ಡಿಸೆಂಬರ್ 23ರಂದು ಪಿಎಸ್ಐ ನೇಮಕಾತಿ ಮರು ಪರೀಕ್ಷೆ: ಕೆಇಎ

545 ಪಿಎಸ್‌ಐ ನೇಮಕಾತಿ ಅಕ್ರಮ ಹಿನ್ನೆಲೆಯಲ್ಲಿ ಮರು ಪರೀಕ್ಷೆಗೆ ಕರ್ನಾಟಕ ಹೈಕೋರ್ಟ್‌ ಗ್ರೀನ್‌ ಸಿಗ್ನಲ್‌ ನೀಡಿದ ಬೆನ್ನಲ್ಲೇ ಇದೀಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಪರೀಕ್ಷೆ ದಿನಾಂಕವನ್ನು ಘೋಷಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: 545 ಪಿಎಸ್‌ಐ ನೇಮಕಾತಿ ಅಕ್ರಮ ಹಿನ್ನೆಲೆಯಲ್ಲಿ ಮರು ಪರೀಕ್ಷೆಗೆ ಕರ್ನಾಟಕ ಹೈಕೋರ್ಟ್‌ ಗ್ರೀನ್‌ ಸಿಗ್ನಲ್‌ ನೀಡಿದ ಬೆನ್ನಲ್ಲೇ ಇದೀಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಪರೀಕ್ಷೆ ದಿನಾಂಕವನ್ನು ಘೋಷಿಸಿದೆ.

ಪೊಲೀಸ್ ಸಬ್‌ಇನ್ಸ್‌ಪೆಕ್ಟರ್‌ಗಳ ನೇಮಕಾತಿ ಪರೀಕ್ಷೆ ಡಿಸೆಂಬರ್ 23ರಂದು ಬೆಂಗಳೂರಿನಲ್ಲಿ ನಡೆಸಲಿದೆ. ಹೈಕೋರ್ಟ್ ಆದೇಶದ ಮೇರೆಗೆ ಪಿಎಸ್ ಐ ಮರು ಪರೀಕ್ಷೆ ನಡೆಸಲಾಗುತ್ತಿದ್ದು, ಹಿಂದಿನ ಪರೀಕ್ಷೆಯಲ್ಲಿ ಪರೀಕ್ಷೆಗೆ ಹಾಜರಾಗಲು ಅರ್ಹತೆ ಪಡೆದವರು ಮರು ಪರೀಕ್ಷೆ ಬರೆಯಲು ಅರ್ಹರಾಗಿರುತ್ತಾರೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

2021ರ ಜನವರಿ 21ರಂದು ಪೊಲೀಸ್ ಇಲಾಖೆಯು 545 PSI ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿತ್ತು. 2021ರ ಅಕ್ಟೋಬರ್ 31ರಂದು ಲಿಖಿತ ಪರೀಕ್ಷೆ ನಡೆದಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಬಳಿಕ ಪರೀಕ್ಷೆ ವಿವಾದದ ಸುಳಿಯಲ್ಲಿ ಸಿಲುಕಿತ್ತು.

ಹಗರಣಕ್ಕೆ ಸಂಬಂಧಿಸಿದಂತೆ ಆಗಿನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಮೃತ್ ಪಾಲ್ ಮತ್ತು ಪೊಲೀಸ್ ಉಪ ಅಧೀಕ್ಷಕರು, ಇನ್‌ಸ್ಪೆಕ್ಟರ್, ಸಬ್ ಇನ್‌ಸ್ಪೆಕ್ಟರ್, ಸಹಾಯಕ ಸಬ್ ಇನ್‌ಸ್ಪೆಕ್ಟರ್ ಮತ್ತು ಕಾನ್‌ಸ್ಟೆಬಲ್‌ಗಳ ಶ್ರೇಣಿಯ ಕೆಲವು ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ ಹಲವರನ್ನು ಬಂಧಿಸಲಾಗಿತ್ತು. ಇನ್ನು ಅಂದಿನ ಬಿಜೆಪಿ ಸರ್ಕಾರ ಪರೀಕ್ಷೆಯನ್ನು ರದ್ದುಪಡಿಸಿ ಮತ್ತೆ ನಡೆಸಲು ನಿರ್ಧರಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com