ಡೀಪ್‌ಫೇಕ್ ಎಫೆಕ್ಟ್: ಪ್ರತ್ಯೇಕ ಸಹಾಯವಾಣಿ ಆರಂಭಿಸಿದ ಬೆಂಗಳೂರು ಪೊಲೀಸರು

ಡೀಪ್ ಫೇಕ್ ವಿಡಿಯೋ ಮೂಲಕ ನಟಿಯರು ಸೇರಿದಂತೆ ಹಲವು ಮಹಿಳೆಯರ ಮಾನ ಕಳೆಯುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಬೆಂಗಳೂರು ಪೊಲೀಸರು ಈ ಸಂಬಂಧ ಪ್ರತ್ಯೇಕ ಸಹಾಯವಾಣಿಯನ್ನು ಆರಂಭಿಸಿದ್ದಾರೆ.
ಪ್ರತ್ಯೇಕ ಸಹಾಯವಾಣಿ
ಪ್ರತ್ಯೇಕ ಸಹಾಯವಾಣಿ

ಬೆಂಗಳೂರು: ಡೀಪ್ ಫೇಕ್ ವಿಡಿಯೋ ಮೂಲಕ ನಟಿಯರು ಸೇರಿದಂತೆ ಹಲವು ಮಹಿಳೆಯರ ಮಾನ ಕಳೆಯುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಬೆಂಗಳೂರು ಪೊಲೀಸರು ಈ ಸಂಬಂಧ ಪ್ರತ್ಯೇಕ ಸಹಾಯವಾಣಿಯನ್ನು ಆರಂಭಿಸಿದ್ದಾರೆ.

"ಹಿಂಜರಿಕೆ ಬೇಡ, ವೇಗವಾಗಿ ಕೆಲಸ ಮಾಡಿ! ನೀವು ಅಥವಾ ನಿಮಗೆ ತಿಳಿದಿರುವ ಯಾರಾದರೂ ಡೀಪ್‌ಫೇಕ್‌ಗೆ ಒಳಗಾಗಿದ್ದರೆ 1930 ಕರೆ ಮಾಡಿ ಬೆಂಗಳೂರು ನಗರ ಪೊಲೀಸರನ್ನು ಸಂಪರ್ಕಿಸಿ. ಡಿಜಿಟಲ್ ವಂಚನೆಯಿಂದ ನಿಮ್ಮನ್ನು ರಕ್ಷಿಸಲು ನಾವು ನಿಮ್ಮೊಂದಿಗಿದ್ದೇವೆ” ಎಂದು ಬೆಂಗಳೂರು ನಗರ ಪೊಲೀಸರು ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಘೋಷಿಸಿದ್ದಾರೆ. 

ಈ ಸಂಬಂಧ ಪೊಲೀಸ್ ಇಲಾಖೆ ಪೋಸ್ಟರ್ ಕೂಡ ಬಿಡುಗಡೆ ಮಾಡಿದ್ದು, ಯಾರಾದರೂ ಡೀಪ್ ಫೇಕ್ ವಿಡಿಯೋಗಳಿಂದ ನೊಂದಿದ್ದರೆ ಸಹಾಯವಾಣಿಗೆ ಕರೆ ಮಾಡುವಂತೆ ಮನವಿ ಮಾಡಿದ್ದಾರೆ.

ನಟಿಯರಾದ ರಶ್ಮಿಕಾ ಮಂದಣ್ಣ, ಕತ್ರಿನಾ ಕೈಫ್ ಮತ್ತು ಕಾಜೋಲ್ ಅವರ ಡೀಪ್‌ಫೇಕ್ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುವ ಮೂಲಕ ತೀವ್ರ ಆತಂಕ ಸೃಷ್ಟಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com