ಮಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ವ್ಯಕ್ತಿಯ ಬಂಧನ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿಯಾಗಿಸಿದ ಆರೋಪದ ಮೇಲೆ 43 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿಯಾಗಿಸಿದ ಆರೋಪದ ಮೇಲೆ 43 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯನ್ನು ಕೇಶವ್ ಎಂದು ಗುರುತಿಸಲಾಗಿದೆ. ಈತ ಬಾಲಕಿಯ ಮನೆಯವರಿಗೆ ಪರಿಚಿತನಾಗಿದ್ದು, ಆಗಾಗ್ಗೆ ಮನೆಗೆ ಭೇಟಿ ನೀಡುತ್ತಿದ್ದ ಎನ್ನಲಾಗಿದೆ. 

ಹತ್ತನೇ ತರಗತಿ ಓದುತ್ತಿರುವ ಬಾಲಕಿ ಗರ್ಭಿಣಿಯಾದ ನಂತರ ಲೈಂಗಿಕ ಕಿರುಕುಳದ ವಿಷಯ ಮನೆಯವರಿಗೆ ಗೊತ್ತಾಗಿದೆ. ಈ ಸಂಬಂಧ ಬಾಲಕಿಯ ತಾಯಿ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಮುಂದಿನ ತನಿಖೆ ಕೈಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com