ಚಿಕ್ಕಮಗಳೂರು: ಬಿರಿಯಾನಿ ಸೇವಿಸಿ 17 ಮಂದಿ ಅಸ್ವಸ್ಥ

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಮರವಂಜಿ ಗ್ರಾಮದ ಮನೆಯೊಂದರಲ್ಲಿ ನಡೆದ ಕುಟುಂಬ ಸಮಾರಂಭದಲ್ಲಿ ಬಿರಿಯಾನಿ ಸೇವಿಸಿದ 17 ಮಂದಿ ಅಸ್ವಸ್ಥಗೊಂಡಿರುವ ಘಟನೆ ಭಾನುವಾರ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಕಡೂರು: ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಮರವಂಜಿ ಗ್ರಾಮದ ಮನೆಯೊಂದರಲ್ಲಿ ನಡೆದ ಕುಟುಂಬ ಸಮಾರಂಭದಲ್ಲಿ ಬಿರಿಯಾನಿ ಸೇವಿಸಿದ 17 ಮಂದಿ ಅಸ್ವಸ್ಥಗೊಂಡಿರುವ ಘಟನೆ ಭಾನುವಾರ ನಡೆದಿದೆ.

ಮರವಂಜಿ ಗ್ರಾಮದಲ್ಲಿ ಭಾನುವಾರ ಕಾರ್ಯಕ್ರಮ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ತಯಾರಿಸಿದ ಬಿರಿಯಾನಿ ಸೇವಿಸಿದ ಕೆಲವರಲ್ಲಿ ಸೋಮವಾರ ವಾಂತಿ-ಭೇಧಿ ಕಾಣಿಸಿಕೊಂಡು ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಗ್ರಾಮಸ್ಥರು ಅವರನ್ನು ಆಂಬುಲೆನ್ಸ್‌ ಮೂಲಕ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಈ ವೇಳೆ ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಎಸ್.ಎನ್. ಉಮೇಶ್ ಹಾಗೂ ಸಿಬ್ಬಂದಿ ತಪಾಸಣೆ ನಡೆಸಿ ಚಿಕಿತ್ಸೆ ನೀಡಿದರು.

ದಾಖಲಾದವರ ಪೈಕಿ 8 ಪುರುಷರು, 9 ಮಹಿಳೆಯರು ಸೇರಿದ್ದಾರೆ. ಆಸ್ಪತ್ರೆಯ ಮೂರು ಕೊಠಡಿಯಲ್ಲಿ ಅಸ್ವಸ್ಥರನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡಲಾಗುತ್ತಿದೆ. ಯಾರಿಗೂ ಪ್ರಾಣಾಪಾಯವಿಲ್ಲ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಈ ನಡುವೆ ಶಾಸಕ ಕೆ.ಎಸ್. ಆನಂದ್ ಆಸ್ಪತ್ರೆಗೆ ಭೇಟಿ ನೀಡಿ ಅಸ್ಪಸ್ಥಗೊಂಡ ರೋಗಿಗಳ ಬಗ್ಗೆ ಆಸ್ಪತ್ರೆಯ ವೈದ್ಯರಿಂದ ಮಾಹಿತಿ ಪಡೆದುಕೊಂಡರು,

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com