ಕೆಜಿಎಫ್ ನಲ್ಲಿ ಕೈಗಾರಿಕಾ ಟೌನ್ ಶಿಪ್: ಸಿಎಂ ಸಿದ್ದರಾಮಯ್ಯ
ಕೋಲಾರ: ಈ ಬಾರಿಯ ಬಜೆಟ್ ನಲ್ಲಿ ಕೆಜಿಎಫ್ ನಲ್ಲಿರುವ 965 ಕೈಗಾರಿಕಾ ಪ್ರದೇಶದವನ್ನು ಬಿ ಇ ಎಂ.ಎಲ್ ನಿಂದ ಹಿಂಪಡೆದು ಅಲ್ಲಿ ಹೊಸ ಕೈಗಾರಿಕಾ ಟೌ ನ್ಸ್ ಶಿಪ್ ನಿರ್ಮಾಣ ಮಾಡಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಕೋಲಾರ, ಬಂಗಾರಪೇಟೆ ತಾಲ್ಲೂಕು ಗಳಿಗೆ ಕುಡಿಯುವ ನೀರನ್ನು ಒದಗಿಸುವ ಯರಗೋಳ್ ಯೋಜನೆ ಹಾಗೂ ಜಿಲ್ಲೆಯ ವಿವಿಧ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿ ಸಿಎಂ ಮಾತನಾಡಿದರು.
ಹಿಂದೆ ಪ್ರತ್ಯೇಕವಾಗಿದ್ದ ಕೋಲಾರ- ಚಿಕ್ಕಬಳ್ಳಾಪುರ ಹಾಲು ಒಕ್ಕೂಟವನ್ನು ಒಂದು ಮಾಡಲಾಗಿತ್ತು. ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಪ್ರತ್ಯೇಕ ಡೈರಿ ಸ್ಥಾಪನೆಗೆ ಮಂಜೂರಾತಿ ನೀಡಲಾಗಿದೆ. ಪ್ರತಿ ತಿಂಗಳು 2 ತಿಂಗಳು ವಿದ್ಯುತ್ ಬಿಲ್ಲು ಕಟ್ಟಲಾಗುತ್ತಿತ್ತು. ಅದನ್ನು ತಪ್ಪಿಸಲು 50 ಎಕರೆ ಜಾಗದಲ್ಲಿ ಸ್ವಂತ ವಿದ್ಯುತ್ ಉತ್ಪಾದಿಸಲು ಸೋಲಾರ್ ಘಟಕ ಸ್ಥಾಪನೆಗೆ ಪರವಾನಗಿ ನೀಡಲಾಗಿದೆ. ಇದರಿಂದ ಕೋಲಾರ ಹಾಲು ಒಕ್ಕೂಟದಿಂದ ರೈತರಿಗೆ ಅನುಕೂಲವಾಗಲಿದೆ ಎಂದು ಸಿಎಂ ಇದೇ ವೇಳೆ ತಿಳಿಸಿದ್ದಾರೆ.
ಕೆಜಿಎಫ್ ಶಾಸಕಿ ರೂಪ ಅವರೂ ಕೂಡ ಕೆಜಿಎಫ್ ಗೆ ಯರಗೋಳ್ ಯೋಜನೆಯಿಂದ ನೀರು ಒದಗಿಸಲು ಕೋರಿದ್ದು, ಈ ಬಗ್ಗೆ ಚರ್ಚೆ ಮಾಡಿ ನೀರು ಸಿಕ್ಕರೆ ಎಷ್ಟೇ ಖರ್ಚಾದರೂ ನೀರು ಕೊಡುತ್ತೇವೆ ಎಂದು ಸಿಎಂ ಭರವಸೆ ನೀಡಿದರು.
ಕೋಲಾರ ಮಲೆನಾಡು ಆಗುವ ದಿನಗಳು ದೂರವಿಲ್ಲ
ಇಲ್ಲಿನ ನೀರನ್ನು ಪರೀಕ್ಷೆ ಮಾಡಿಸಿದ್ದು ಹಾನಿಕಾರಕ ಪದಾರ್ಥ ಇಲ್ಲ ಎಂದು ವಿಶ್ವಸಂಸ್ಥೆಯವರು ಭೇಟಿ ನೀಡಿ ಮೆಚ್ಚುಗೆ ನೀಡಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ ಇದನ್ನು ಅರ್ಥಮಾಡಿಕೊಳ್ಳಬೇಕು. ಕೇವಲ ರಾಜಕೀಯ ಕ್ಕಾಗಿ ಟೀಕೆ ಮಾಡಬಾರದು. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಜನರೇ ಮಾಲೀಕರು. ಜನರ ಸಮಸ್ಯೆಗಳಿಗೆ, ಜನರ ವಿರುದ್ಧವಾಗಿ, ದಾರಿತಪ್ಪಿಸುವ ಕೆಲಸವನ್ನು ಮಾಡಬಾರದು. ಕೋಲಾರ ಮಲೆನಾಡು ಆಗುವ ದಿನಗಳು ದೂರವಿಲ್ಲ. ಇದಕ್ಕೆ ಈ ಭಾಗದ ಜನಪ್ರತಿನಿಧಿಗಳು ಕಾರಣ. ಕೋಲಾರ ಜಿಲ್ಲೆ ಹಸಿರಾಗಿದ್ದರೆ ಕೆರೆಗಳು ತುಂಬಿರುವುದರಿಂದ ಕೆ.ಸಿ ವ್ಯಾಲಿ, ಹೆಚ್.ಎನ್ ವ್ಯಾಲಿ, ಪುಷ್ಪಾವತಿ ಕೆರೆಗಳನ್ನು ತುಂಬಿಸುವ ಕಾರ್ಯವನ್ನು ನಮ್ಮ ಕಾಲದಲ್ಲಿ ಮಂಜೂರು ಮಾಡಿದ್ದು ಎಂದು ಸಿಎಂ ಹೇಳಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ