DK Shivakumar: ಡಿಕೆಶಿ ವಿರುದ್ಧದ ಸಿಬಿಐ ಕೇಸ್‌ ಗೆ ನೀಡಿದ್ದ ಅನುಮತಿ ವಾಪಸ್‌ ಪಡೆಯಲು ಸಚಿವ ಸಂಪುಟ ಒಪ್ಪಿಗೆ!

ಆದಾಯ ಮೀರಿ ಆಸ್ತಿ ಗಳಿಕೆ ಮಾಡಿರುವ ಆರೋಪದಲ್ಲಿ ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ನೀಡಿರುವ ಅನುಮತಿಯನ್ನು ವಾಪಸ್ ಪಡೆಯಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. 
ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಮಾಡಿರುವ ಆರೋಪದಲ್ಲಿ ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ನೀಡಿರುವ ಅನುಮತಿಯನ್ನು ವಾಪಸ್ ಪಡೆಯಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. 

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟದಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು ಈ ಬಗ್ಗೆ ಸಚಿವ ಹೆಚ್ ಕೆ ಪಾಟೀಲ್ ಮಾಧ್ಯಮಗಳಿಗೆ ಮಾಹಿತಿ ನೀಡಿದರು. ಡಿಕೆ ಶಿವಕುಮಾರ್ ಪ್ರಕರಣದ ಸಂಬಂಧ ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಡ್ವೊಕೇಟ್ ಜನರರಲ್ ಆಗಿದ್ದ ಪ್ರಭುಲಿಂಗ ನಾವಡಗಿ ವರದಿ ಆಧರಿಸಿ ಹಾಲಿ ಅಡ್ವೊಕೇಟ್ ಜನರಲ್ ಅವರಿಂದ ಅಭಿಪ್ರಾಯ ಪಡೆಯಲಾಗಿತ್ತು. ಈ ಹಿಂದಿನ ಬಿಜೆಪಿ ಸರ್ಕಾರ ಸಿಬಿಐ ತನಿಖೆಗೆ ಅನುಮತಿ ನೀಡಿತ್ತು. ಹಾಲಿ ಎಜಿ ಜನರಲ್ ಶಶಿಕಿರಣ್ ಶೆಟ್ಟಿ ಅಭಿಪ್ರಾಯ ಪರಿಗಣಿಸಿ, ಸರ್ಕಾರ ಅನುಮತಿ ವಾಪಸ್ ಪಡೆಯಲು ನಿರ್ಧರಿಸಿದೆ. 

ಕೋರ್ಟ್‌ನಲ್ಲಿ ಸಿಬಿಐ ಪ್ರಕರಣದ ವಿಚಾರಣೆ ಬಾಕಿ ಇದೆ. ಹೀಗಾಗಿ ಕೇವಲ ತನಿಖೆಗೆ ಸಿಬಿಐಗೆ ನೀಡಿರುವ ಅನುಮತಿ ಮಾತ್ರ ಹಿಂಪಡೆಯುವುದಕ್ಕೆ ಸರ್ಕಾರಕ್ಕೆ ಸಾಧ್ಯತೆ ಇದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com