ವಿದ್ಯುತ್‌ ಕಳ್ಳ ಎಚ್‌ಡಿಕೆ ಪೋಸ್ಟರ್‌ ಪ್ರಕರಣ: ಮೂವರ ವಿರುದ್ಧ ಎಫ್ಐಆರ್ ದಾಖಲು

ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಅವರ ವಿರುದ್ಧ ಅವಹೇಳನಕಾರಿ ಪೋಸ್ಟರ್‌ ಅಂಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಂಪುರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.
ಜೆಡಿಎಸ್ ಕಚೇರಿ ಮೇಲೆ ಪೋಸ್ಟರ್ ಅಂಟಿಸಿರುವುದು.
ಜೆಡಿಎಸ್ ಕಚೇರಿ ಮೇಲೆ ಪೋಸ್ಟರ್ ಅಂಟಿಸಿರುವುದು.

ಬೆಂಗಳೂರು: ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಅವರ ವಿರುದ್ಧ ಅವಹೇಳನಕಾರಿ ಪೋಸ್ಟರ್‌ ಅಂಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಂಪುರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಜೆಡಿಎಸ್‌ ನಗರ ಘಟಕದ ಅಧ್ಯಕ್ಷ ಎಚ್‌.ಎಂ.ರಮೇಶ್‌ಗೌಡ ಅವರು ನೀಡಿದ ದೂರಿನ ಮೇರೆಗೆ ಬಿಂದು, ನವೀನ್‌ಗೌಡ ಸೇರಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.

‘ನವೆಂಬರ್‌ 14ರಂದು ರಾತ್ರಿ 10 ಗಂಟೆ ಸುಮಾರಿಗೆ ಆಟೊದಲ್ಲಿ ಬಂದ ನಾಲ್ವರು ಜೆಡಿಎಸ್‌ ಪಕ್ಷ ಹಾಗೂ ಪಕ್ಷದ ಮುಖಂಡರ ವಿರುದ್ಧ ಘೋಷಣೆ ಕೂಗಿದ್ದಾರೆ. ಪ್ರಶ್ನಿಸಲು ಮುಂದಾದ ಭದ್ರತಾ ಸಿಬ್ಬಂದಿ ಮಹಾದೇವ್‌ ರುವಾನಿ ಅವರನ್ನು ನಿಂದಿಸಿ ಹಲ್ಲೆ ನಡೆಸಿ ಪರಾರಿಯಾಗಿದ್ಧಾರೆ. ರುವಾನಿಗೆ ಪ್ರಾಣ ಬೆದರಿಕೆ ಹಾಕಿದ್ದಾರೆ. ನವೀನ್‌ಗೌಡ ಹಾಗೂ ಬಿಂದು ಸಾಮಾಜಿಕ ಜಾಲತಾಣದಲ್ಲೂ ಕೀಳು ರೀತಿಯಲ್ಲಿ ಪೋಸ್ಟ್‌ ಹರಿಯಬಿಡುತ್ತಿದ್ದಾರೆ’ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಮಾಹಿತಿ ತಿಳಿದು ಸ್ಥಳಕ್ಕೆ ತೆರಳಿದ್ದ ಪೊಲೀಸರು ಮಂಗಳವಾರ ರಾತ್ರಿಯೇ ಪೋಸ್ಟರ್‌ ತೆರವುಗೊಳಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com