ಬೆಂಗಳೂರು: ಮಾದಕ ವಸ್ತು ಮಾರಾಟ ಜಾಲ ಪತ್ತೆ; 5 ಕೆಜಿ ಎಂಡಿಎಂಎ ವಶ!

ನಗರದಲ್ಲಿ 'ಮಾದಕ ವಸ್ತುಗಳ ಮಾರಾಟ ಜಾಲ'ವೊಂದನ್ನು ಯಶಸ್ವಿಯಾಗಿ ಬೇಧಿಸುವಲ್ಲಿ ಕೇಂದ್ರ ಅಪರಾಧ ವಿಭಾಗದ ಮಾದಕ ದ್ರವ್ಯ ನಿಗ್ರಹ ದಳ  ಯಶಸ್ವಿಯಾಗಿದೆ.
ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ಸುದ್ದಿಗೋಷ್ಠಿ
ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ಸುದ್ದಿಗೋಷ್ಠಿ

ಬೆಂಗಳೂರು: ನಗರದಲ್ಲಿ 'ಮಾದಕ ವಸ್ತುಗಳ ಮಾರಾಟ ಜಾಲ'ವೊಂದನ್ನು ಯಶಸ್ವಿಯಾಗಿ ಬೇಧಿಸುವಲ್ಲಿ ಕೇಂದ್ರ ಅಪರಾಧ ವಿಭಾಗದ ಮಾದಕ ದ್ರವ್ಯ ನಿಗ್ರಹ ದಳ  ಯಶಸ್ವಿಯಾಗಿದೆ.

ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರ ನೀಡಿದ ನಗರ ಪೊಲೀಸ್ ಆಯುಕ್ತ ಬಿ. ದಯಾನಂದ, ಮಾದಕ ವಸ್ತುಗಳ ವ್ಯಾಪಾರದಲ್ಲಿ ತೊಡಗಿಸಿಕೊಂಡಿದ್ದ ಆಫ್ರಿಕನ್ ಮೂಲದ ವ್ಯಕ್ತಿಯನ್ನು ನಗರ ಪೊಲೀಸರು ಬಂಧಿಸಿರುವುದಾಗಿ ತಿಳಿಸಿದರು. 

ಅಲ್ಲದೇ, ಎಂಡಿಎಂಎ ತಯಾರಿಕೆಗೆ ಬಳಸಲಾದ ವಿವಿಧ ಕಚ್ಚಾ ವಸ್ತುಗಳು ಮತ್ತು ರಾಸಾಯನಿಕಗಳ ಜೊತೆಗೆ ಸುಮಾರು 10 ಕೋಟಿ ಮೌಲ್ಯದ 5 ಕೆಜಿ ಎಂಡಿಎಂಎ ಮಾದಕ ವಸ್ತುವನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಆರೋಪಿ ಮಾದಕ ವಸ್ತು ತಯಾರಿಕೆ ಹಾಗೂ ಮಾರುಕಟ್ಟೆಯಲ್ಲಿ ಅವುಗಳನ್ನು ಮಾರಾಟ ಮಾಡಲು ಪ್ರಯೋಗಾಲಯವೊಂದನ್ನು ಸ್ಥಾಪಿಸಿಕೊಂಡಿದ್ದ ಎಂದು ಅವರು ಮಾಹಿತಿ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com