ಬೆಂಗಳೂರು: ಜಯನಗರದಲ್ಲಿ 22 ವರ್ಷದ ಯುವಕನಿಂದ 3 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ

ಮೂರು ವರ್ಷದ ಬಾಲಕಿ ಮೇಲೆ 22 ವರ್ಷದ ಯುವಕ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಜಯನಗರ ಪೊಲೀಸ್ ವ್ಯಾಪ್ತಿಯಲ್ಲಿ ಬುಧವಾರ ಸಂಜೆ ನಡೆದಿದೆ. ಸಂತ್ರಸ್ತೆಯ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಅದೇ ಪ್ರದೇಶದಲ್ಲಿ ವಾಸವಾಗಿರುವ ಆರೋಪಿಯನ್ನು ಬಂಧಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಮೂರು ವರ್ಷದ ಬಾಲಕಿ ಮೇಲೆ 22 ವರ್ಷದ ಯುವಕ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಜಯನಗರ ಪೊಲೀಸ್ ವ್ಯಾಪ್ತಿಯಲ್ಲಿ ಬುಧವಾರ ಸಂಜೆ ನಡೆದಿದೆ. ಸಂತ್ರಸ್ತೆಯ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಅದೇ ಪ್ರದೇಶದಲ್ಲಿ ವಾಸವಾಗಿರುವ ಆರೋಪಿಯನ್ನು ಬಂಧಿಸಿದ್ದಾರೆ.

ಪೊಲೀಸರು ಆರೋಪಿಯ ವಿರುದ್ಧ ಮಕ್ಕಳ ಲೈಂಗಿಕ ಅಪರಾಧಗಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಬಾಲಕಿಯ ಪೋಷಕರು ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಸಂತ್ರಸ್ತೆಯ ಕುಟುಂಬದ ಸದಸ್ಯರು ಮತ್ತು ಸ್ಥಳೀಯ ಮಹಿಳೆಯರು ಆರೋಪಿಯ ನಿವಾಸದ ಮುಂದೆ ಪ್ರತಿಭಟನೆ ನಡೆಸಿ, ಆತನ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದರು.

ಈ ಪ್ರತಿಭಟನೆಯ ವಿಡಿಯೋ ವೈರಲ್ ಆಗಿದೆ. ಆರೋಪಿಯನ್ನು ಗಲ್ಲಿಗೇರಿಸಬೇಕು ಮತ್ತು ಮಹಿಳೆಯರಿಗೆ ಭದ್ರತೆ ಇಲ್ಲ ಎಂದು ವಿಡಿಯೋದಲ್ಲಿ ಪ್ರತಿಭಟನಾಕಾರರೊಬ್ಬರು ಹೇಳಿದ್ದಾರೆ.  ಆರೋಪಿಯನ್ನು ಜಯನಗರದ ಶಾಕಾಂಬರಿ ನಗರದಲ್ಲಿ ಕೂಲಿ ಕಾರ್ಮಿಕ ಶರವಣ ಎಂದು ಪೊಲೀಸರು ಗುರುತಿಸಿದ್ದಾರೆ. ಘಟನೆ ಬಳಿಕ ಆತ ಮನೆಗೆ ಮರಳಿದ್ದ ಎನ್ನಲಾಗಿದೆ. ಶರವಣನ ಮನೆ ಮುಂದೆ ಮಹಿಳೆಯರು ಪ್ರತಿಭಟನೆ ಆರಂಭಿಸಿದಾಗ ಆತನ ತಾಯಿ ಮತ್ತು ಸಹೋದರಿ ಬೆಂಬಲಿಗರೊಂದಿಗೆ ವಾಗ್ವಾದ ನಡೆಸಿದರು.

ಬಾಲಕಿಯು ಮನೆ ಸಮೀಪದ ಅಂಗಡಿಯೊಂದಕ್ಕೆ ತೆರಳಿದ್ದ ವೇಳೆ ಆರೋಪಿಯು ಕೈಯಿಂದ ಆಕೆಯ ಬಾಯಿಯನ್ನು ಮುಚ್ಚಿ ಕಿರಿದಾದ ರಸ್ತೆಗೆ ಎಳೆದೊಯ್ದಿದ್ದಾನೆ. ನಂತರ ಬಟ್ಟೆಯಲ್ಲಿ ಬಾಯಿ ಮುಚ್ಚಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ. ಅಂಗಡಿಯೊಂದರ ಮಾಲೀಕರು ಘಟನೆ ನೋಡಿ ಬಾಲಕಿಯ ತಂದೆಗೆ ಮಾಹಿತಿ ನೀಡಿದ್ದಾರೆ. ಬಾಲಕಿಯ ಪೋಷಕರು ದಿನಗೂಲಿ ನೌಕರರಾಗಿದ್ದಾರೆ.

ಈಗಾಗಲೇ ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿಸಿದ ಪೊಲೀಸರು ಪ್ರತಿಭಟನಾಕಾರರ ಮನವೊಲಿಸಿ ಅಲ್ಲಿಂದ ಕಳುಹಿಸಿದ್ದಾರೆ. ಆರೋಪಿಯನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com