ನಾವು ಭಿಕ್ಷೆ ಬೇಡುತ್ತಿಲ್ಲ, ಕಾನೂನು ಪ್ರಕಾರ ಬರ ಪರಿಹಾರ ಕೊಡಿ: ಕೇಂದ್ರಕ್ಕೆ ಡಿ ಕೆ ಶಿವಕುಮಾರ್ ಒತ್ತಾಯ

ರಾಜ್ಯದಲ್ಲಿ  ಈ ವರ್ಷ ನೈರುತ್ಯ ಮುಂಗಾರು ಕೈಕೊಟ್ಟು ಬರ ಪರಿಸ್ಥಿತಿ ತೀವ್ರವಾಗಿದೆ. ಈಗಾಗಲೇ ಬರ ಪರಿಹಾರ ಕೋರಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ನಾವು ಭಿಕ್ಷೆ ಬೇಡುತ್ತಿಲ್ಲ, ಕಾನೂನು ಪ್ರಕಾರ ಬರ ಪರಿಹಾರ ಬಿಡುಗಡೆ ಮಾಡಿ ಎಂದು ಕೇಂದ್ರ ಸರ್ಕಾರಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಒತ್ತಾಯಿಸಿದ್ದಾರೆ.
ಡಿ ಕೆ ಶಿವಕುಮಾರ್
ಡಿ ಕೆ ಶಿವಕುಮಾರ್

ಬೆಂಗಳೂರು: ರಾಜ್ಯದಲ್ಲಿ  ಈ ವರ್ಷ ನೈರುತ್ಯ ಮುಂಗಾರು ಕೈಕೊಟ್ಟು ಬರ ಪರಿಸ್ಥಿತಿ ತೀವ್ರವಾಗಿದೆ. ಈಗಾಗಲೇ ಬರ ಪರಿಹಾರ ಕೋರಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ನಾವು ಭಿಕ್ಷೆ ಬೇಡುತ್ತಿಲ್ಲ, ಕಾನೂನು ಪ್ರಕಾರ ಬರ ಪರಿಹಾರ ಬಿಡುಗಡೆ ಮಾಡಿ ಎಂದು ಕೇಂದ್ರ ಸರ್ಕಾರಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಒತ್ತಾಯಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು ಮಾತನಾಡಿದ ಅವರು, ಬಿಜೆಪಿ -  ಜೆಡಿಎಸ್ ನವರಿಗೆ ಅನುಕಂಪ ಬಂದು ಬರ ಅಧ್ಯಯನಕ್ಕೆ ಹೊರಟಿದ್ದಾರೆ. ಈಗಾಗಲೇ ಸರ್ಕಾರ ಉತ್ತಮ ಅಧ್ಯಯನ ನಡೆಸಿದೆ. ಕೇಂದ್ರ ಸರ್ಕಾರಕ್ಕೆ ವರದಿ ಕೊಡಲಾಗಿದೆ. ವರದಿಯನ್ನು ಸ್ವೀಕಾರ ಮಾಡಿದ ಕೇಂದ್ರ ಸರ್ಕಾರದ ಅಧ್ಯಯನಕ್ಕೆ ಅಧಿಕಾರಿಗಳನ್ನ ಕಳಿಸಿದರು. 26 ಸಂಸದರು, 19 ಜೆಡಿಎಸ್ ಶಾಸಕರು, 65 ಬಿಜೆಪಿ ಶಾಸಕರು ಪ್ರಧಾನಿಯವರನ್ನು ಭೇಟಿ ಮಾಡಲಿ ಎಂದರು.

ಬರದ ಹಿನ್ನಲೆಯಲ್ಲಿ ಸಂಬಂಧಿಸಿದ ಸಚಿವರನ್ನು ಭೇಟಿ‌ ಮಾಡಿ ಪರಿಹಾರ ಹಣ ಕೊಡಿಸಬೇಕು. ಪ್ರಚಾರಕ್ಕಾಗಿ ಎರಡು ಗಿಡ ನೋಡಿಕೊಂಡು ಬಂದರೆ ಏನಿಲ್ಲ. ನಾವು ಗಿಡಗಳನ್ನು ನೋಡಿದ್ದೇವೆ, ನಿಮ್ಮಿಂದ ರಾಜ್ಯಕ್ಕೆ ಏನಾಗಿದೆ? ನಾವು ಭಿಕ್ಷೆ ಬೇಡುತ್ತಿಲ್ಲ, ಕಾನೂನು ಪ್ರಕಾರ ಹಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ನಿನ್ನೆ ಸಚಿವ ಸಂಪುಟದಲ್ಲಿ 800 ಕೋಟಿ ಬಿಡುಗಡೆ ಮಾಡಿದ್ದೇವೆ. ಕುಡಿಯುವ ನೀರಿನ, ಮೇವು, ಸೇರಿದಂತೆ ಎಲ್ಲದಕ್ಕೂ ಉಪಯೋಗ ಮಾಡಬೇಕು ಎಂದು ಹಣ ಕೊಟ್ಟಿದ್ದೇವೆ ಎಂದರು. 

ಬರ ಪರಿಹಾರ ವಿಚಾರವಾಗಿ ಕೇಂದ್ರ ಸರ್ಕಾರ ಹಣ ಕೊಡಲಿಲ್ಲ ಎಂದರೂ, ನಮ್ಮ ಸರ್ಕಾರ ಕೊಡುವ ಬಗ್ಗೆ ಚಿಂತನೆ ನಡೆಸಿದೆ. ಆದರೆ ಕೇಂದ್ರ ಸರ್ಕಾರ ನಮ್ಮಿಂದ ಬರ ಪರಿಹಾರ ಕೊಡಲು ಆಗಲ್ಲ ಎಂದು ಹೇಳಬೇಕು ಎಂದು ಸವಾಲು ಹಾಕಿದರು.

ಬರದ ಹಿನ್ನಲೆಯಲ್ಲಿ ಸಂಬಂಧಿಸಿದ ಸಚಿವರನ್ನು ಭೇಟಿ‌ ಮಾಡಿ ಪರಿಹಾರ ಹಣ ಕೊಡಿಸಬೇಕು. ಪ್ರಚಾರಕ್ಕಾಗಿ ಎರಡು ಗಿಡ ನೋಡಿಕೊಂಡು ಬಂದರೆ ಏನಿಲ್ಲ. ನಾವು ಗಿಡಗಳನ್ನು ನೋಡಿದ್ದೇವೆ, ನಿಮ್ಮಿಂದ ರಾಜ್ಯಕ್ಕೆ ಏನಾಗಿದೆ? ನಾವು ಭಿಕ್ಷೆ ಬೇಡುತ್ತಿಲ್ಲ, ಕಾನೂನು ಪ್ರಕಾರ ಹಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com