ಎಚ್ ಡಿ ಕುಮಾರಸ್ವಾಮಿ ವಿರುದ್ಧ ಪೋಸ್ಟರ್: ಪೊಲೀಸರಿಗೆ ದೂರು ನೀಡಿದ ಜೆಡಿಎಸ್

ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಬೆಂಗಳೂರಿನ ಹಲವೆಡೆ ಭಿತ್ತಿಪತ್ರಗಳನ್ನು ಅಂಟಿಸಿದ ಕಾಂಗ್ರೆಸ್ ನ ಕಿಡಿಗೇಡಿಗಳ ವಿರುದ್ಧ ಜೆಡಿಎಸ್ ಬುಧವಾರ ಪೊಲೀಸರಿಗೆ ದೂರು ನೀಡಿದೆ.
ಎಚ್.ಡಿ ಕುಮಾರಸ್ವಾಮಿ
ಎಚ್.ಡಿ ಕುಮಾರಸ್ವಾಮಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಬೆಂಗಳೂರಿನ ಹಲವೆಡೆ ಭಿತ್ತಿಪತ್ರಗಳನ್ನು ಅಂಟಿಸಿದ ಕಾಂಗ್ರೆಸ್ ನ ಕಿಡಿಗೇಡಿಗಳ ವಿರುದ್ಧ ಜೆಡಿಎಸ್ ಬುಧವಾರ ಪೊಲೀಸರಿಗೆ ದೂರು ನೀಡಿದೆ.

ಜೆಡಿಎಸ್ ನಗರ ಘಟಕದ ಅಧ್ಯಕ್ಷ ಎಚ್.ಎಂ.ರಮೇಶ್ ಗೌಡ, ಮಾಜಿ ಎಂಎಲ್ಸಿ ಚೌಡರೆಡ್ಡಿ ತೂಪಲ್ಲಿ, ಪಕ್ಷದ ಕಾನೂನು ಘಟಕದ ಅಧ್ಯಕ್ಷ ಎ.ಪಿ.ರಂಗನಾಥ್ ಅವರು ಇಂದು ಬೆಂಗಳೂರು ಪೊಲೀಸ್ ಕಮಿಷನರ್ ಬಿ.ದಯಾನಂದ ಅವರನ್ನು ಭೇಟಿ ಮಾಡಿ, ದೂರಿನ ಪ್ರತಿಯನ್ನು ಸಲ್ಲಿಸಿದರು.

‘ದುಷ್ಕರ್ಮಿಗಳ’ ಹೆಸರುಗಳನ್ನು ಪೊಲೀಸ್ ಆಯುಕ್ತರೊಂದಿಗೆ ಹಂಚಿಕೊಂಡ ಮುಖಂಡರು, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಮಾನಹಾನಿ ಮಾಡಿದವರ ವಿರುದ್ಧ ಕಠಿಣ ಕ್ರಮಕ್ಕೆ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಇಂತಹ ಭಿತ್ತಿಪತ್ರಗಳಿಂದ ನಗರದಲ್ಲಿ ಶಾಂತಿ, ಸೌಹಾರ್ದತೆ ಕದಡುವ ಸಾಧ್ಯತೆ ಇದೆ ಎಂದು ಅವರು ಹೇಳಿದರು.

ಇತ್ತೀಚೆಗೆ ದೀಪಾವಳಿ ಸಂದರ್ಭದಲ್ಲಿ ಕುಮಾರಸ್ವಾಮಿ ಅವರು ತಮ್ಮ ಮನೆಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದ ಆರೋಪದ ಮೇಲೆ ಅವರ ವಿರುದ್ಧ ಎಫ್‌ಐಆರ್ ದಾಖಲಾದ ಬಳಿಕ ಮಾಜಿ ಸಿಎಂ ನಿವಾಸದ ಬಳಿ ಹಲವು ಪೋಸ್ಟರ್‌ಗಳು ಕಾಣಿಸಿಕೊಂಡಿದ್ದವು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com