ಪಧವೀಧರರ ಕ್ಷೇತ್ರ-ಶಿಕ್ಷಕರ ಕ್ಷೇತ್ರ ಚುನಾವಣೆ: 2.73 ಲಕ್ಷ ಹೊಸ ಮತದಾರರ ಸೇರ್ಪಡೆ; ಡಿ.30ರಂದು ಅಂತಿಮ ಪಟ್ಟಿ ಪ್ರಕಟ

ಬೆಂಗಳೂರು ಪದವೀಧರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರ ಚುನಾವಣೆಗೆ ಸಂಬಂಧಿಸಿದಂತೆ ಕರಡು ಮತದಾರರ ಪಟ್ಟಿಯನ್ನು ಗುರುವಾರ ಪ್ರಕಟಿಸಲಾಗಿದ್ದು, ಪಟ್ಟಿಯಲ್ಲಿ 2.73 ಲಕ್ಷ ಹೊಸ ಮತದಾರರ ಸೇರ್ಪಡೆಗೊಂಡಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಬೆಂಗಳೂರು ಪದವೀಧರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರ ಚುನಾವಣೆಗೆ ಸಂಬಂಧಿಸಿದಂತೆ ಕರಡು ಮತದಾರರ ಪಟ್ಟಿಯನ್ನು ಗುರುವಾರ ಪ್ರಕಟಿಸಲಾಗಿದ್ದು, ಪಟ್ಟಿಯಲ್ಲಿ 2.73 ಲಕ್ಷ ಹೊಸ ಮತದಾರರ ಸೇರ್ಪಡೆಗೊಂಡಿದ್ದಾರೆ.

7 ಕ್ಷೇತ್ರಗಳಲ್ಲಿ ಈಶಾನ್ಯ ಪದವೀಧರರ ಕ್ಷೇತ್ರದಲ್ಲಿ 1,40,423 ಪದವೀಧರರು ನೋಂದಾಯಿಸಿಕೊಂಡಿದ್ದಾರೆ. ಬೆಂಗಳೂರು ಪದವೀಧರರ ಕ್ಷೇತ್ರ 67,787, ಕರ್ನಾಟಕ ನೈಋತ್ಯ ಪದವೀಧರರ ಕ್ಷೇತ್ರ 65,566, ಶಿಕ್ಷಕರ ಕ್ಷೇತ್ರಗಳ ಪೈಕಿ ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ 20,465, ಕರ್ನಾಟಕ ನೈರುತ್ಯ ಶಿಕ್ಷಕರ ಕ್ಷೇತ್ರ 16,950, ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರ 14,206 ಹಾಗೂ ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ 10,022 ಶಿಕ್ಷಕರು ಮತದಾನ ಮಾಡಲು ಅರ್ಹರಾಗಿದ್ದಾರೆ.

ಬಿಬಿಎಂಪಿ ಚುನಾವಣಾ ವಿಭಾಗದ ವಿಶೇಷ ಆಯುಕ್ತ ಆರ್.ರಾಮಚಂದ್ರನ್ ಮಾತನಾಡಿ, ಚುನಾವಣಾ ಆಯೋಗದ ನಿರ್ದೇಶನದಂತೆ ಬೆಂಗಳೂರು ಪದವೀಧರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರದ ಮೇಲ್ಮನೆ ಚುನಾವಣೆಗೆ ಮತದಾರ ಪಟ್ಟಿ ಸಿದ್ಧಪಡಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ನ.6ರವರೆಗೆ ಸಲ್ಲಿಕೆ ಆಗಿರುವ ಅರ್ಜಿಗಳನ್ನು ಪರಿಶೀಲನೆ ಮಾಡಿ ಇದೀಗ ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದೆ.

ಒಟ್ಟು 39,858 ಪದವೀಧರ ಕ್ಷೇತ್ರದ ಮತದಾರರಿದ್ದು, ಈ ಪೈಕಿ 17,717 ಪುರುಷರು, 22,135 ಮಹಿಳಾ ಮತದಾರರು ಹಾಗೂ 6 ಮಂದಿ ಲೈಂಗಿಕ ಅಲ್ಪಸಂಖ್ಯಾತ ಮತದಾರರಿದ್ದಾರೆ. ಇನ್ನು ಒಟ್ಟು 6,343 ಶಿಕ್ಷಕರ ಕ್ಷೇತ್ರದ ಮತದಾರರಿದ್ದು, ಈ ಪೈಕಿ 1,909 ಪುರುಷರು, 4,433 ಮಹಿಳೆಯರು ಹಾಗೂ ಓರ್ವ ಲೈಂಗಿಕ ಅಲ್ಪಸಂಖ್ಯಾತ ಮತದಾರರಿದ್ದಾರೆಂದು ಮಾಹಿತಿ ನೀಡಿದರು.

ಕರಡು ಮತದಾರರ ಪಟ್ಟಿನ ಅಕ್ಷೇಪಣೆಗಳನ್ನು ನಗರದ 28 ವಿಧಾನಸಭಾ ಕ್ಷೇತ್ರದ ಸಹಾಯಕ ಮತದಾನ ನೋದಣಿ ಅಧಿಕಾರಿಗಳಿಗೆ ಸಲ್ಲಿಸಬಹುದು. ಡಿ.9 ಆಕ್ಷೇಪಣೆ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಆಕ್ಷೇಪಣೆಗಳನ್ನು ಪರಿಶೀಲಿಸಿ ಡಿ.30ರಂದು ಅಂತಿಮ ಮತದಾರ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ವಿವರಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com