ಪ್ರೇಮ ಪ್ರಸ್ತಾಪವನ್ನು ತಿರಸ್ಕರಿಸಿದ್ದಕ್ಕಾಗಿ ಕಾಲೇಜು ವಿದ್ಯಾರ್ಥಿನಿ ಫೋಟೊಗಳನ್ನು ಮಾರ್ಫಿಂಗ್ ಮಾಡಿದ ವ್ಯಕ್ತಿ ಬಂಧನ

ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ತನ್ನ ಪ್ರೇಮ ಪ್ರಸ್ತಾಪವನ್ನು ತಿರಸ್ಕರಿಸಿದ ನಂತರ ಕಾಲೇಜು ವಿದ್ಯಾರ್ಥಿನಿ ಮತ್ತು ಆಕೆಯ ಸ್ನೇಹಿತೆಯರ ಮಾರ್ಫ್ ಮಾಡಿದ ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡಿದ ಆರೋಪದ ಮೇಲೆ 22 ವರ್ಷದ ಯುವಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಳಗಾವಿ: ಜಿಲ್ಲೆಯ ಖಾನಾಪುರದಲ್ಲಿ ತನ್ನ ಪ್ರೇಮ ಪ್ರಸ್ತಾಪವನ್ನು ತಿರಸ್ಕರಿಸಿದ ನಂತರ ಕಾಲೇಜು ವಿದ್ಯಾರ್ಥಿನಿ ಮತ್ತು ಆಕೆಯ ಸ್ನೇಹಿತೆಯರ ಮಾರ್ಫ್ ಮಾಡಿದ ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡಿದ ಆರೋಪದ ಮೇಲೆ 22 ವರ್ಷದ ಯುವಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಬೆಂಗಳೂರಿನ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿರುವ ಆರೋಪಿಯು ತನ್ನ ತವರು ಜಿಲ್ಲೆಯ ಯುವತಿಯನ್ನು ಕೆಲ ದಿನಗಳಿಂದ ಹಿಂಬಾಲಿಸುತ್ತಿದ್ದ. ಬಳಿಕ ಆತನ ಪ್ರೇಮ ನಿವೇದನೆಯನ್ನು ಆಕೆ ತಿರಸ್ಕರಿಸಿದ್ದಳು.

ಆತ ಆಕೆಯ ಸ್ನೇಹಿತೆಯರ ಮೂಲಕ ಆಕೆಯನ್ನು ಸಂಪರ್ಕಿಸಲು ಪ್ರಯತ್ನಿಸಿದ್ದ. ಆದರೆ, ಆಕೆ ಆತನ ಮಾತುಗಳನ್ನು ತಿರಸ್ಕರಿಸುತ್ತಲೇ ಇದ್ದಳು. ಇದರಿಂದ ಕೋಪಗೊಂಡ ಆತ, ‘ನಿನ್ನ ಮೇಲೆ ಸೇಡು ತೀರಿಸಿಕೊಳ್ಳುತ್ತೇನೆ’ ಎಂದು ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

'ಸೇಡು ತೀರಿಸಿಕೊಳ್ಳಲು ಮತ್ತು ಆಕೆಯ ಮೇಲೆ ಒತ್ತಡ ಹೇರಲು, ಆರೋಪಿ ಸಂತ್ರಸ್ತೆಯ ಫೋಟೊಗಳನ್ನು ಆಕೆಯ ಸಾಮಾಜಿಕ ಮಾಧ್ಯಮ ಖಾತೆಯಿಂದ ತೆಗೆದು ಮಾರ್ಫಿಂಗ್ ಮಾಡಿದ್ದಾನೆ'. ಫೋಟೋಶಾಪ್ ಬಳಸಿ ಮಾಡೆಲ್‌ಗಳ ನಗ್ನ ಚಿತ್ರಗಳೊಂದಿಗೆ ಆಕೆಯ ಮುಖವನ್ನು ಮಾರ್ಫ್ ಮಾಡಿದ್ದಾನೆ.

ನಂತರ ಆಕೆಯ ಹೆಸರಿನಲ್ಲಿ ನಕಲಿ ಸಾಮಾಜಿಕ ಮಾಧ್ಯಮ ಖಾತೆಯನ್ನು ಸೃಷ್ಟಿಸಿ ಈ ಮಾರ್ಫ್ ಮಾಡಿದ ಚಿತ್ರಗಳನ್ನು ಹಂಚಿಕೊಂಡಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆರೋಪಿಯು ತನ್ನ ಇಬ್ಬರು ಮಹಿಳಾ ಸ್ನೇಹಿತರಿಗೆ ಬೆದರಿಕೆ ಹಾಕಲು ಅದೇ ತಂತ್ರವನ್ನು ಬಳಸಿದ್ದಾನೆ ಎಂದು ಅವರು ಹೇಳಿದರು.
ಸಂತ್ರಸ್ತೆ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಬೆಳಗಾವಿ) ಭೀಮಾಶಂಕರ ಗುಳೇದ್ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com