ಪಿಎಸ್ಐ ಪರೀಕ್ಷಾರ್ಥಿಗಳೊಂದಿಗೆ ದುರ್ವರ್ತನೆ: ಪೊಲೀಸರ ವಿರುದ್ಧ ಬಿಜೆಪಿ ತೀವ್ರ ಕಿಡಿ
ಬೆಂಗಳೂರು: ಜನತಾ ದರ್ಶನದ ವೇಳೆ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲು ಸಿಎಂ ಗೃಹ ಕಚೇರಿ ‘ಕೃಷ್ಣಾ’ಕ್ಕೆ ತೆರಳಿದ್ದ ಪಿಎಸ್ಐ ಪರೀಕ್ಷಾರ್ಥಿಗಳೊಂದಿಗೆ ದುರ್ವತನೆ ತೋರಿದ ರಾಜ್ಯ ಸರ್ಕಾರ ಮತ್ತು ಪೊಲೀಸ್ ಅಧಿಕಾರಿಗಳ ವಿರುದ್ಧ ಪ್ರತಿಪಕ್ಷ ಬಿಜೆಪಿ ವಾಗ್ದಾಳಿ ನಡೆಸಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಪ್ರತಿಕ್ರಿಯಿಸಿ, 545 ಪೊಲೀಸ್ ಸಬ್ ಇನ್ಸ್’ಪೆಕ್ಟರ್ ಹುದ್ದೆಗಳ ಮರು ಪರೀಕ್ಷೆಗೆ ಅತ್ಯಂತ ಕಡಿಮೆ ಕಾಲಾವಕಾಶವನ್ನು ನಿಗದಿಪಡಿಸಿರುವ ಸರ್ಕಾರದ ಅವೈಜ್ಞಾನಿಕ ನಿರ್ಧಾರವನ್ನು ಪ್ರತಿಭಟಿಸಿ, ಪರೀಕ್ಷಾ ದಿನಾಂಕವನ್ನು ಮುಂದೂಡಿ ಸಮಯ ವಿಸ್ತರಿಸುವಂತೆ ಪರೀಕ್ಷಾರ್ಥಿಗಳು ಮನವಿ ಮಾಡಿಕೊಂಡಿದ್ದಾರೆ. ಇದನ್ನು ಮುಖ್ಯಮಂತ್ರಿಗಳು ಸಹಾನುಭೂತಿಯಿಂದ ಪರಿಶೀಲಿಸಬೇಕಿತ್ತು” ಎಂದು ಹೇಳಿದ್ದಾರೆ.
“ಪರೀಕ್ಷಾ ಹಗರಣದಿಂದ ಈ ಮೊದಲೇ ಹೈರಾಣಾಗಿ ಹೋಗಿದ್ದ ಪಿಎಸ್ಐ ಹುದ್ದೆ ಆಕಾಂಕ್ಷಿಗಳ ಮನವಿ ಅತ್ಯಂತ ನ್ಯಾಯ ಸಮ್ಮತವಾಗಿದ್ದು, ಇದನ್ನು ಮುಖ್ಯಮಂತ್ರಿಗಳು ಸಹಾನುಭೂತಿಯಿಂದ ಪರಿಶೀಲಿಸಬೇಕಿತ್ತು. ಆದರೆ ಪೊಲೀಸರನ್ನು ಬಿಟ್ಟು ಬಂಧಿಸಿದ ಕ್ರಮ ಕಾಂಗ್ರೆಸ್ ಸರ್ಕಾರಕ್ಕೆ, ಅಮಾಯಕ ನಿರುದ್ಯೋಗಿಗಳ ಮೇಲೆ ಇರುವ ತಾತ್ಸಾರ ಧೋರಣೆಯನ್ನು ಪ್ರತಿಬಿಂಬಿಸಿದೆ. ಪಿಎಸ್ಐ ಹುದ್ದೆ ಆಕಾಂಕ್ಷಿಗಳ ಬೇಡಿಕೆ ನ್ಯಾಯಸಮ್ಮತವಾಗಿದ್ದು, ಸರ್ಕಾರ ಈ ಕೂಡಲೇ ಪರೀಕ್ಷೆಯನ್ನು ಮುಂದೂಡಿ ಸೂಕ್ತ ಕಾಲಾವಕಾಶ ನೀಡಬೇಕೆಂದು ಒತ್ತಾಯಿಸುತ್ತೇನೆ. ಪಿಎಸ್ಐ ಹುದ್ದೆ ಪರೀಕ್ಷಾರ್ಥಿಗಳ ನ್ಯಾಯಯುತ ಬೇಡಿಕೆಗಳನ್ನು ಬಿಜೆಪಿ ಬೆಂಬಲಿಸುತ್ತದೆ” ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ