ಎರಡನೇ ದಿನಕ್ಕೆ ಕಾಲಿಟ್ಟ ಬೆಂಗಳೂರು ಕಂಬಳ: ಇಂದಿನ ಕಾರ್ಯಕ್ರಮದ ವಿಶೇಷತೆಗಳು ಹೀಗಿವೆ....

ರಾಜಧಾನಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಇದೇ ಮೊದಲ ಬಾರಿಗೆ ನಡೆಯುತ್ತಿರುವ ಕರಾವಳಿ ಭಾಗದ ಸಾಂಪ್ರದಾಯಿಕ ಕ್ರೀಡೆ ಕಂಬಳ ಎರಡನೇ ದಿನಕ್ಕೆ ಕಾಲಿಟ್ಟಿದೆ. 
ಕಂಬಳದ ಒಂದು ನೋಟ
ಕಂಬಳದ ಒಂದು ನೋಟ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಇದೇ ಮೊದಲ ಬಾರಿಗೆ ನಡೆಯುತ್ತಿರುವ ಕರಾವಳಿ ಭಾಗದ ಸಾಂಪ್ರದಾಯಿಕ ಕ್ರೀಡೆ ಕಂಬಳ ಎರಡನೇ ದಿನಕ್ಕೆ ಕಾಲಿಟ್ಟಿದೆ. 

ಬೆಂಗಳೂರು ಕಂಬಳ ನಮ್ಮ ಕಂಬಳ”ಕ್ಕೆ ನಿನ್ನೆ ಅದ್ದೂರಿಯಾಗಿ ಚಾಲನೆ ಸಿಕ್ಕಿತ್ತು. ಮೊದಲ ದಿನ ಕರಾವಳಿ ಕರ್ನಾಟಕದ ಆಹಾರ, ಸಂಸ್ಕೃತಿ ಜನರನ್ನು ಆಕರ್ಷಿಸಿತು. ನಿನ್ನೆ ಬೆಳಗ್ಗೆಯಿಂದ ಆರಂಭವಾದ ಕಂಬಳ ಪ್ಯಂದಾವಳಿಗಳು ಮಧ್ಯರಾತ್ರಿವರೆಗು ನಡೆದವು. ಹಾಗಾದರೆ ಕೊನೆಯ ದಿನವಾದ ಇಂದು ಏನೇನು ಕಾರ್ಯಕ್ರಮಗಳಿವೆ ನೋಡೋಣ ಬನ್ನಿ :

ಬೆಳಗ್ಗೆ 10 ಗಂಟೆ ಸುಮಾರಿಗೆ ಸಭಾ ಕಾರ್ಯಕ್ರಮ ಆರಂಭವಾಗಿದೆ. ಕಾರ್ಯಕ್ರಮದಲ್ಲಿ ಸಂಸದೆ ಶೋಭಾ ಕರಂದ್ಲಾಜೆ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಸೇರಿದಂತೆ ಇನ್ನೂ ಅನೇಕ ಹಿರಿಯ ರಾಜಕಾರಣಿಗಳು, ಅಧಿಕಾರಿಗಳು ಭಾಗಿಯಾಗುವ ಸಾಧ್ಯತೆ ಇದೆ.

ಮಧ್ಯಾಹ್ನ 1 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ದೆಹಲಿ ಎನ್​​ಸಿಸಿಎಫ್​ ಅಧ್ಯಕ್ಷ ವಿಶಾಲ್ ಸಿಂಗ್ ಸೇರಿದಂತೆ ಅನೇಕ ಗಣ್ಯರು ಭಾಗಿಯಾಗುವ ಸಾಧ್ಯತೆ ಇದೆ. ಸಾಧಕ ಕುಸ್ತಿಪಟುಗಳಿಗೆ ಕಂಬಳ ಸಮಿತಿಯ ವತಿಯಿಂದ ಸನ್ಮಾನ ಮಾಡಲಾಗುತ್ತದೆ. ಇಂದು ಸಂಜೆ 4 ಗಂಟೆಗೆ ಕಂಬಳ ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಗುತ್ತದೆ. ನಂತರ ಸಮಾರೋಪ ಸಮಾರಂಭ ನಡೆಯಲಿದೆ.

ವೇದಿಕೆ 2ರಲ್ಲಿ ನಡೆಯುವ ಕಾರ್ಯಕ್ರಮಗಳು: ಇಂದು ಸುಮಾರು 80 ಕೋಣಗಳು ಕಂಬಳದಲ್ಲಿ ಓಡಲಿವೆ. ಕರಂಗೋಲು ನೃತ್ಯ, ಗಂಡುಕಲೆ ಯಕ್ಷಗಾನ, ಆಟಿ ಕಳಂಜ, ಆಕ್ಸಿಜನ್ ಡ್ಯಾನ್ಸ್ ಟೀಂ, ಮಂಕಾಳಿ ನಲಿಕೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಸಂಜೆ 7ರಿಂದ ಸೆಲೆಬ್ರಿಟಿಗಳ ಸಂಗೀತ ಸಂಜೆ ಆರಂಭವಾಗುತ್ತದೆ. ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ​ಜನ್ಯ ಅವರಿಂದ ಸಂಗೀತ ರಸ ಸಂಜೆ ನಡೆಯಲಿದೆ. ಬಳಿಕ ಇಂದು ನಾಗರಾಜ್ ಅವರ ಮ್ಯೂಸಿಕಲ್ ಪ್ರೋಗ್ರಾಂ, ಇದಾದ ಮೇಲೆ ಖ್ಯಾತ ಗಾಯಕಿ ಶಮಿತಾ ಮಲ್ನಾಡ್ ಅವರಿಂದ ಕೂಡ ಸಂಗೀತ ಕಾರ್ಯಕ್ರಮ ಜರುಗಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com