ಅಕ್ರಮ ಗಣಿಗಾರಿಕೆ ಪ್ರಕರಣ: ಎಸ್ಐಟಿ ತನಿಖೆಯ ಅವಧಿ ವಿಸ್ತರಿಸಲು ಸಚಿವ ಸಂಪುಟ ಅಸ್ತು

ಹೊಸ ಇಂದಿರಾ ಕ್ಯಾಂಟೀನ್ ಗಳ ಸ್ಥಾಪನೆ ಮತ್ತು ಅಕ್ರಮ ಗಣಿಗಾರಿಕೆ ಪ್ರಕರಣದ ತನಿಖೆ ನಿಧಾನಗತಿಯಲ್ಲಿ ಸಾಗುತ್ತಿರುವುದು ಸೇರಿದಂತೆ 16 ವಿಷಯಗಳ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಸಚಿವ ಎಚ್. ಕೆ. ಪಾಟೀಲ್ ಅವರು ಗುರುವಾರ ಹೇಳಿದ್ದಾರೆ.
ಗಣಿಗಾರಿಕೆ ಸಾಂದರ್ಭಿಕ ಚಿತ್ರ
ಗಣಿಗಾರಿಕೆ ಸಾಂದರ್ಭಿಕ ಚಿತ್ರ

ಬೆಂಗಳೂರು: ಹೊಸ ಇಂದಿರಾ ಕ್ಯಾಂಟೀನ್ ಗಳ ಸ್ಥಾಪನೆ ಮತ್ತು ಅಕ್ರಮ ಗಣಿಗಾರಿಕೆ ಪ್ರಕರಣದ ತನಿಖೆ ನಿಧಾನಗತಿಯಲ್ಲಿ ಸಾಗುತ್ತಿರುವುದು ಸೇರಿದಂತೆ 16 ವಿಷಯಗಳ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಸಚಿವ ಎಚ್. ಕೆ. ಪಾಟೀಲ್ ಅವರು ಗುರುವಾರ ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದಾರಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್‌ಕೆ ಪಾಟೀಲ್ ಅವರು, ಇಂದಿನ ಸಚಿವ ಸಂಪುಟದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಗೋದಾಮುಗಳಿಗೂ ಸಿಸಿಟಿವಿ ಅಳವಡಿಸಲು ತೀರ್ಮಾನಿಸಲಾಗಿದೆ ಎಂದರು.

ಅಂಡರ್ ಗ್ರೌಂಡ್ ಡ್ರೈನೇಜ್‌(ಯುಜಿಡಿ)ಗೆ ಸಂಬಂಧಿಸಿದ ಸುಮಾರು 16 ವಿಷಯಗಳ ಬಗ್ಗೆ ನಾವು ವಿವರವಾಗಿ ಚರ್ಚಿಸಿದ್ದೇವೆ. ಯುಜಿಡಿಗೆ ಹೆಚ್ಚುವರಿ ಅನುದಾನ ನೀಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

"ಅಕ್ರಮ ಗಣಿಗಾರಿಕೆ ತನಿಖೆ ನಿಧಾನಗತಿಯಲ್ಲಿ ಸಾಗುತ್ತಿರುವ ಬಗ್ಗೆ ಮತ್ತು ಚಾರ್ಟ್ ಶೀಟ್‌ಗಳನ್ನು ಸಲ್ಲಿಸದಿರುವ ಬಗ್ಗೆ ಸಂಪುಟ ಸಭೆ ತೀವ್ರ ಕಳವಳ ವ್ಯಕ್ತಪಡಿಸಿದೆ. ನಾವು ಶೀಘ್ರವಾಗಿ ಅದನ್ನು ಪರಿಶೀಲಿಸಬೇಕು ಮತ್ತು ತನಿಖೆ ಚುರುಕುಗೊಳಿಸಲು ಯಾವ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬ ಬಗ್ಗೆ ಚರ್ಚಿಸಿದ್ದೇವೆ ಎಂದರು.

ಅಕ್ರಮ ಗಣಿಗಾರಿಕೆಯ ತನಿಖೆಯು ಒಂದು ಹಂತಕ್ಕೆ ಬಂದಿರುವುದರಿಂದ ಲೋಕಾಯುಕ್ತ ವಿಶೇಷ ತನಿಖಾ ತಂಡದ(ಎಸ್‌ಐಟಿ) ಅಧಿಕಾರಾವಧಿಯನ್ನು ಜೂನ್ 30, 2024 ರವರೆಗೆ ವಿಸ್ತರಿಸಲು ಸಂಪುಟ ಸಭೆ ನಿರ್ಧಾರ ಕೈಗೊಂಡಿದೆ, ಜುಲೈ 1, 2022 ರಿಂದ ಎರಡು ವರ್ಷಗಳಲ್ಲಿ 171 ಪ್ರಕರಣಗಳ ಪ್ರಾಥಮಿಕ ತನಿಖೆಯನ್ನೂ ನಡೆಸದೆ ನಿಂತಿದೆ ಎಂದು ಸಚಿವರು ತಿಳಿಸಿದರು.

2008ರಿಂದ 2011ರವರೆಗೆ ನಡೆದಿರುವ ಅಕ್ರಮ ಗಣಿಗಾರಿಕೆ ಹಾಗೂ 2013, 14, 15ರಲ್ಲಿ ಪ್ರಕರಣ ದಾಖಲಾಗಿರುವ ಬಗ್ಗೆ ಸಚಿವ ಸಂಪುಟ ಗಮನ ಸೆಳೆದಿದೆ. ಇದರಲ್ಲಿ ತನಿಖೆ ನಿಧಾನಗತಿಯಲ್ಲಿದೆ. ಇನ್ನೂ 188 ಇಂದಿರಾ ಕ್ಯಾಂಟೀನ್‌ಗಳು ಮತ್ತು 4ಜಿ ವಿನಾಯಿತಿ ನೀಡಲು ಸಂಪುಟ ಸಭೆ ನಿರ್ಧರಿಸಿದೆ ಎಂದು ಸಚಿವರು ತಿಳಿಸಿದ್ದಾರೆ.

ಸಂಪುಟ ಸಭೆಯ ಇತರ ನಿರ್ಧಾರಗಳು

  • NGT ಮಾರ್ಗಸೂಚಿ ಪ್ರಕಾರ 17 ಪಟ್ಟಣಗಳಲ್ಲಿ ಯುಜಿಡಿ ಅಳವಡಿಸಲು ಮತ್ತು ನವೀಕರಿಸಲು 750 ಕೋಟಿ ರೂ. ಅನುಮೋದನೆ
  • 107 ಅಭಿವೃದ್ಧಿ ಯೋಜನೆಗಳನ್ನು ಅನುಷ್ಠಾನಗೊಳಿಸಿದ ನಂತರ ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಹೆಚ್ಚುವರಿ 44 ಕೋಟಿ ರೂ. ಬಳಸಿಕೊಳ್ಳಲು ಸಂಪುಟ ಅಸ್ತು.
  • ಶ್ರೀರಂಗಪಟ್ಟಣ ಮತ್ತು ನಂಜನಗೂಡು ತಾಲೂಕುಗಳ ಸ್ಥಳೀಯ ಪ್ರದೇಶ ಯೋಜನೆಯಡಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸುವುದು
  • 36 ಕೋಟಿ ರೂ. ವೆಚ್ಚದಲ್ಲಿ 4,000 ದ್ವಿಚಕ್ರ ವಾಹನ ಖರೀದಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಅನುಮತಿ
  • ಅಮೃತ್ 2.0 ಯೋಜನೆಯಡಿ ಗದಗ-ಬೆಟಗೇರಿ ನಗರಸಭೆಯಲ್ಲಿ ಕುಡಿಯುವ ನೀರಿನ ಯೋಜನೆಗೆ 34 ಕೋಟಿ ರೂ. ಅನುಮೋದನೆ
  • ಮಾಜಿ ಶಾಸಕ ಶ್ರೀಕಾಂತ್ ಕುಲಕರ್ಣಿ ಅವರಿಗೆ ಬಿಡಿಎ ನೀಡಿದ್ದ ‘ಜಿ’ ಕೆಟಗರಿ ವಸತಿ ನಿವೇಶನಗಳನ್ನು ಮಾರಾಟ ಮಾಡಲು ಅನುಮತಿ.
  • ಬಿಬಿಎಂಪಿ ವ್ಯಾಪ್ತಿಯನ್ನು ಹೊರತುಪಡಿಸಿ ಇತರೆ ಕಡೆ 154 ಕೋಟಿ ರೂ. ವೆಚ್ಚದಲ್ಲಿ 188 ಇಂದಿರಾ ಕ್ಯಾಂಟೀನ್‌ಗಳ ಸ್ಥಾಪನೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com