ನವೆಂಬರ್ 27 ರಂದು ಮುಖ್ಯಮಂತ್ರಿಗಳಿಂದ ಜನತಾ ದರ್ಶನ, ನಿಮ್ಮ ಸಮಸ್ಯೆಗೆ ಸಿಗುತ್ತೆ ಪರಿಹಾರ

ಲೋಕಸಭೆ ಚುನಾವಣೆಗೂ ಮುನ್ನ ಜನರ ತಲುಪಲು ಯತ್ನಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್ 27 ರಂದು ಬೆಂಗಳೂರಿನ ತಮ್ಮ ಅಧಿಕೃತ ನಿವಾಸದಲ್ಲಿ ಒಂದು ದಿನದ ಜನತಾದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಲೋಕಸಭೆ ಚುನಾವಣೆಗೂ ಮುನ್ನ ಜನರ ತಲುಪಲು ಯತ್ನಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್ 27 ರಂದು ಬೆಂಗಳೂರಿನ ತಮ್ಮ ಅಧಿಕೃತ ನಿವಾಸದಲ್ಲಿ ಒಂದು ದಿನದ ಜನತಾದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.

2013 ಮತ್ತು 2018 ರ ನಡುವೆ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು, ಈ ವೇಳೆ ಕೆಲ ಗಂಟೆಗಳ ಕಾಲ ಆಗಿದ್ದಾಗ ಜನತಾದರ್ಶನ ನಡೆಸುತ್ತಿದ್ದರು. ಆದರೆ, ಈ ಬಾರಿ ಬೆಳಗ್ಗೆ 10ರಿಂದ ಸಂಜೆ 6ರವರೆಗೆ ನಡೆಸಲಿದ್ದಾರೆಂದು ಮುಖ್ಯಮಂತ್ರಿಗಳ ಕಚೇರಿ ಮೂಲಗಳು ಮಾಹಿತಿ ನೀಡಿವೆ.

ಈ ಬಗ್ಗೆ ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್ ಅವರು ಎಲ್ಲಾ ಜಿಲ್ಲಾಪಂಚಾಯತಿಗಳ ಡಿಸಿಗಳು ಮತ್ತು ಸಿಇಒಗಳಿಗೆ ಪತ್ರ ಬರೆದಿದ್ದು, ನವೆಂಬರ್ 27 ರಂದು ಮುಖ್ಯಮಂತ್ರಿಗಳು ಜನತಾದರ್ಶನ ನಡೆಸಲಿದ್ದು, ಈ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಮುಖ್ಯಮಂತ್ರಿಗಳು  ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳ ಸಂಪರ್ಕಿಸಿ ಜನರ ಸಮಸ್ಯೆಗಳ ಪರಿಹರಿಸುವಂತೆ ನಿರ್ದೇಶನ ನೀಡಬಹುದು. ಹೀಗಾಗಿ ಎಲ್ಲಾ ಡಿಸಿಗಳು, ಜಿಲ್ಲಾ ಪಂಚಾಯತ್ ಸಿಇಒಗಳು, ಎಸ್ಪಿಗಳು ಮತ್ತು ಇತರ ಅಧಿಕಾರಿಗಳು ತಮ್ಮ ಕೇಂದ್ರಗಳಲ್ಲಿ ಹಾಜರಿರಬೇಕು. ಸಿಎಂ ಕಚೇರಿಯಿಂದ ಕರೆಗಳು ಬಂದ ಕೂಡಲೇ ಸ್ವೀಕರಿಸಬೇಕು ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com