ಪ್ರತಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಕನಿಷ್ಠ 10 ವ್ಯಕ್ತಿಗಳನ್ನು ಬಂಧಿಸಿ: ಅಬ್ದುಲ್ ಅಜೀಂ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಹರಡುತ್ತಿರುವ ಮಾದಕವಸ್ತು ಹಾವಳಿಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಪ್ರತಿ ಮಾದಕವಸ್ತು ದಂಧೆ ಪ್ರಕರಣದಲ್ಲಿ ಕನಿಷ್ಠ 10 ಮಂದಿಯನ್ನು ಬಂಧಿಸುವಂತೆ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಂ ಪೊಲೀಸ್ ಇಲಾಖೆಗೆ ಸಲಹೆ ನೀಡಿದರು.
ಅಲ್ಪಸಂಖ್ಯಾತ ಸಮುದಾಯದ ಸಭೆ
ಅಲ್ಪಸಂಖ್ಯಾತ ಸಮುದಾಯದ ಸಭೆ
Updated on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಹರಡುತ್ತಿರುವ ಮಾದಕವಸ್ತು ಹಾವಳಿಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಪ್ರತಿ ಮಾದಕವಸ್ತು ದಂಧೆ ಪ್ರಕರಣದಲ್ಲಿ ಕನಿಷ್ಠ 10 ಮಂದಿಯನ್ನು ಬಂಧಿಸುವಂತೆ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಂ ಪೊಲೀಸ್ ಇಲಾಖೆಗೆ ಸಲಹೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅಜೀಂ, ಸಾಮಾನ್ಯವಾಗಿ ಪೊಲೀಸರು ಎಫ್‌ಐಆರ್ ದಾಖಲಿಸುವುದು ಮಾದಕವಸ್ತು ದಂಧೆಕೋರರ ಮೇಲೆಯೇ ಹೊರತು ಸಂಚುಕೋರರು ಮತ್ತು ಅಪರಾಧಕ್ಕೆ ಕುಮ್ಮಕ್ಕು ನೀಡಿದವರ ಮೇಲಲ್ಲ. ಹೀಗಾಗಿ ಪೊಲೀಸರು ಆರೋಪಿಯ ಪೋಷಕರು, ಸಂಗಾತಿಗಳು ಮತ್ತು ಇತರ ನಿಕಟ ಸಂಬಂಧಿಗಳನ್ನು ಸೇರಿಸಿಕೊಳ್ಳಬೇಕು ಎಂದು ಅವರು ಹೇಳಿದರು. ಆರೋಪಿಗಳ ಪೋಷಕರು ಮತ್ತು ಸಂಗಾತಿಯನ್ನು ಬಂಧಿಸಿದರೆ, ಅದು ನಿರೀಕ್ಷಿತ ಅಪರಾಧಿಗಳಿಗೆ ಎಚ್ಚರಿಕೆ ಗಂಟೆಯಾಗಿ ಕಾರ್ಯನಿರ್ವಹಿಸುತ್ತದೆ ಎಂದು ಅವರು ಹೇಳಿದರು.

ಮಾಜಿ ಪೊಲೀಸ್ ಅಧಿಕಾರಿಯೂ ಆಗಿರುವ ಅಜೀಂ, ನಕಲಿ ಶ್ಯೂರಿಟಿ ಪ್ರಕರಣಗಳು ಹೆಚ್ಚುತ್ತಿವೆ. ಹೀಗಾಗಿ ಅಪರಾಧಿಗಳಿಗೆ ನೀಡಿರುವ ಜಾಮೀನು ಶ್ಯೂರಿಟಿಯನ್ನು ಸಂಬಂಧಪಟ್ಟ ಪೊಲೀಸ್ ಠಾಣೆಗಳ ಮೂಲಕ ಪರಿಶೀಲಿಸುವಂತೆ ಪೊಲೀಸ್ ಇಲಾಖೆಗೆ ಸಲಹೆ ನೀಡಿದರು. ಜಿಲ್ಲೆಯ ಬಹುತೇಕ ಮಾದಕವಸ್ತು ದಂಧೆಕೋರರು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಅಧ್ಯಕ್ಷರಿಗೆ ತಿಳಿಸಿದರು.

ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಿ
ಜಿಲ್ಲೆಯ ಎಂಟು ಮೌಲಾನಾ ಆಜಾದ್ ಶಾಲೆಗಳಲ್ಲಿ ಮಂಜೂರಾದ 56 ಶಿಕ್ಷಕರ ಹುದ್ದೆಗಳಲ್ಲಿ 47 ಖಾಲಿ ಇವೆ. ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ 10 ಶಿಕ್ಷಕರ ಹುದ್ದೆಯಲ್ಲಿ 5 ಖಾಲಿ ಇವೆ. ಅಲ್ಲದೆ, ಅಲ್ಪಸಂಖ್ಯಾತರ ಹಾಸ್ಟೆಲ್‌ಗಳಲ್ಲಿ 8 ವಾರ್ಡನ್‌ಗಳ ಪೈಕಿ ಏಳು ಹುದ್ದೆಗಳು ಖಾಲಿ ಇವೆ. ಅವುಗಳನ್ನು ಭರ್ತಿ ಮಾಡುವಂತೆ ಹೇಳಿದರು.

ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಶಾಲೆಯಿಂದ ಹೊರಗುಳಿಯುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಮದರಸಾಗಳು ತಮ್ಮ ಸಮಯವನ್ನು ಬದಲಾಯಿಸುವುದನ್ನು ಖಚಿತಪಡಿಸಿಕೊಳ್ಳಲು ಅಜೀಂ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮದಸರ ಮತ್ತು ಶಾಲೆಗಳ ಸಮಯ ಘರ್ಷಣೆಯಾಗುವುದರಿಂದ ಮತ್ತು ಎರಡಕ್ಕೂ ಹಾಜರಾಗಲು ಹೊರೆಯಾಗಿರುವುದರಿಂದ ಕೆಲವು ವಿದ್ಯಾರ್ಥಿಗಳು ಶಾಲೆಗಳಿಗೆ ಹಾಜರಾಗುತ್ತಿಲ್ಲ ಎಂದು ಅವರು ಹೇಳಿದರು. ಜಿಲ್ಲೆಯಲ್ಲಿ ಶಾಲೆ ಬಿಟ್ಟ 33 ಅಲ್ಪಸಂಖ್ಯಾತರ ಪೈಕಿ 28 ವಿದ್ಯಾರ್ಥಿಗಳು ಬೇರೆ ಜಿಲ್ಲೆಗಳಿಗೆ ವಲಸೆ ಹೋಗಿದ್ದು, ಉಳಿದ ಐವರು ಮದರಸಾ ಸೇರಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅವರನ್ನು ಶಾಲೆಗೆ ಕಳುಹಿಸಲು ಪೋಷಕರ ಸಹಕಾರ ಅತ್ಯಗತ್ಯ ಎಂದು ಅಜೀಂ ಹೇಳಿದರು. ಅವರು ಸಹಕರಿಸದಿದ್ದರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬಹುದು. ಮದರಸಾಗಳು ವಿಜ್ಞಾನ, ಗಣಿತ ಮತ್ತು ಭಾಷೆಗಳನ್ನು ಕಲಿಸುವುದನ್ನು ಖಚಿತಪಡಿಸಿಕೊಳ್ಳುವಂತೆ ಅವರು ಅಧಿಕಾರಿಗಳಿಗೆ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com