ಕಲುಷಿತ ನೀರು ಕುಡಿದು 3 ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು!

ಕುಲುಷಿತ ನೀರು ಕುಡಿದು ಮೂವರು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ದೊಡ್ಡಪೊನ್ನಾಂಡಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬಂಗಾರಪೇಟೆ: ಕುಲುಷಿತ ನೀರು ಕುಡಿದು ಮೂವರು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ದೊಡ್ಡಪೊನ್ನಾಂಡಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ.

ಘಟನೆ ಬಳಿಕ ಕೆಜಿಎಫ್ ಎಸ್ಪಿ ಕೆ ಎಂ ಶಾಂತರಾಜು ಅವರು ವಸತಿ ಶಾಲೆಗೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

10 ನೇ ತರಗತಿಯ ಇಬ್ಬರು ಮತ್ತು 9ನೇ ತರಗತಿಯ ಓರ್ವ ವಿದ್ಯಾರ್ಥಿ ಅಡ್ಮಿನಿಸ್ಟ್ರೇಟಿವ್ ಬ್ಲಾಕ್‌ನಲ್ಲಿ ಇರಿಸಲಾಗಿದ್ದ ನೀರಿನ ಕ್ಯಾನ್ ನಲ್ಲಿನ ನೀರನ್ನು ಕುಡಿದಿದ್ದಾರೆ. ನೀರು ಕುಡಿದ ಕೂಡಲೇ ಮೂವರು ವಿದ್ಯಾರ್ಥಿಗಳಿಗೆ ವಾಂತಿಯಾಗಿದ್ದು, ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಮೂವರನ್ನು  ಬಂಗಾರಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಆರ್‌ಎಲ್ ಜಾಲಪ್ಪ ಆಸ್ಪತ್ರೆಗೆ ರವಾನಿಸಲಾಗಿದೆ. ಇದೀಗ ವಿದ್ಯಾರ್ಥಿಗಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ಶಾಂತರಾಜು ಅವರು ಹೇಳಿದ್ದಾರೆ.

ಇದನ್ನೂ ಓದಿ: ತುಮಕೂರು: ಕಲುಷಿತ ನೀರು, ಆಹಾರ ಸೇವಿಸಿ 28 ಮಂದಿ ಅಸ್ವಸ್ಥ, ಆರು ಮಂದಿ ಜಿಲ್ಲಾಸ್ಪತ್ರೆಗೆ ದಾಖಲು
 
ಪ್ರಾಥಮಿಕ ತನಿಖೆಯಿಂದ ಘಟನೆಯ ಹಿಂದೆ ನಡೆದಿರುವ ಅಕ್ರಮಗಳು ಬೆಳಕಿಗೆ ಬಂದಿದೆ. ಈ ಸಂಬಂಧ ವಿಸ್ತೃತ ತನಿಖೆ ನಡೆಸಲಾಗುತ್ತಿದ್ದು, ತನಿಖೆ ಪೂರ್ಣಗೊಂಡ ಬಳಿಕ ವಿಚಾರ ಬೆಳಕಿಗೆ ಬರಲಿದೆ ಎಂದು ತಿಳಿಸಿದ್ದಾರೆ.

ಸ್ಥಳದಲ್ಲಿ ಪ್ರಾಣಿಗಳನ್ನು ಕೊಲ್ಲಲು ಬಳಸುವ ವಿಷದ ಪ್ಯಾಕೆಟ್ ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ನೀರನ್ನು ಪರೀಕ್ಷೆಗಾಗಿ ಲ್ಯಾಬ್‌ಗೆ ಕಳುಹಿಸಲಾಗುವುದು ಮತ್ತು ಈ ಸಂಬಂಧ ಐಪಿಸಿ ಸೆಕ್ಷನ್ 328 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಶಾಲೆಯಲ್ಲಿ ಸಿಬ್ಬಂದಿಗಳ ನಡುವೆ ವೈಮನಸ್ಸು ಇರುವುದು ಪತ್ತೆಯಾಗಿದೆ. ನಿರ್ದಿಷ್ಟ ವ್ಯಕ್ತಿಗೆ ಸಮಸ್ಯೆಯಾಗುವಂತೆ ಮಾಡಲು ನೀರಿನಲ್ಲಿ ವಿಷ ಬೆರೆಸಲಾಗಿದೆ ಎಂದು ಶಂಕಿಸಲವಾಗಿದೆ. ಆದರೆ, ವಿಸ್ತ್ಡತ ತನಿಖೆಯಿಂದ ಮಾತ್ರ ವಿಚಾರ ಬೆಳಕಿಗೆ ಬರಬೇಕಿದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com