ಕಂಟೋನ್ಮೆಂಟ್ ರೈಲ್ವೆ ನಿಲ್ದಾಣಕ್ಕೆ ಮರು ಅಭಿವೃದ್ಧಿ: 2 ಸಾವಿರ ವಾಹನಗಳಿಗೆ ಪಾರ್ಕಿಂಗ್ ಸೌಲಭ್ಯ

ನಗರದ ಕಂಟೋನ್ಮೆಂಟ್ ರೈಲು ನಿಲ್ದಾಣವನ್ನು 480 ಕೋಟಿ ರೂಪಾಯಿ ವೆಚ್ಚದಲ್ಲಿ ಮರು ಅಭಿವೃದ್ಧಿಗೊಳಿಸಲಾಗುತ್ತಿದ್ದು, ಮಲ್ಟಿಲೆವೆಲ್ ಬೇಸ್‌ಮೆಂಟ್ ಪಾರ್ಕಿಂಗ್ ಸೌಲಭ್ಯದಲ್ಲಿ ಸಾವಿರ ಕಾರುಗಳು ಮತ್ತು ಅಷ್ಟೇ ಸಂಖ್ಯೆಯಲ್ಲಿ ದ್ವಿಚಕ್ರ ವಾಹನಗಳನ್ನು ನಿಲ್ಲಿಸಲು ಪಾರ್ಕಿಂಗ್ ಸೌಲಭ್ಯಕ್ಕೆ ಕೂಡ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಬೆಂಗಳೂರು ಕೇಂದ್ರ ಕ್ಷೇತ್ರದ ಸಂಸದ ಪಿ ಸಿ ಮೋಹನ
ಬೆಂಗಳೂರು ಸೆಂಟ್ರಲ್ ಸಂಸದ ಪಿಸಿ ಮೋಹನ್ ಬೆಂಗಳೂರು ಕಂಟೋನ್ಮೆಂಟ್ ರೈಲು ನಿಲ್ದಾಣದಲ್ಲಿ ಪುನರಾಭಿವೃದ್ಧಿ ಯೋಜನೆಯನ್ನು ಪರಿಶೀಲಿಸಿದರು
ಬೆಂಗಳೂರು ಸೆಂಟ್ರಲ್ ಸಂಸದ ಪಿಸಿ ಮೋಹನ್ ಬೆಂಗಳೂರು ಕಂಟೋನ್ಮೆಂಟ್ ರೈಲು ನಿಲ್ದಾಣದಲ್ಲಿ ಪುನರಾಭಿವೃದ್ಧಿ ಯೋಜನೆಯನ್ನು ಪರಿಶೀಲಿಸಿದರು
Updated on

ಬೆಂಗಳೂರು: ನಗರದ ಕಂಟೋನ್ಮೆಂಟ್ ರೈಲು ನಿಲ್ದಾಣವನ್ನು 480 ಕೋಟಿ ರೂಪಾಯಿ ವೆಚ್ಚದಲ್ಲಿ ಮರು ಅಭಿವೃದ್ಧಿಗೊಳಿಸಲಾಗುತ್ತಿದ್ದು, ಮಲ್ಟಿಲೆವೆಲ್ ಬೇಸ್‌ಮೆಂಟ್ ಪಾರ್ಕಿಂಗ್ ಸೌಲಭ್ಯದಲ್ಲಿ ಸಾವಿರ ಕಾರುಗಳು ಮತ್ತು ಅಷ್ಟೇ ಸಂಖ್ಯೆಯಲ್ಲಿ ದ್ವಿಚಕ್ರ ವಾಹನಗಳನ್ನು ನಿಲ್ಲಿಸಲು ಪಾರ್ಕಿಂಗ್ ಸೌಲಭ್ಯಕ್ಕೆ ಕೂಡ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಬೆಂಗಳೂರು ಕೇಂದ್ರ ಕ್ಷೇತ್ರದ ಸಂಸದ ಪಿ ಸಿ ಮೋಹನ್ ಹೇಳಿದ್ದಾರೆ.

ನಿಲ್ದಾಣದಲ್ಲಿ ಈಗಿರುವ 25,000 ಚದರ ಅಡಿ ಜಾಗಕ್ಕೆ ಹೆಚ್ಚುವರಿಯಾಗಿ 7,60,000 ಚದರ ಅಡಿ ಜಾಗವನ್ನು ಸೇರಿಸಲಾಗುತ್ತಿದೆ. ಜೂನ್ 20, 2022 ರಂದು ಪ್ರಧಾನಿ ಮೋದಿ ಅವರು ಯೋಜನೆಗೆ ಅಡಿಪಾಯ ಹಾಕಿದ್ದರು.  

ನಿನ್ನೆ ಮಂಗಳವಾರ ಪುನರಾಭಿವೃದ್ಧಿ ಕಾರ್ಯವನ್ನು ಪರಿಶೀಲಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಂಸದರು, ಹವಾನಿಯಂತ್ರಣ, ಬಹು ಟಿಕೆಟ್ ಕೌಂಟರ್‌ಗಳು, ಸೋಲಾರ್ ಮೇಲ್ಛಾವಣಿ, ನಾಲ್ಕು ಫುಟ್ ಓವರ್ ಬ್ರಿಡ್ಜ್‌ಗಳು, 500 ಕಾರುಗಳವರೆಗೆ ಮಲ್ಟಿಲೆವೆಲ್ ಬೇಸ್‌ಮೆಂಟ್ ಪಾರ್ಕಿಂಗ್ ಸೇರಿದಂತೆ ವಿಶ್ವದರ್ಜೆಯ ಪ್ರಯಾಣಿಕರ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲಾಗುವುದು. ಮುಂಭಾಗದಲ್ಲಿ 500 ಬೈಕುಗಳು, ಹಾಗೆಯೇ ಹಿಂಭಾಗದ ಪ್ರವೇಶದ್ವಾರದಲ್ಲಿ, ಆ ಮೂಲಕ ನಿಲ್ದಾಣದಲ್ಲಿ ಒಟ್ಟು 1,000 ಕಾರುಗಳು ಮತ್ತು 1, 000 ದ್ವಿಚಕ್ರ ವಾಹನಗಳ ಪಾರ್ಕಿಂಗ್ ಗೆ ಅವಕಾಶ ಮಾಡಿಕೊಡಲಾಗುವುದು ಎಂದರು. 

ಮುಖ್ಯ ಪ್ರವೇಶ ದ್ವಾರ: ಪುನರಾಭಿವೃದ್ಧಿಗೊಂಡ ನಿಲ್ದಾಣವು ವಸಂತನಗರದಿಂದ ಅದರ ಮುಖ್ಯ ದ್ವಾರವನ್ನು ಮತ್ತು ಮಿಲ್ಲರ್ಸ್ ರಸ್ತೆಯಿಂದ ಅದರ ಎರಡನೇ ಪ್ರವೇಶ ದ್ವಾರವನ್ನು ಹೊಂದಿರುತ್ತದೆ. ಎಲ್ಲಾ ಪ್ಲಾಟ್‌ಫಾರ್ಮ್‌ಗಳಿಗೆ ಪ್ರವೇಶವನ್ನು ಸಕ್ರಿಯಗೊಳಿಸಲು ಇಲ್ಲಿ ನಿರ್ಮಿಸಲಾಗುತ್ತಿರುವ ವಾಕ್‌ವೇಯನ್ನು ಸಂಪರ್ಕಿಸುವ ಹೆಚ್ಚುವರಿ ಎಫ್‌ಒಬಿಗೆ ಅವಕಾಶ ಕಲ್ಪಿಸುವಂತೆ ನಾನು ರೈಲ್ವೆ ಅಧಿಕಾರಿಗಳನ್ನು ಕೇಳಿಕೊಳ್ಳುತ್ತೇವೆ ಎಂದರು. 

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೋಗುವ ಮಾರ್ಗದಲ್ಲಿ ಸಿಲ್ಕ್ ಬೋರ್ಡ್, ಕೆಆರ್ ಪುರ ಮತ್ತು ಹೆಬ್ಬಾಳ ಮೆಟ್ರೋ ನಿಲ್ದಾಣಗಳಲ್ಲಿ ವಿಮಾನ ನಿಲ್ದಾಣದ ಪ್ರಯಾಣಿಕರಿಗೆ ಲಗೇಜ್ ಚೆಕ್-ಇನ್ ಮಾಡಲು ಅನುಮತಿ ನೀಡುವ ಸೌಲಭ್ಯಗಳನ್ನು ಒದಗಿಸುವ ನಿಬಂಧನೆಯನ್ನು ಬಿಎಂಆರ್‌ಸಿಎಲ್ ಕಂಡುಕೊಳ್ಳಬೇಕು ಎಂದರು. ಬಂಬೂ ಬಜಾರ್ ನಿಲ್ದಾಣದ ಬಳಿ ಚಾರ್ಜಿಂಗ್ ಡಾಕ್‌ಗಳ ಜೊತೆಗೆ ಸೈಕಲ್‌ಗಳು ಮತ್ತು ಎಲೆಕ್ಟ್ರಿಕ್ ಬೈಕ್‌ಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದರು. 

ನೆಲದಡಿ ಮೆಟ್ರೋ ನಿಲ್ದಾಣವನ್ನು ಕಂಟೋನ್ಮೆಂಟ್ ರೈಲು ನಿಲ್ದಾಣದೊಂದಿಗೆ ಸಂಪರ್ಕಿಸಲು ನಿರ್ಮಿಸಲಾಗುತ್ತಿರುವ ಸ್ಕೈವಾಕ್  ಬಗ್ಗೆ ಸಂಸದರು ಉಲ್ಲೇಖಿಸಿದರು. ಬಂಬೂ ಬಜಾರ್ ಮೆಟ್ರೋ ನಿಲ್ದಾಣವನ್ನು ಕಂಟೋನ್ಮೆಂಟ್ ನಿಲ್ದಾಣಕ್ಕೆ ಸಂಪರ್ಕಿಸಲು ಟ್ರಾವೆಲೇಟರ್ ನಿರ್ಮಿಸುವ ಭರವಸೆಯನ್ನು ಈ ಹಿಂದೆ ಬಿಎಂಆರ್‌ಸಿಎಲ್ ನೀಡಿತ್ತು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಬೆಂಗಳೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಯೋಗೇಶ್ ಸಂಸದ ಮೋಹನ್ ರೈಲ್ವೆ ಆವರಣದೊಳಗೆ ಬಿಎಂಆರ್‌ಸಿಎಲ್‌ನಿಂದ ಮರುಅಭಿವೃದ್ಧಿ ಕಾರ್ಯಕ್ಕೆ ಸಂಬಂಧಿಸಿದಂತೆ ಎಲ್ಲಾ ಅನುಮತಿಗಳನ್ನು ತ್ವರಿತಗೊಳಿಸುವಂತೆ ರೈಲ್ವೆ ಇಲಾಖೆಗೆ ಸೂಚಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com