
ಬೆಂಗಳೂರು: ಕಳೆದ 8 ತಿಂಗಳಿಂದ ಖಾಲಿ ಇದ್ದ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಸ್ಥಾನಕ್ಕೆ ನಿವೃತ್ತ ನ್ಯಾಯಮೂರ್ತಿ ಎಲ್. ನಾರಾಯಣಸ್ವಾಮಿ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.
ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಅಧ್ಯಕ್ಷರ ಜೊತೆಗೆ ಇಬ್ಬರು ಸದಸ್ಯರನ್ನು ಸಹ ರಾಜ್ಯ ಸರ್ಕಾರ ನೇಮಕ ಮಾಡಿದ್ದು, ನಿವೃತ್ತ ಜಿಲ್ಲಾ ನ್ಯಾಯದೀಶ ಎಸ್. ಕೆ.ವಂಟಿಗೋಡಿ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಶ್ಯಾಮ್ ಭಟ್ ಅವರನ್ನು ಸದಸ್ಯರನ್ನಾಗಿ ನೇಮಿಸಿದೆ.
ನೂತನ ಅಧ್ಯಕ್ಷರು ಹಾಗೂ ಸದಸ್ಯರು ಐದು ವರ್ಷ ಅಥವಾ 70 ವರ್ಷ ವಯಸ್ಸಾಗುವವರೆಗೆ ಈ ಎರಡರಲ್ಲಿ ಯಾವುದು ಮೊದಲೇ ಅಲ್ಲಿಯವರೆಗೆ ಅಧಿಕಾರವಧಿಯನ್ನು ಹೊಂದಿದ್ದಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನವರಾದ ಎಲ್ ನಾರಾಯಣಸ್ವಾಮಿ ಅವರು ಹಿಮಾಚಲ ಪ್ರದೇಶ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ, ಕರ್ನಾಟಕ ಹೈಕೋರ್ಟ್ ಹೆಚ್ಚವರಿ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದಾರೆ.
ರಾಜ್ಯ ಮಾನವ ಹಕ್ಕುಗಳ ಆಯೋಗದಲ್ಲಿ ಸುಮಾರು 4,800ಕ್ಕೂ ಅಧಿಕ ಪ್ರಕರಣಗಳು ತನಿಖೆಯಾಗದೆ ಬಾಕಿ ಉಳಿದಿವೆ. ಈಗ ಅಧ್ಯಕ್ಷರು ಆಯ್ಕೆಯಾಗಿದ್ದರಿಂದ ತನಿಖೆ ಮುಂದುವರೆಯಲಿವೆ.
Advertisement