ಗೆದ್ದು ಬನ್ನಿ, ಎಲ್ಲರೂ ಹಾರೈಸೋಣ, ಪ್ರಾರ್ಥಿಸೋಣ: ಟೀಂ ಇಂಡಿಯಾಗೆ ಶುಭ ಕೋರಿದ ರಾಜಕೀಯ ನಾಯಕರು

ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಭಾನುವಾರ ಸೆಣಸಾಟ ನಡೆಸಲಿವೆ. ಪಂದ್ಯದಲ್ಲಿ ಭಾರತ ಗೆದ್ದು, ವಿಶ್ವಕಪ್​ ಮುಡಿಗೇರಿಸಿಕೊಳ್ಳಬೇಕು ಎಂದು ರಾಜಕೀಯ ನಾಯಕರು ಶುಭ ಹಾರೈಸುತ್ತಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಭಾನುವಾರ ಸೆಣಸಾಟ ನಡೆಸಲಿವೆ. ಪಂದ್ಯದಲ್ಲಿ ಭಾರತ ಗೆದ್ದು, ವಿಶ್ವಕಪ್​ ಮುಡಿಗೇರಿಸಿಕೊಳ್ಳಬೇಕು ಎಂದು ರಾಜಕೀಯ ನಾಯಕರು ಶುಭ ಹಾರೈಸುತ್ತಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವಕಪ್ ಕ್ರಿಕೆಟ್ ಪಂದ್ಯಾಕೂಟದ ಫೈನಲ್ ಪಂದ್ಯದಲ್ಲಿ ಭಾರತೀಯರ ಗೆಲುವನ್ನು ಸಂಭ್ರಮಿಸಲು ನಾನು ಎಲ್ಲರಂತೆ ಕಾತುರನಾಗಿದ್ದೇನೆ. ಬೌಲಿಂಗ್, ಬ್ಯಾಟಿಂಗ್, ಫೀಲ್ಡಿಂಗ್ ಎಲ್ಲಾ ವಿಭಾಗಗಳಲ್ಲೂ ನಮ್ಮದು ಒಂದು ಪರಿಪೂರ್ಣ ತಂಡವಾಗಿರುವುದರಿಂದ ಈ ಬಾರಿಯ ವಿಶ್ವಕಪ್ ಭಾರತದ ಮಡಿಲು ಸೇರುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕ್ರಿಕೆಟ್ ವಿಶ್ವಕಪ್ ಫೈನಲ್‌ನಲ್ಲಿ ಇಂದು ಆಸ್ಟ್ರೇಲಿಯಾವನ್ನು ಎದುರಿಸಲು ತಯಾರಿ ನಡೆಸುತ್ತಿರುವ ಟೀಂ ಇಂಡಿಯಾಗೆ ಶುಭ ಹಾರೈಸುತ್ತೇನೆ. ಈ ಅಂತಿಮ ಅದ್ಭುತ ಪ್ರದರ್ಶನಕ್ಕಾಗಿ ಇಡೀ ರಾಷ್ಟ್ರವು ಕುತೂಹಲದಿಂದ ಕಾಯುತ್ತಿದ್ದು, ಟೀಂ ಇಂಡಿಯಾ ಉತ್ಸಾಹ, ನಿರ್ಣಯ ಮತ್ತು ಅಚಲವಾದ ಮನೋಭಾವದಿಂದ ಆಟವಾಡಲಿ. ನಮ್ಮ ಹುಡುಗರ ಸಂಕಲ್ಪ ಮತ್ತು ಧೈರ್ಯ ಅವರನ್ನು ವಿಜಯದತ್ತ ಕೊಂಡೊಯ್ಯಲಿ ಎಂದು ಡಿಕೆ.ಶಿವಕುಮಾರ್ ಅವರು ಹೇಳಿದ್ದಾರೆ.

ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್'ಡಿ.ಕುಮಾರಸ್ವಾಮಿಯವರು ಟ್ವೀಟ್ ಮಾಡಿ, ವಿಶ್ವಕಪ್‌ ಸರಣಿಯಲ್ಲಿ ಈವರೆಗೆ ಎಲ್ಲ ಪಂದ್ಯಗಳನ್ನು ಜಯಿಸಿ ಅಜೇಯವಾಗಿರುವ ಭಾರತ ತಂಡ ವಿಶ್ವಕಪ್‌ ಗೆಲ್ಲಬೇಕು. ನಮ್ಮೆಲ್ಲರ ಹಾರೈಕೆ, ಕನಸುಗಳೆಲ್ಲವೂ ಟೀಂ ಇಂಡಿಯಾ ಜತೆಯಲ್ಲಿವೆ. ಭಾರತ ಗೆದ್ದು ಬರಲಿ. ಎಲ್ಲರೂ ಹಾರೈಸೋಣ, ಪ್ರಾರ್ಥಿಸೋಣ ಎಂದು ಹೇಳಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ.ವಿಜಯೇಂದ್ರ ಅವರು ಟ್ವೀಟ್ ಮಾಡಿ, “ಇಂದಿಡುವ ಹೆಜ್ಜೆ ವಿಶ್ವ ವಿಜಯದ ಹೆಜ್ಜೆ’’ ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ 2023 ಫೈನಲ್ ನಲ್ಲಿ "ಭಾರತ ವಿಜಯ ದುಂದುಭಿ ಬಾರಿಸಲಿ. ಶತಕೋಟಿ ಭಾರತೀಯರ ನಿರೀಕ್ಷೆ, ಅಪೇಕ್ಷೆಗಳು ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಅರಳಲಿ, ಜಯದ ಘೋಷ ಜಗದಗಲ ಮೊಳಗಲಿ, ಭಾರತದ  ಗೆಲುವಿನ ಬಾವುಟ ವಿಶ್ವಭೂಪಟದಲ್ಲಿ ಮುಗಿಲೆತ್ತರಕೆ ಹಾರಲಿ ಎಂದು ಹೇಳಿದ್ದಾರೆ.

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಟ್ವೀಟ್ ಮಾಡಿ, ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಈ ಬಾರಿ ವಿಶ್ವ ಕಪ್ ಗೆಲ್ಲುವ ಫೆವರಿಟ್ ತಂಡವಾಗಿದೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ವಿಶ್ವ ಕಪ್ ಕ್ರಿಕೆಟ್ ಫೈನಲ್ ಪಂದ್ಯ ನೋಡಲು ಕ್ರಿಕೆಟ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಪ್ರತಿಭಾವಂತ ಆಟಗಾರರ ಸಂಘಟಿತ ಹೋರಾಟದಿಂದ ಭಾರತ ತಂಡ ವಿಶ್ವಕಪ್ ಗೆಲ್ಲುತ್ತದೆ ಎನ್ನುವ ವಿಶ್ವಾಸ ನನಗಿದೆ. ಭಾರತ ತಂಡ ಕ್ರಿಕೆಟ್ ಲೋಕದ ವಿಶ್ವ ಚಾಂಪಿಯನ್ ಆಗಲಿ ಎಂದು ಶುಭ ಹಾರೈಸುತ್ತೇನೆ. ಗುಡ್ ಲಕ್ ಟೀಮ್ ಇಂಡಿಯಾ ಎಂದು ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಟ್ವೀಟ್ ಮಾಡಿ,  ಭಾರತ ಆಸ್ಟ್ರೇಲಿಯಾ ನಡುವಿನ ವಿಶ್ವ ಕಪ್ ಕ್ರಿಕೆಟ್ ಪೈನಲ್ ಪಂದ್ಯ ನೋಡಲು ಇಡೀ ಜಗತ್ತಿನ ಕ್ರಿಕೆಟ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ನಾನೂ ಫೈನಲ್ ಪಂದ್ಯ ನೋಡಲು ಕಾತುರನಾಗಿದ್ದೇನೆ. ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಈ ಬಾರಿ ವಿಶ್ವ ಕಪ್ಬಗೆಲ್ಲುವ ಫೆವರಿಟ್ ತಂಡವಾಗಿದೆ. ರನ್ ಮಷಿನ್ ವಿರಾಟ್ ಕೋಹ್ಲಿಯ ರನ್ ಹೊಳೆ, ಮೊಹಮದ್  ಶಮಿನ ಬಾಲಿಂಗ್ ದಾಳಿ, ಸಂಘಟಿತ ಹೋರಾಟದಿಂದ ಭಾರತ ತಂಡ ಮೂರನೇ ಬಾರಿ ವಿಶ್ವಕಪ್ ಎತ್ತಿ ಹಿಡಿಯುತ್ತದೆ ಎನ್ನುವ ಅಚಲ ವಿಶ್ವಾಸ ನನಗಿದೆ. ಭಾರತ ಕ್ರಿಕೆಟ್ ತಂಡ ಜಯಶಾಲಿಯಾಗಿ ಮೂರನೇ ಬಾರಿ ಕಿಕೇಟ್ ಲೋಕದ ವಿಶ್ವ ಚಾಂಪಿಯನ್ ಆಗಲಿ ಎಂದು ಶುಭ ಹಾರೈಸುತ್ತೇನೆ. ಗುಡ್ ಲಕ್ ಟೀಮ್ ಇಂಡಿಯಾ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com