ಬೆಳಕಿನ ಹಬ್ಬ ದೀಪಾವಳಿ, 'ಪರಿಸರ ಸ್ನೇಹಿ ಹಸಿರು ಪಟಾಕಿ ಮಾತ್ರ ಬಳಸಿ: ಜನತೆಗೆ ಸಿಎಂ ಸಿದ್ದರಾಮಯ್ಯ ಮನವಿ

ನಾಡಿನಾದ್ಯಂತ ಬೆಳಕಿನ ಹಬ್ಬ ದೀಪಾವಳಿಯ ಸಡಗರ, ಸಂಭ್ರಮ ಮನೆ ಮಾಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಜನತೆಗೆ ಶುಭಾಶಯ ಕೋರಿದ್ದಾರೆ.
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಾಡಿನಾದ್ಯಂತ ಬೆಳಕಿನ ಹಬ್ಬ ದೀಪಾವಳಿಯ ಸಡಗರ, ಸಂಭ್ರಮ ಮನೆ ಮಾಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಜನತೆಗೆ ಶುಭಾಶಯ ಕೋರಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ  ವಿಡಿಯೋ ಸಂದೇಶ ನೀಡಿರುವ ಮುಖ್ಯಮಂತ್ರಿ,  ದೀಪಾವಳಿ ತಮ್ಮೆಲ್ಲರ ಬಾಳಿನಲ್ಲಿ ಸುಖ, ಸಮೃದ್ಧಿಯ ಹೊಸ ಬೆಳಕು ಹೊತ್ತು ತರಲಿ ಎಂದು ಹಾರೈಸಿದ್ದಾರೆ. 

ಎಲ್ಲರೂ ಪರಿಸರ ಸ್ನೇಹಿಯಾದ ಹಸಿರು ಪಟಾಕಿಗಳನ್ನು ಮಾತ್ರವೇ ಬಳಸಿ, ಪಟಾಕಿ ಹಚ್ಚುವಾಗ ಕುಟುಂಬದ ಹಿರಿಯರು ಮಕ್ಕಳ ಬಗ್ಗೆ ಜಾಗ್ರತೆ ವಹಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

 ದೀಪಾವಳಿ ಅಜ್ಞಾನದ ಅಂಧಕಾರ ತೊಡೆದು ಸುಜ್ಞಾನದ ಬೆಳಕು ಹರಿಸಲಿ. ಹಣತೆಗಳನ್ನು ಬೆಳಗಿ, ಹಸಿರು ಪಟಾಕಿಗಳನ್ನು ಮಾತ್ರವೇ ಸಿಡಿಸಿ ಸುರಕ್ಷಿತವಾಗಿ ದೀಪಾವಳಿಯನ್ನು ಆಚರಿಸಿ ಎಂದು ಮುಖ್ಯಮಂತ್ರಿ ಜನತೆಗೆ ಶುಭ ಕೋರಿದ್ದಾರೆ. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com