
ಶಿವಮೊಗ್ಗ: ಶಿವಮೊಗ್ಗ ನಗರದ ಗುಡ್ಡೆಕಲ್ ಫ್ಲೈಓವರ್ ಬಳಿ ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದಾರೆ.
ಹತ್ಯೆಯಾದ ವ್ಯಕ್ತಿಯನ್ನು 35 ವರ್ಷದ ಮಲ್ಲೇಶ್ ಎಂದು ಗುರುತಿಸಲಾಗಿದೆ. ಮಲ್ಲೇಸ್ ನನ್ನು ಮಚ್ಚಿನಿಂದ ಕೊಚ್ಚಿದ ಆರೋಪಿಗಳು ಹತ್ಯೆ ನಂತರ ಸ್ಥಳದಿಂದ ಪರಾರಿಯಾಗಿದ್ದಾರೆ.
ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇನ್ನು ಪ್ರಕರಣ ದಾಖಲಿಸಿಕೊಂಡಿರುವ ಶಿವಮೊಗ್ಗದ ಕೋಟೆ ಠಾಣಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಮಲ್ಲೇಶ್ ಕೊಲೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ.
Advertisement