ಬರ ಪರಿಸ್ಥಿತಿಯ ಬಗ್ಗೆ ವರದಿ ನೀಡಿ ತಿಂಗಳಾಗಿದ್ದರೂ ಮೋದಿ ಸರ್ಕಾರ ನಯಾಪೈಸೆ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ

ಬರ ಪರಿಸ್ಥಿತಿಯ ಬಗ್ಗೆ ರಾಜ್ಯ ಸರ್ಕಾರ ಕೇಂದ್ರಕ್ಕೆ ವರದಿ ನೀಡಿ ಒಂದು ತಿಂಗಳಾಗಿದೆ. ಕೇಂದ್ರ ಸರ್ಕಾರದ ಬರ ಅಧ್ಯಯನ ಕೇಂದ್ರ ಬಂದು ಹೋಗಿ ಒಂದು ತಿಂಗಳ ಮೇಲಾಗಿದ್ದರೂ ಇಂದಿನವರೆಗೆ ಒಂದು ಪೈಸೆಯನ್ನೂ ಕೊಟ್ಟಿಲ್ಲ. ಎನ್.ಡಿ.ಆರ್‍ಎಫ್ ಮಾರ್ಗಸೂಚಿಯಲ್ಲಿ ಮಾರ್ಪಾಡು ತರಲು ಬರೆದಿರುವ ಪತ್ರಕ್ಕೂ ಕೆಂದ್ರದಿಂದ ಉತ್ತರ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Updated on

ವಿಜಯಪುರ: ಬರ ಪರಿಸ್ಥಿತಿಯ ಬಗ್ಗೆ ರಾಜ್ಯ ಸರ್ಕಾರ ಕೇಂದ್ರಕ್ಕೆ ವರದಿ ನೀಡಿ ಒಂದು ತಿಂಗಳಾಗಿದೆ. ಕೇಂದ್ರ ಸರ್ಕಾರದ ಬರ ಅಧ್ಯಯನ ಕೇಂದ್ರ ಬಂದು ಹೋಗಿ ಒಂದು ತಿಂಗಳ ಮೇಲಾಗಿದ್ದರೂ ಇಂದಿನವರೆಗೆ ಒಂದು ಪೈಸೆಯನ್ನೂ ಕೊಟ್ಟಿಲ್ಲ. ಎನ್.ಡಿ.ಆರ್‍ಎಫ್ ಮಾರ್ಗಸೂಚಿಯಲ್ಲಿ ಮಾರ್ಪಾಡು ತರಲು ಬರೆದಿರುವ ಪತ್ರಕ್ಕೂ ಕೆಂದ್ರದಿಂದ ಉತ್ತರ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಕಿಡಿಕಾರಿದರು.
 
ಡಿಸಿಸಿ ಬ್ಯಾಂಕ್ ಆವರಣದಲ್ಲಿ ಸೋಮವಾರ ನಡೆದ 70ನೇ ಸಹಕಾರಿ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸುವ ಮುನ್ನ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದರು.

ಬರಗಾಲ ಬಂದಾಗ 150 ದಿನಗಳ ಕೆಲಸ ನೀಡುವುದು ಕಡ್ಡಾಯ. ಇದಕ್ಕೆ ಕೇಂದ್ರ ಸರ್ಕಾರ ಅನುಮತಿ ಕೊಡಬೇಕು. ಅನುಮತಿ ಕೋರಿ ನಾವು ಪತ್ರ ಬರೆದಿದ್ದು ಇಂದಿನವರೆಗೂ ಉತ್ತರ ಬಂದಿಲ್ಲ ಎಂದು ಹೇಳಿದರು.

ಬರ ಪರಿಸ್ಥಿತಿಯ ಬಗ್ಗೆ ರಾಜ್ಯ ಸರ್ಕಾರ ಕೇಂದ್ರಕ್ಕೆ ವರದಿ ನೀಡಿ ಒಂದು ತಿಂಗಳಾಗಿದೆ. ಕೇಂದ್ರ ಸರ್ಕಾರದ ಬರ ಅಧ್ಯಯನ ಕೇಂದ್ರ ಬಂದು ಹೋಗಿ ಒಂದು ತಿಂಗಳ ಮೇಲಾಗಿದ್ದರೂ ಇಂದಿನವರೆಗೆ ಒಂದು ಪೈಸೆಯನ್ನೂ ಕೊಟ್ಟಿಲ್ಲ. ಎನ್.ಡಿ.ಆರ್‍ಎಫ್ ಮಾರ್ಗಸೂಚಿಯಲ್ಲಿ ಮಾರ್ಪಾಡು ತರಲು ಬರೆದಿರುವ ಪತ್ರಕ್ಕೂ ಕೆಂದ್ರದಿಂದ ಉತ್ತರವಿಲ್ಲ ಎಂದು ತಿಳಿಸಿದರು.

ಬಳಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಬರ ಪರಿಹಾರ ಕಾಮಗಾರಿ ಕೈಗೆತ್ತಿಕೊಳ್ಳಲು ರಾಜ್ಯದ ಜಿಲ್ಲಾಧಿಕಾರಿಗಳ ಖಾತೆಗೆ ಸರ್ಕಾರ 800 ಕೋಟಿ ರೂ ನೀಡಲಾಗಿದೆ. ''ರೈತರಿಗೆ ಪರಿಹಾರ ನೀಡಲು ಸರಕಾರ ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದೆ. ಜನರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಡಿಸಿ ಮತ್ತು ಜಿಪಂ ಸಿಇಒಗಳಿಗೂ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ. ಅವರಿಗೆ MGNREGA ಅಡಿಯಲ್ಲಿ ಉದ್ಯೋಗಗಳನ್ನು ಒದಗಿಸಬೇಕು. ಜೊತೆಗೆ ರೈತರು ಮೇವಿನ ಕೊರತೆ ಎದುರಿಸುತ್ತಿದ್ದಾರೆ. ಈ ಮೂರು ಸಮಸ್ಯೆಗಳನ್ನು ಪರಿಹರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.

ಈ ಸಂದರ್ಭ ಉಪಸ್ಥಿತರಿದ್ದ ವಿಜಯಪುರ ಹಾಗೂ ಬಾಗಲಕೋಟ ಬಿಜೆಪಿ ಸಂಸದರಾದ ರಮೇಶ ಜಿಗಜಿಣಗಿ, ಪಿ.ಸಿ.ಗದ್ದಿಗೌಡರ ಅವರು ಬರ ಪರಿಹಾರ ಕಾಮಗಾರಿಗೆ ಹಣ ಮಂಜೂರು ಮಾಡಲು ಕೇಂದ್ರದ ಗಮನಕ್ಕೆ ತರುವಂತೆ ಮನವಿ ಮಾಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com