ಕಂಬಳ ಆಯೋಜಕರಿಗೆ ದಂಡ ವಿಧಿಸಿದ ಬಿಬಿಎಂಪಿ!

ನಗರದ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ದಕ್ಷಿಣ ಕನ್ನಡದ ಸಾಂಪ್ರದಾಯಿಕ ಕ್ರೀಡೆ ಕಂಬಳದ ಆಯೋಜಕರಿಗೆ ಬಿಬಿಎಂಪಿಯಿಂದ ಅಘಾತ ಎದುರಾಗಿದೆ. 
ಕಂಬಳ ವೀಕ್ಷಿಸುತ್ತಿರುವ ವಿದೇಶಿಗರು.
ಕಂಬಳ ವೀಕ್ಷಿಸುತ್ತಿರುವ ವಿದೇಶಿಗರು.

ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ದಕ್ಷಿಣ ಕನ್ನಡದ ಸಾಂಪ್ರದಾಯಿಕ ಕ್ರೀಡೆ ಕಂಬಳದ ಆಯೋಜಕರಿಗೆ ಬಿಬಿಎಂಪಿಯಿಂದ ಅಘಾತ ಎದುರಾಗಿದೆ. 

ಅರಮನೆ ಮೈದಾನದ ಮುಂದೆ ಕಂಬಳಕ್ಕೆ ಶುಭಕೋರಿ ಫ್ಲೆಕ್ಸ್ ನ್ನು ಅಳವಡಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಆಯೋಜಕರಿಗೆ ದಂಡ ವಿಧಿಸಿದೆ. 

ನಗರದಲ್ಲಿ ಫ್ಲೆಕ್ಸ್, ಬ್ಯಾನರ್ ಅಳವಡಿಸುವುದಕ್ಕೆ ನಿಷೇಧವಿದ್ದರೂ ಫ್ಲೆಕ್ಸ್ ಅಳವಡಿಸಿದ್ದಕ್ಕಾಗಿ ದಂಡ ವಿಧಿಸಲಾಗಿದೆ. ಈ ಸಂಬಂಧ ಸದಾಶಿವನಗರ ಠಾಣೆಯಲ್ಲಿ ದೂರು ದಾಖಲಾದ ಹಿನ್ನಲೆ ಅರಮನೆ ಮೈದಾನದ ಸುತ್ತಮುತ್ತ ಹಾಕಿದ್ದ ಫ್ಲೆಕ್ಸ್, ಬ್ಯಾನರ್ ತೆರವುಗೊಳಿಸಲಾಗಿದೆ.

ಬಿಬಿಎಂಪಿ ಅಧಿಕಾರಿಗಳು ಕಂಬಳ ಆಯೋಜಕರಿಗೆ 50 ಸಾವಿರ ದಂಡ ವಿಧಿಸಿದ್ದಾರೆ. ಬಳ್ಳಾರಿ ರಸ್ತೆಯ ಪಕ್ಕದಲ್ಲಿ  ಫ್ಲೈಕ್ಸ್ ಬ್ಯಾನರ್ ಹಾಕಲಾಗಿದೆ. ಬೆಂಗಳೂರು ಕಂಬಳ ಸಮಿತಿ ವತಿಯಿಂದ ಒಟ್ಟು 200ಕ್ಕೂ ಹೆಚ್ಚು ಕೋಣಗಳ ಸ್ಪರ್ಧೆಯನ್ನು ಒಳಗೊಂಡಂತೆ ಕಂಬಳ ಉತ್ಸವವನ್ನು ಆಯೋಜನೆ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com