ಬೆಂಗಳೂರು-ಮಂಗಳೂರು ಹೈಸ್ಪೀಡ್ ಕಾರಿಡಾರ್ ಬಗ್ಗೆ ಸರ್ಕಾರದಲ್ಲಿ ಚರ್ಚೆ

ಬೆಂಗಳೂರು-ಮಂಗಳೂರು ನಡುವೆ ಇಂಟಿಗ್ರೇಟೆಡ್ ಗ್ರೀನ್ ಫೀಲ್ಡ್ ಹೈ ಸ್ಪೀಡ್ ಕಾರಿಡಾರ್ ಅಸ್ತಿತ್ವಕ್ಕೆ ಬರುವುದು ಮಂಗಳೂರು ಹಾಗೂ ಈ ಮಾರ್ಗದಲ್ಲಿ ಬರುವ ಎಲ್ಲಾ ನಗರಗಳ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. 
ದಿನೇಶ್ ಗುಂಡೂರಾವ್
ದಿನೇಶ್ ಗುಂಡೂರಾವ್

ಬೆಂಗಳೂರು: ಬೆಂಗಳೂರು-ಮಂಗಳೂರು ನಡುವೆ ಇಂಟಿಗ್ರೇಟೆಡ್ ಗ್ರೀನ್ ಫೀಲ್ಡ್ ಹೈ ಸ್ಪೀಡ್ ಕಾರಿಡಾರ್ ಅಸ್ತಿತ್ವಕ್ಕೆ ಬರುವುದು ಮಂಗಳೂರು ಹಾಗೂ ಈ ಮಾರ್ಗದಲ್ಲಿ ಬರುವ ಎಲ್ಲಾ ನಗರಗಳ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. 

ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರೂ ಆಗಿರುವ ದಿನೇಶ್ ಗುಂಡೂರಾವ್, ಯೋಜನೆಯ ಸಲಹಾ ಮತ್ತು ಫೆಸಿಲಿಟೇಷನ್ ಸಂಸ್ಥೆ ಯುರೋಪಿಯನ್ ಉದ್ಯಮ ಹಾಗೂ ತಂತ್ರಜ್ಞಾನ ಕೇಂದ್ರ (ಇಬಿಟಿಸಿ) ನ ಉನ್ನತಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸಚಿವರು ಮಾತನಾಡಿದರು. ಈ ವೇಳೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಲಕ್ಷ್ಮಿ ಹೆಬ್ಬಾಳ್ಕರ್ ಸಹ ಭಾಗಿಯಾಗಿದ್ದರು. 

ಇಂಟಿಗ್ರೇಟೆಡ್ ಗ್ರೀನ್ ಫೀಲ್ಡ್ ಹೈ ಸ್ಪೀಡ್ ಕಾರಿಡಾರ್ ಯೋಜನೆಯಲ್ಲಿ ಬೆಂಗಳೂರು-ಮಂಗಳೂರು ನಡುವೆ 6-8 ಪಥಗಳ ಹೈಸ್ಪೀಡ್ ಕಾರಿಡಾರ್ ನಿರ್ಮಾಣದ ಪ್ರಸ್ತಾವನೆ ಹೊಂದಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆಗಳನ್ನು ಹೊಂದಿರುವ  ದಿನೇಶ್ ಗುಂಡೂರಾವ್, ಕಾರಿಡಾರ್ ಮಾರ್ಗ ನಕ್ಷೆಯನ್ನು ಹೆಚ್ಚಿನ ಮಾಹಿತಿಯೊಂದಿಗೆ ಚರ್ಚಿಸಬೇಕಾಗಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರೊಂದಿಗೆ ಮಾತುಕತೆ ನಡೆಸುವುದಾಗಿ ಸಭೆಯಲ್ಲಿ ಭರವಸೆ ನೀಡಿದರು.

ಮಂಗಳೂರಿನ ಸುಸ್ಥಿರ ಅಭಿವೃದ್ಧಿಗೆ ಸಹಕಾರಿಯಾಗುವ ಇಂತಹ ಯೋಜನೆಗಳಿಗೆ ರಾಜ್ಯ ಸರ್ಕಾರ ಉತ್ತೇಜನ ನೀಡಲಿದೆ ಎಂದು ಹೇಳಿರುವ ಸಚಿವರು, ಈ ರೀತಿಯ ಉದ್ಯಮಗಳ ಅನುಷ್ಠಾನಕ್ಕೆ ಖಾಸಗಿ ಸಹಭಾಗಿತ್ವದ ಅಗತ್ಯವಿದೆ ಎಂದು ಪ್ರತಿಪಾದಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com