ಟಿಪ್ಪು ಸುಲ್ತಾನ್ ಅವಮಾನಿಸುವ ಬ್ಯಾನರ್: ಚಿಕ್ಕೋಡಿಯಲ್ಲಿ ಬಿಗುವಿನ ವಾತಾವರಣ!

ಟಿಪ್ಪು ಸುಲ್ತಾನ್ ಸೇರಿದಂತೆ ಇತರ ಮುಸ್ಲಿಂ ರಾಜರನ್ನು ಅವಮಾನಿಸುವ ಬ್ಯಾನರ್ ಹಾಕಿದ್ದರಿಂದ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ಏರ್ಪಡಿಸಿದೆ.
ಟಿಪ್ಪು ಸುಲ್ತಾನ್
ಟಿಪ್ಪು ಸುಲ್ತಾನ್

ಬೆಳಗಾವಿ:  ಟಿಪ್ಪು ಸುಲ್ತಾನ್ ಸೇರಿದಂತೆ ಇತರ ಮುಸ್ಲಿಂ ರಾಜರನ್ನು ಅವಮಾನಿಸುವ ಬ್ಯಾನರ್ ಹಾಕಿದ್ದರಿಂದ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ಏರ್ಪಡಿಸಿದೆ.

ಅವಹೇಳನಕಾರಿಯಾಗಿ ಭಿತ್ತಿಪತ್ರ, ಬ್ಯಾನರ್ ಹಾಕಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅಲ್ಪಸಂಖ್ಯಾತ ಸಮುದಾಯದ ಸದಸ್ಯರು ಒತ್ತಾಯಿಸಿದ್ದಾರೆ. ತಮ್ಮ ವಾಟ್ಸಾಪ್ ಸ್ಟೇಟಸ್‌ನಲ್ಲಿ ಇಂತಹ ಪೋಸ್ಟರ್‌ಗಳನ್ನು ಶೇರ್ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆಯೂ ಅವರು ಕೋರಿದ್ದಾರೆ.

 ಉಪ ಎಸ್ಪಿ ಸಿ.ಬಿ.ಗೌಡರ್ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. 50ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.

ಅಖಂಡ ಭಾರತ ಸಪ್ನಾ ಹೈ, ಅಫ್ಘಾನಿಸ್ತಾನ ತಕ್ ಅಪ್ನಾ ಹೈ ಎಂಬ ಬ್ಯಾನರ್‌ಗಳೂ ಪಟ್ಟಣದಲ್ಲಿ ರಾರಾಜಿಸಿದವು. ಪೋಸ್ಟರ್ ರೂಪದಲ್ಲಿ ಅಖಂಡ ಭಾರತ ನಕ್ಷೆಯನ್ನು ಅಂಟಿಸಿರುವ ಸ್ಥಳದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ದೀಪಾವಳಿ ಆಚರಣೆ ಹಿನ್ನೆಲೆಯಲ್ಲಿ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರು ಭದ್ರತೆ ಹೆಚ್ಚಿಸಿದ್ದಾರೆ.  ಈ ಸಂಬಂಧ ಚಿಕ್ಕೋಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com