RD Patil Arrest: ಕೆಇಎ ಪರೀಕ್ಷಾ ಅಕ್ರಮದ ಕಿಂಗ್ ಪಿನ್ ಆರ್.ಡಿ ಪಾಟೀಲ್ ಬಂಧನ
ಕಲಬುರಗಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ್ದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿನ ಅಕ್ರಮ ಪ್ರಕರಣದ ಕಿಂಗ್ ಪಿನ್ ಆರ್.ಡಿ ಪಾಟೀಲ್ ನನ್ನು ಬಂಧಿಸುವಲ್ಲಿ ಕೊನೆಗೂ ಪೊಲೀಸರು ಯಶಸ್ವಿಯಾಗಿದ್ದಾರೆ.
ಮಹಾರಾಷ್ಟ್ರದಲ್ಲಿ ಆರ್.ಡಿ ಪಾಟೀಲ್ ಅಡಗಿರುವುದನ್ನು ಪತ್ತೆ ಹಚ್ಚಿದ ಕಲಬುರಗಿ ಜಿಲ್ಲಾ ವಿಶೇಷ ಪೊಲೀಸ್ ತಂಡ ಕಾರ್ಯಾಚರಣೆ ನಡೆಸಿ ಆತನನ್ನು ವಶಕ್ಕೆ ಪಡೆದು ಮಹಾರಾಷ್ಟ್ರದಿಂದ ಕಲಬುರಗಿಗೆ ಕರೆತರುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪೊಲೀಸರು ತನ್ನ ಬಂಧಿಸಲು ಬರುತ್ತಿದ್ದಾರೆ ಎಂಬುದನ್ನು ತಿಳಿದ ಆರ್ ಡಿ ಪಾಟೀಲ್ ನವೆಂಬರ್ 6ರಂದು ಕಲಬುರಗಿಯ ವರ್ಧಾ ಲೇಔಟ್ನಲ್ಲಿರುವ ಮಹಾಲಕ್ಷ್ಮೀ ಅಪಾರ್ಟ್ಮೆಂಟ್ ಕಾಂಪೌಂಡ್ ಹಾರಿ ಪರಾರಿಯಾಗಿದ್ದನು.
ಆರ್ ಡಿ ಪಾಟೀಲ್ಗೆ ಫ್ಲ್ಯಾಟ್ ಬಾಡಿಗೆ ನೀಡಿದ ತಪ್ಪಿಗೆ ಶಹಾಪೂರದ ಶಂಕರ್ ಗೌಡಯಾಳವಾರ್ ಮತ್ತು ಅಪಾರ್ಟ್ ಮೆಂಟ್ ವ್ಯವಸ್ಥಾಪಕ ದಿಲೀಪ್ ಪವಾರ್ ಬಂಧಿತರಾಗಿದ್ದಾರೆ. ಆರ್ಡಿ ಪಾಟೀಲ್ನಿಂದ ವ್ಯವಸ್ಥಾಪಕ ದಿಲೀಪ್ 10 ಸಾವಿರ ರೂಪಾಯಿ ಅಡ್ವಾನ್ಸ್ ಪಡೆದು, ಆ ಹಣ ಫ್ಲ್ಯಾಟ್ ಮಾಲೀಕ ಶಂಕರ್ ಗೌಡಗೆ ಕೊಟ್ಟಿದ್ದರು ಎನ್ನಲಾಗಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ