ವಿದ್ಯುತ್ ತಂತಿ ತುಳಿದು ತಾಯಿ-ಮಗು ಸಾವು ಪ್ರಕರಣ: 5 ಅಧಿಕಾರಿಗಳು ಅಮಾನತು, ಇಬ್ಬರಿಗೆ ಕಾರಣ ಕೇಳಿ ನೋಟಿಸ್ ಜಾರಿ

ವಿದ್ಯುತ್ ತಂತಿ ತುಳಿದು ತಾಯಿ ಮತ್ತು ಮಗು ಸಾವಿಗೀಡಾದ ಪ್ರಕರಣದಲ್ಲಿ, ಬೆಸ್ಕಾಮ್ ನ 5 ಅಧಿಕಾರಿಗಳನ್ನು  ಅಮಾನತುಗೊಳಿಸಲಾಗಿದ್ದು, ಇಬ್ಬರು ಹಿರಿಯ ಅಧಿಕಾರಿಗಳಿಗೆ ಕಾರಣ ಕೇಳಿ ನೊಟೀಸ್ ಜಾರಿಗೊಳಿಸಲಾಗಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ವಿದ್ಯುತ್ ತಂತಿ ತುಳಿದು ತಾಯಿ ಮತ್ತು ಮಗು ಸಾವಿಗೀಡಾದ ಪ್ರಕರಣದಲ್ಲಿ, ಬೆಸ್ಕಾಮ್ ನ 5 ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದ್ದು, ಇಬ್ಬರು ಹಿರಿಯ ಅಧಿಕಾರಿಗಳಿಗೆ ಕಾರಣ ಕೇಳಿ ನೊಟೀಸ್ ಜಾರಿಗೊಳಿಸಲಾಗಿದೆ. 

ಈ ನಡುವೆ ಬಂಧನಕ್ಕೆ ಒಳಗಾಗಿದ್ದ ಅಧಿಕಾರಿಗಳನ್ನು ಸ್ಟೇಷನ್ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಕಾಡುಗೋಡಿ ವಿಭಾಗದ ಬೆಸ್ಕಾಮ್, ಪ್ರಾಥಮಿಕ ಹಂತದ ವಿಚಾರಣೆಯ ನಂತರ ಅಧಿಕಾರಿಗಳನ್ನು ಅಮಾನತುಗೊಳಿಸುವ ನಿರ್ಧಾರ ಕೈಗೊಂಡಿದ್ದಾರೆ.

ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, 23 ವರ್ಷದ ಸೌಂದರ್ಯ ತಮಿಳುನಾಡಿನಿಂದ ವಾಪಸ್ಸಾಗಿ ಮನೆಗೆ ತೆರಳುತ್ತಿದ್ದಾಗ, ಈ ದುರ್ಘಟನೆ ಸಂಭವಿಸಿದೆ. ಈ ಪ್ರದೇಶದಲ್ಲಿ ಶನಿವಾರ ರಾತ್ರಿ ಪಾದಚಾರಿ ಮಾರ್ಗದಲ್ಲಿ ವಿದ್ಯುತ್ ತಂತಿ ತುಂಡಾಗಿ ಬಿದ್ದಿದ್ದರೂ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡಿರಲಿಲ್ಲ ಎಂದು ಆರೋಪಿಸಲಾಗಿದೆ. ಘಟನೆ ನಡೆದ ಸಂದರ್ಭದಲ್ಲಿ ಮೃತ ಮಹಿಳೆಯ ಪತಿ ಪತ್ನಿ ಹಾಗೂ ಮಗುವನ್ನು ರಕ್ಷಿಸಲು ಯತ್ನಿಸಿದರಾದರೂ ಅದು ಸಾಧ್ಯವಾಗಲಿಲ್ಲ. 

ಇಂಧನ ಸಚಿವ ಕೆಜೆ ಜಾರ್ಜ್ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಅಧಿಕಾರಿಗಳ ಅಮಾನತಿಗೆ ಆದೇಶಿಸಿದ್ದಾರೆ, ಘಟನೆ ಬಗ್ಗೆ ವಿಸ್ತೃತ ತನಿಖೆ ನಡೆಸಲಾಗುವುದು ಎಂದು ಬೆಸ್ಕಾಮ್ ಹೇಳಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com