ಮಂಡ್ಯ: ಅಪ್ರಾಪ್ತೆ ಮೇಲೆ ಸಹಪಾಠಿಗಳಿಂದ ಸಾಮೂಹಿಕ ಅತ್ಯಾಚಾರ; ವಿಡಿಯೋ ಚಿತ್ರೀಕರಿಸಿ ಬ್ಲಾಕ್ ಮೇಲ್

ಅಪ್ರಾಪ್ತೆ ಮೇಲೆ ಸಾಮೂಹಿಕ ಲೈಂಗಿಕ ದೌರ್ಜನ್ಯ ಆರೋಪದ ಹಿನ್ನಲೆಯಲ್ಲಿ ಮದ್ದೂರು ಪೊಲೀಸರು ಮೂವರನ್ನು ವಶಕ್ಕೆ ಪಡೆದಿರುವ ಘಟನೆ  ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಬೆಳಕಿಗೆ ಬಂದಿದೆ
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮಂಡ್ಯ: ಅಪ್ರಾಪ್ತೆ ಮೇಲೆ ಸಾಮೂಹಿಕ ಲೈಂಗಿಕ ದೌರ್ಜನ್ಯ ಆರೋಪದ ಹಿನ್ನಲೆಯಲ್ಲಿ ಮದ್ದೂರು ಪೊಲೀಸರು ಮೂವರನ್ನು ವಶಕ್ಕೆ ಪಡೆದಿರುವ ಘಟನೆ  ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಬೆಳಕಿಗೆ ಬಂದಿದೆ. ಅಪ್ರಾಪ್ತ ಯುವತಿ ತಂದೆ ನೀಡಿದ ದೂರಿ‌ನ ಆಧಾರದ ಮೇಲೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ತಾಲೂಕಿನ ತೊರೆಬೊಮ್ಮನಹಳ್ಳಿ ಗ್ರಾಮದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಮೇಲೆ ನ.4ರಂದು ಸಮೂಹಿಕ ಅತ್ಯಾಚಾರ ನಡೆಸಿದೆ. ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಯುವ ದಸರಾದಲ್ಲಿ ಯುವತಿಗೆ ಪರಿಚಯವಾಗಿದ್ದ ಪುನೀತ್ ಎಂಬ ಯುವಕ. ನಂತರ ಯುವತಿ ಜೊತೆ ಪ್ರೀತಿ, ಪ್ರೇಮದ ನಾಟಕವಾಡಿ ನವಂಬರ್ 4 ರಂದು ಮದ್ದೂರಿನ ಖಾಸಗಿ ಲಾಡ್ಜ್ ಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ. ಪುನೀತ್ ಬಳಿಕ ಆತನ ಸ್ನೇಹಿತರಾದ ಮಂಜುನಾಥ್, ಸಿದ್ಧಾರ್ಥ್ ರಿಂದ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.

ಪುನೀತ್, ಮಂಜುನಾಥ್ ಹಾಗೂ ಸಿದ್ದಾರ್ಥ ಬಂಧಿತ ಆರೋಪಿಗಳು. ಈ ಮೂವರಲ್ಲಿ ಇಬ್ಬರು ಅಪ್ರಾಪ್ತರು. ಸಂತ್ರಸ್ತೆಗೆ ತನ್ನ ಸಹಪಾಠಿಗಳಾಗಿರುವ ಇಬ್ಬರು ಆರೋಪಿಗಳು ತಿಳಿದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಬಾಲಾಪರಾಧಿಗಳಲ್ಲಿ ಒಬ್ಬರು ಅವಳನ್ನು ತಾಲೂಕು ಕೇಂದ್ರವಾದ ಮದ್ದೂರಿನ ಲಾಡ್ಜ್‌ಗೆ ಕರೆದೊಯ್ದು ಅಲ್ಲಿ ತನ್ನ ಇಬ್ಬರು ಸ್ನೇಹಿತರೊಂದಿಗೆ ಅತ್ಯಾಚಾರವೆಸಗಿದ್ದಾನೆ. ಆರೋಪಿಗಳು ಕೃತ್ಯದ ವಿಡಿಯೋ ರೆಕಾರ್ಡ್ ಮಾಡಿ ನಂತರ ಸಂತ್ರಸ್ತೆಗೆ ಬೆದರಿಕೆ ಹಾಕಲು ಕಳುಹಿಸಿದ್ದಾರೆ.

ಅಷ್ಟೇ ಅಲ್ಲದೆ, ಈ ವೇಳೆ ಲೈಂಗಿಕ ದೌರ್ಜನ್ಯದ ವಿಡಿಯೋ ಚಿತ್ರೀಕರಿಸಿರುವ ಆರೋಪಿಗಳು, ನಂತರ ವಿಡಿಯೋ ಇಟ್ಟುಕೊಂಡು ಯುವತಿಗೆ ಕರೆದಾಗಲೆಲ್ಲ ಬರುವಂತೆ ಬ್ಲಾಕ್ ಮೇಲ್ ಕೂಡ ಮಾಡುತ್ತಿದ್ದರು. ತಾವು  ಹೇಳಿದ ಮಾತು ಕೇಳದಿದ್ರೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದರು ಎಂದು ತಿಳಿದುಬಂದಿದೆ.

ಘಟನೆಯ ಸಮಯದಲ್ಲಿ ಆರೋಪಿಗಳು ಮದ್ಯದ ಅಮಲಿನಲ್ಲಿದ್ದರು ಎಂದು ಸಂತ್ರಸ್ತೆ ಆರೋಪಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಈ ಆರೋಪಿಗಳ ಬೆದರಿಕೆಗೆ ಹೆದರಿದ್ದ ಯುವತಿ ಘಟನೆ ಕುರಿತಂತೆ ಪೊಷಕರಿಗೆ ನಡೆದ ಘಟನೆ ಬಗ್ಗೆ ವಿವರಿಸಿದ್ದಾಳೆ. ವಿಚಾರ ತಿಳಿಯುತ್ತಿದ್ದಂತೆ ಪೋಷಕರು ತಕ್ಷಣವೇ ಮದ್ದೂರು ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡು ಕ್ರಮ ಕೈಗೊಂಡಿರುವ ಪೊಲೀಸರು ಘಟನೆ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com