಜಿನಿಯರ್'ಗೆ ಜವಾಬ್ದಾರಿ ವಹಿಸಲು ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ವಲಯ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.
ವಲಯ ಆಯುಕ್ತರು, ಜಂಟಿ ಆಯುಕ್ತರು, ಮುಖ್ಯ ಅಭಿಯಂತರರ ಜೊತೆಗೆ ಸಭೆ ನಡೆಸಿದ ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್.
ವಲಯ ಆಯುಕ್ತರು, ಜಂಟಿ ಆಯುಕ್ತರು, ಮುಖ್ಯ ಅಭಿಯಂತರರ ಜೊತೆಗೆ ಸಭೆ ನಡೆಸಿದ ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್.

ಬೆಂಗಳೂರು: ನಗರದಲ್ಲಿ ಭಾರೀ ಮಳೆಯಾದ ಹಿನ್ನೆಲೆಯಲ್ಲಿ ವಿಪತ್ತು ನಿರ್ವಹಣಗಾಗಿ ಪ್ರತಿ ವಾರ್ಡ್ ನಲ್ಲಿ ಒಬ್ಬ ಎಂಜಿನಿಯರ್'ಗೆ ಜವಾಬ್ದಾರಿ ವಹಿಸಲು ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ವಲಯ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.

ನಗರದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರ ಬಿಬಿಎಂಪಿ ಆಯುಕ್ತರು ಸೇರಿದಂತೆ ವಿವಿಧ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ವಿಪತ್ತು ನಿರ್ವಹಣೆ, ರಸ್ತೆ ಗುಂಡಿ, ಕಸದ ಸಮಸ್ಯೆ, ಪಾದಚಾರಿ ಮಾರ್ಗ ದುರಸ್ತಿಪಡಿಸುವ ಸಲುವಾಗಿ ಪ್ರತಿ ವಾರ್ಡ್ ನಲ್ಲೂ ಪ್ರತ್ಯೇಕವಾಗಿ ಒಬ್ಬೊಬ್ಬ ಎಂಜಿನಿಯರ್'ಗೆ ಜವಾಬ್ದಾರಿ ವಹಿಸುವಂತೆ ನಿರ್ದೇಶಿಸಿದ್ದಾರೆ.

ಸಮಸ್ಯೆ ಕಂಡು ಬಂದ ಕೂಡಲೇ ಎಂಜಿನಿಯರ್‌ಗಳು ವಾರ್ಡ್‌ನಲ್ಲಿರುವ ಸಮಸ್ಯೆಗಳಿಗೆ ತಾತ್ಕಾಲಿಕ ಪರಿಹಾರ ಒದಗಿಸಬೇಕು ಮತ್ತು ಶಾಶ್ವತ ಪರಿಹಾರ ನೀಡುವತ್ತ ಗಮನ ಹರಿಸಬೇಕು ಎಂದು ಒತ್ತಾಯಿಸಿದರು.

ವಿಶೇಷವಾಗಿ ಮೆಟ್ರೊ, ಬೆಸ್ಕಾಂ ಮತ್ತು ಬಿಡಬ್ಲ್ಯುಎಸ್‌ಎಸ್‌ಬಿ ಮೂಲಸೌಕರ್ಯಗಳ ನಿರ್ಮಾಣ ಕಾಮಗಾರಿ ನಡೆಯುತ್ತಿರುವ ಸ್ಥಳಗಳಲ್ಲಿ ಯಾವುದೇ ಹಾನಿಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿದರು.

ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಾತನಾಡಿ, ಭಾರಿ ಮಳೆಯ ಸಂದರ್ಭದಲ್ಲಿ ಮಳೆನೀರು ಹರಿಯುವ ಚರಂಡಿಗಳು ಮುಚ್ಚಿಹೋಗಿರುವುದರಿಂದ ನಗರದ ರಸ್ತೆಗಳು ಜಲಾವೃತವಾಗುತ್ತವೆ. ಹೀಗಾಗಿ ಚರಂಡಿಗಳು ಮುಚ್ಚಿಹೋಗದಂತೆ ನೋಡಿಕೊಳ್ಳಬೇಕು. ಮಳೆಯ ನೀರು ರಸ್ತೆಗೆ ಹರಿಯದೆ, ಚರಂಡಿಗೆ ಹರಿಯುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ನಿರ್ಮಾಣ ಕಾಮಗಾರಿ ಕೈಗೊಳ್ಳಲು ಮೆಟ್ರೊ ಬ್ಯಾರಿಕೇಡ್‌ಗಳನ್ನು ಹಾಕಿರುವ ಸ್ಥಳಗಳಲ್ಲಿ ನೀರು ನಿಲ್ಲುವುದು ಸಾಮಾನ್ಯ. ಈ ಹಿನ್ನೆಲೆಯಲ್ಲಿ ಬ್ಯಾರಿಕೇಡ್‌ಗಳು ನೀರಿನ ಹರಿವಿಗೆ ಅಡ್ಡಿಯಾಗದಂತೆ ಬಿಬಿಎಂಪಿ ಅಧಿಕಾರಿಗಳು ಮೆಟ್ರೊ ಅಧಿಕಾರಿಗಳೊಂದಿಗೆ ಒಟ್ಟಾಗಿ ಕೆಲಸ ಮಾಡಬೇಕು. ನಿಂತ ನೀರನ್ನು ಹೀರಿಕೊಳ್ಳಲು ಮೋಟಾರ್ ಪಂಪ್ ಗಳನ್ನು ಬಳಸಬೇಕೆಂದು ಹೇಳಿದರು.

 ಜಲಾವೃತಗೊಂಡಿರುವ ಮನೆ ಹಾಗೂ ಅಗತ್ಯ ಪರಿಹಾರ ಕ್ರಮ ಕೈಗೊಂಡಿರುವ ಕುರಿತು ಪಟ್ಟಿ ಸಿದ್ಧಪಡಿಸುವುದು ಅಗತ್ಯವಿದೆ.  ಮಹದೇವಪುರದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಬೆಳ್ಳಂದೂರು ಮತ್ತು ವರ್ತೂರು ಕೆರೆಗಳ ಹೂಳೆತ್ತಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಮಳೆ ಅವಾಂತರ ಕುರಿತು ಹೆಚ್ಚಿನ ದೂರುಗಳು ಬಂದಿಲ್ಲ. ಸಂಜಯನಗರ ಮತ್ತು ಹೆಬ್ಬಾಳದಲ್ಲಿ ಮರಗಳು ಬಿದ್ದಿರುವುದಾಗಿ ತಿಳಿದುಬಂದಿದೆ. ಬಿಳೇಕಹಳ್ಳಿ ಮತ್ತು ರೇಸ್‌ಕೋರ್ಸ್ ರಸ್ತೆಯಲ್ಲಿ ಎರಡು ಬಾರಿ ಜಲಾವೃತವಾದ ಬಗ್ಗೆ ದೂರುಗಳಿವೆ. ಸಮಸ್ಯೆಗಳನ್ನು ಪರಿಹರಿಸಲಾಗಿದೆ. ವಿಪತ್ತು ನಿರ್ವಹಣೆಗೆ ನಮ್ಮ ತಂಡ ಸಜ್ಜಾಗಿದೆ ಎಂದು ಬಿಬಿಎಂಪಿ ನಿಯಂತ್ರಣ ಕೊಠಡಿಯ ಸಿಬ್ಬಂದಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com