ಬೆಂಗಳೂರಿನಲ್ಲಿ ಮೊದಲ ಕಂಬಳ ಆಯೋಜನೆ: ಭವ್ಯ ಮೆರವಣಿಗೆಯಲ್ಲಿ ಕೋಣಗಳ ಆಗಮನ

ಇದೇ ಮೊದಲ ಬಾರಿಗೆ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ನವೆಂಬರ್ 25 ಮತ್ತು 26 ರಂದು  ‘ಬೆಂಗಳೂರು ಕಂಬಳ ನಮ್ಮ ಕಂಬಳ' ಶೀರ್ಷಿಕೆಯಡಿ ಕಂಬಳವನ್ನು ಆಯೋಜಿಸಲಾಗಿದ್ದು, ಕಂಬಳಕ್ಕೆ ಭವ್ಯ ಮೆರವಣಿಗೆ ಮೂಲಕ ಕೋಣಗಳು ಆಗಮಿಸಲಿವೆ ಎಂದು ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ ಹಾಗೂ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಬುಧವಾರ ಮಾಹಿತಿ ನೀಡಿದರು.
ಕಂಬಳದಲ್ಲಿ ಭಾಗಿಯಾಗಲಿರುವ ಕೋಣವನ್ನು ಹಿಡಿದು ನಿಂತಿರುವ ವ್ಯಕ್ತಿ.
ಕಂಬಳದಲ್ಲಿ ಭಾಗಿಯಾಗಲಿರುವ ಕೋಣವನ್ನು ಹಿಡಿದು ನಿಂತಿರುವ ವ್ಯಕ್ತಿ.

ಬೆಂಗಳೂರು: ಇದೇ ಮೊದಲ ಬಾರಿಗೆ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ನವೆಂಬರ್ 25 ಮತ್ತು 26 ರಂದು  ‘ಬೆಂಗಳೂರು ಕಂಬಳ ನಮ್ಮ ಕಂಬಳ' ಶೀರ್ಷಿಕೆಯಡಿ ಕಂಬಳವನ್ನು ಆಯೋಜಿಸಲಾಗಿದ್ದು, ಕಂಬಳಕ್ಕೆ ಭವ್ಯ ಮೆರವಣಿಗೆ ಮೂಲಕ ಕೋಣಗಳು ಆಗಮಿಸಲಿವೆ ಎಂದು ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ ಹಾಗೂ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಬುಧವಾರ ಮಾಹಿತಿ ನೀಡಿದರು.

ನಗರದ ಖಾಸಗಿ ಹೋಟೆಲ್‌ ನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನ.23ರಂದು ಬೆಳಗ್ಗೆ 9 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಿಂದ ಹೊರಡುವ ಲಾರಿಗಳಲ್ಲಿ ಭವ್ಯ ಮೆರವಣಿಗೆ ಮೂಲಕ ಅರಮನೆ ಮೈದಾನಕ್ಕೆ ಕೋಣಗಳು ಆಗಮಿಸಲಿವೆ ಎಂದು ಹೇಳಿದರು.

ಸುಮಾರು 150 ಜೋಡಿ ಕೋಣಗಳನ್ನು ಹಾಸನದಲ್ಲಿ ಇರಿಸಲಾಗಿದ್ದು, ಶಾಸಕ ಹೆಚ್.ಡಿ.ರೇವಣ್ಣ ಮತ್ತಿತರರು ಮೇವು, ನೀರು, 2000 ಮಂದಿಗೆ ಊಟದ ವ್ಯವಸ್ಥೆ ಮಾಡುವುದಾಗಿ ಹೇಳಿದ್ದಾರೆ. ಹಾಸನದಿಂದ ನೆಲಮಂಗಲದವರೆಗೆ ಶುಕ್ರವಾರ ಅರಮನೆ ಮೈದಾನದವರೆಗೆ ಎಮ್ಮೆಗಳನ್ನು ಭವ್ಯ ಮೆರವಣಿಗೆ ಮೂಲಕ ಅರಮನೆ ಮೈದಾನಕ್ಕೆ ಕರೆ ತರಲಾಗುವುದು. ಈ ಸಂದರ್ಭದಲ್ಲಿ ಪಶು ವೈದ್ಯರ ತಂಡವೂ ಜೊತೆಯಲ್ಲಿ ಇರಲಿದ್ದಾರೆಂದು ಮಾಹಿತಿ ನೀಡಿದರು.

ಬೆಂಗಳೂರು ಕರಾವಳಿ ಕರ್ನಾಟಕದ 18 ಲಕ್ಷ ಜನರಿಗೆ ನೆಲೆಯಾಗಿದೆ. ಅವರಲ್ಲಿ ಸುಮಾರು ಎಂಟು ಲಕ್ಷ ಜನರು ಎರಡು ದಿನಗಳ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಗಳಿವೆ. ಕಂಬಳದ ವೇಳೆ ಆಹಾರ, ಕಲಾಕೃತಿಗಳು ಮತ್ತು ಇತರ ವಸ್ತುಗಳ 150 ಕ್ಕೂ ಹೆಚ್ಚು ಮಳಿಗೆಗಳನ್ನು ಹಾಕಲಾಗುತ್ತದೆ.

ಸಮಿತಿಯ ಗೌರವಾಧ್ಯಕ್ಷ ಪ್ರಕಾಶ್ ಶೆಟ್ಟಿ ಮಾತನಾಡಿ, ಬೆಂಗಳೂರಿನ 65 ಸಂಘ ಸಂಸ್ಥೆಗಳು ಈ ಅದ್ಧೂರಿ ಕಾರ್ಯಕ್ರಮಕ್ಕೆ ಬೆಂಬಲ ನೀಡುತ್ತಿವೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com