ಕೋಲಾರ ಜಿಲ್ಲೆಯ ಮೂರು ತಾಲ್ಲೂಕುಗಳಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಯರಗೋಳ್ ಡ್ಯಾಂ ಲೋಕಾರ್ಪಣೆ!

ಕೋಲಾರ ಜಿಲ್ಲೆ ಬಂಗಾರಪೇಟೆ ತಾಲ್ಲೂಕು ಯರಗೋಳ್ ಗ್ರಾಮದ ಬಳಿ ನಿರ್ಮಾಣ ಮಾಡಿರುವ ಯರಗೋಳ್  ಅಣೆಕಟ್ಟನ್ನು ಸಿಎಂ ಸಿದ್ದರಾಮಯ್ಯ ಇಂದು ಶನಿವಾರ ಲೋಕಾರ್ಪಣೆಗೊಳಿಸಿದರು. 
ಯರಗೋಳ್ ಅಣೆಕಟ್ಟು
ಯರಗೋಳ್ ಅಣೆಕಟ್ಟು

ಕೋಲಾರ: ಕೋಲಾರ ಜಿಲ್ಲೆ ಬಂಗಾರಪೇಟೆ ತಾಲ್ಲೂಕು ಯರಗೋಳ್ ಗ್ರಾಮದ ಬಳಿ ನಿರ್ಮಾಣ ಮಾಡಿರುವ ಯರಗೋಳ್  ಅಣೆಕಟ್ಟನ್ನು ಸಿಎಂ ಸಿದ್ದರಾಮಯ್ಯ ಇಂದು ಶನಿವಾರ ಲೋಕಾರ್ಪಣೆಗೊಳಿಸಿದರು. 

ಮೂರು ತಾಲ್ಲೂಕು ಹಾಗೂ 45 ಗ್ರಾಮಗಳಿಗೆ ಈ ಅಣೆಕಟ್ಟಿನಲ್ಲಿ ಸಂಗ್ರಹವಾದ ನೀರಿನಿಂದ ಜನರಿಗೆ ಕುಡಿಯುವ ನೀರು ಒದಗಿಸಲಿದೆ. ಸಿಎಂ ಸಿದ್ದರಾಮಯ್ಯ ಅವರಿಗೆ ಸಚಿವ ಕೆಹೆಚ್ ಮುನಿಯಪ್ಪ‌, ಬೈರತಿ ಸುರೇಶ್ ಸೇರಿ ಜಿಲ್ಲೆಯ ಶಾಸಕರುಗಳು ಸಾಥ್ ನೀಡಿದರು.

ಕೋಲಾರ ಜಿಲ್ಲೆಯ ಮೂರು ತಾಲೂಕುಗಳಿಗೆ ಶುದ್ದ ಕುಡಿಯುವ ನೀರಿನ ಸೌಲಭ್ಯ ಒದಗಿಸುವ ಜಲಾಶಯ, ಕಳೆದ‌ 17 ವರ್ಷಗಳಿಂದ ನೆನಗುದಿಗೆ ಬಿದ್ದಿದ್ದ ಯೋಜನೆ, ಸದ್ಯ ಯೋಜನೆ ಕಾಮಗಾರಿ ಮುಗಿದು ಸಿಎಂ ಸಿದ್ದರಾಮಯ್ಯ ಅವರಿಂದ ಲೋಕಾರ್ಪಣೆಗೊಂಡಿದೆ. 

ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಯರಗೋಳು ಗ್ರಾಮದ ಬಳಿ ವ್ಯರ್ಥವಾಗಿ ತಮಿಳುನಾಡಿಗೆ ಹರಿದು ಹೋಗುತ್ತಿದ್ದ ನೀರಿಗೆ ಅಡ್ಡಲಾಗಿ ಡ್ಯಾಂ ನಿರ್ಮಾಣ ಮಾಡಿ ಕೋಲಾರ, ಬಂಗಾರಪೇಟೆ, ಮಾಲೂರು ಪಟ್ಟಣ ಹಾಗೂ 45 ಗ್ರಾಮಗಳಿಗೆ ಕುಡಿಯುವ ನೀರು ಒದಗಿಸುವ ಯೋಜನೆ ಇದಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com