ಚಿಕ್ಕೋಡಿ: ಅಥಣಿಯಲ್ಲಿ ವಿದ್ಯುತ್ ಸ್ಪರ್ಶಿಸಿ ತಂದೆ-ಮಗ ದಾರುಣ ಸಾವು

ವಿದ್ಯುತ್ ಪ್ರವಹಿಸಿ ತಂದೆ-ಮಗ ದಾರುಣವಾಗಿ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದಲ್ಲಿ ನಡೆದಿದೆ. ಬೋರವೆಲ್ ವಾಟರ್ ವಾಲ್ವ್‌ ತಿರುಗಿಸುವ ವೇಳೆ ವಿದ್ಯುತ್ ಸ್ಪರ್ಶಿಸಿದ್ದರಿಂದ ಅವಘಡ ನಡೆದಿದೆ.
ವಿದ್ಯುತ್ ಸ್ಪರ್ಶಿಸಿ ತಂದೆ-ಮಗ ಸಾವು
ವಿದ್ಯುತ್ ಸ್ಪರ್ಶಿಸಿ ತಂದೆ-ಮಗ ಸಾವು
Updated on: 

ಚಿಕ್ಕೋಡಿ: ವಿದ್ಯುತ್ ಪ್ರವಹಿಸಿ ತಂದೆ-ಮಗ ದಾರುಣವಾಗಿ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದಲ್ಲಿ ನಡೆದಿದೆ. ಬೋರವೆಲ್ ವಾಟರ್ ವಾಲ್ವ್‌ ತಿರುಗಿಸುವ ವೇಳೆ ವಿದ್ಯುತ್ ಸ್ಪರ್ಶಿಸಿದ್ದರಿಂದ ಅವಘಡ ನಡೆದಿದೆ.

ಮಲ್ಲಿಕಾರ್ಜುನ ಸದಾಶಿವ ಪೂಜಾರಿ (32), ಪ್ರೀತಮ್ ಮಲ್ಲಿಕಾರ್ಜುನ ಪೂಜಾರಿ (7) ಮೃತರು. ತಂದೆಗೆ ವಿದ್ಯುತ್ ತಗುಲಿದ್ದನ್ನು ನೋಡಿ ಮಗ ರಕ್ಷಣೆಗೆ ಬಂದಾಗ ಆತನಿಗೂ ವಿದ್ಯುತ್ ಪ್ರವಹಿಸಿದೆ, ಇದರಿಂದ ಸ್ಥಳದಲ್ಲಿ ತಂದೆ-ಮಗ ಕೊನೆಯುಸಿರೆಳೆದಿದ್ದಾರೆ. ಘಟನಾ ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ದುರಂತವೆಂದರೆ, ಪೂಜಾರಿ ಅವರಿಗೆ  ಇಬ್ಬರು ಪುತ್ರರಿದ್ದು, ಅವರಲ್ಲಿ ಒಬ್ಬ ಮಗ ಕೆಲವೇ ತಿಂಗಳ ಹಿಂದೆ ನಿಧನರಾದರು. ಭಾನುವಾರದಂದು ಪೂಜಾರಿ ಮತ್ತು ಪ್ರೀತಂ ಅವರ ಸಾವು ಕುಟುಂಬಕ್ಕೆ ದೊಡ್ಡ ಆಘಾತವನ್ನುಂಟು ಮಾಡಿದೆ. ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com