ಮದುವೆ ಖಾಸಗಿತನದ ಹಕ್ಕನ್ನು ಕಸಿದುಕೊಳ್ಳುವುದಿಲ್ಲ: ಕರ್ನಾಟಕ ಹೈಕೋರ್ಟ್

ವಿವಾಹವು ವ್ಯಕ್ತಿಯ ವೈಯಕ್ತಿಕ ಮಾಹಿತಿಯನ್ನು ಬಹಿರಂಗಪಡಿಸುವ ಕಾರ್ಯವಿಧಾನದ ಹಕ್ಕುಗಳನ್ನು ಕಸಿದುಕೊಳ್ಳುವುದಿಲ್ಲ ಎಂದು ಹೈಕೋರ್ಟ್ ವಿಭಾಗೀಯ ಪೀಠ ಹೇಳಿದೆ.
ಕರ್ನಾಟಕ ಹೈಕೋರ್ಟ್
ಕರ್ನಾಟಕ ಹೈಕೋರ್ಟ್

ಬೆಂಗಳೂರು: ವಿವಾಹವು ವ್ಯಕ್ತಿಯ ವೈಯಕ್ತಿಕ ಮಾಹಿತಿಯನ್ನು ಬಹಿರಂಗಪಡಿಸುವ ಕಾರ್ಯವಿಧಾನದ ಹಕ್ಕುಗಳನ್ನು ಕಸಿದುಕೊಳ್ಳುವುದಿಲ್ಲ ಎಂದು ಹೈಕೋರ್ಟ್ ವಿಭಾಗೀಯ ಪೀಠ ಹೇಳಿದೆ.

ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶ ತಳ್ಳಿಹಾಕಿದ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಮತ್ತು ನ್ಯಾಯಮೂರ್ತಿ ವಿಜಯಕುಮಾರ್ ಎ ಪಾಟೀಲ್ ಅವರನ್ನೊಳಗೊಂಡ ವಿಭಾಗೀಯ ಪೀಠ, ಮಾಹಿತಿ ಕೇಳುವ ವ್ಯಕ್ತಿ ಪತ್ನಿಯಾಗಿದ್ದರೂ ಆಧಾರ್ ಕಾಯ್ದೆಯ ಸೆಕ್ಷನ್ 33 ರ ಪ್ರಕಾರ ಕಾರ್ಯವಿಧಾನವನ್ನು ಅನುಸರಿಸಬೇಕು ಎಂದು ಹೇಳಿದೆ.

ವೈವಾಹಿಕ ಸಂಬಂಧದ ಆಧಾರದ ಮೇಲೆ ಪತ್ನಿಯು ಪತಿಯ ಆಧಾರ್ ಸಂಖ್ಯೆ ಅಥವಾ ಇನ್ನಾವುದೇ ವೈಯಕ್ತಿಕ ಮಾಹಿತಿಯನ್ನು ಪಡೆಯಲು ಸಾಧ್ಯವಿಲ್ಲ ಎಂದು ಧಾರವಾಡ ಹೈಕೋರ್ಟ್ ಪೀಠ ಹೇಳಿದೆ. ಅಲ್ಲದೆ ಕಾನೂನಿನ ಚೌಕಟ್ಟಿನೊಳಗೆ ಸ್ವಾಯತ್ತತೆ ಮತ್ತು ಗೌಪ್ಯತೆ ಹಕ್ಕುಗಳ ರಕ್ಷಣೆಯನ್ನು ಒತ್ತಿಹೇಳಿದೆ.

ಭಾರತದ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರದ ಉಪ ಮಹಾನಿರ್ದೇಶಕರು ಮತ್ತು ಎಫ್‌ಎಎ ಕೇಂದ್ರೀಯ ಸಾರ್ವಜನಿಕ ಮಾಹಿತಿ ಅಧಿಕಾರಿ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿಗಳಾದ ಎಸ್‌ ಸುನಿಲ್‌ ದತ್‌ ಯಾದವ್ ಮತ್ತು ವಿಜಯಕುಮಾರ್‌ ಎ. ಪಾಟೀಲ್‌ ನೇತೃತ್ವದ ವಿಭಾಗೀಯ ಪೀಠವು ಇತ್ಯರ್ಥಪಡಿಸಿದೆ.

ಸೆಕ್ಷನ್ 33(1) ಪ್ರಕಾರ, ಮಾಹಿತಿಯನ್ನು ಬಹಿರಂಗಪಡಿಸಲು ಆದೇಶ ರವಾನಿಸುವ ಅಧಿಕಾರವನ್ನು ಹೈಕೋರ್ಟ್‌ ನ್ಯಾಯಾಧೀಶರಿಗಿಂತ ಮೇಲ್ಮಟ್ಟದ ನ್ಯಾಯಾಲಯಕ್ಕೆ ನೀಡಲಾಗಿದೆ.

ಆಧಾರ್ ಮಾಹಿತಿ ಕೋರಿದ್ದ ಪತ್ನಿ
ಈ ಪ್ರಕರಣದಲ್ಲಿ ಪತ್ನಿಯು ಪತಿಯ ಆಧಾರ್‌ ಕಾರ್ಡ್‌ನಲ್ಲಿನ ಮಾಹಿತಿ ಕೋರಿದ್ದರು. ಹುಬ್ಬಳ್ಳಿ ಮಹಾನಗರ ನಿವಾಸಿಯಾದ ಮಹಿಳೆಯು 2005ರ ನವೆಂಬರ್‌ನಲ್ಲಿ ವಿವಾಹವಾಗಿದ್ದರು. ದಂಪತಿಗೆ ಹೆಣ್ಣು ಮಗುವಿದೆ. ಪತಿಯ ವಿರುದ್ಧ ವಿಚ್ಛೇದನಕ್ಕೆ ದಾವೆ ಹೂಡಿದ್ದ ಪತ್ನಿಗೆ ಕೌಟುಂಬಿಕ ನ್ಯಾಯಾಲಯವು 10,000 ಜೀವನಾಂಶ ಹಾಗೂ ಹೆಣ್ಣು ಮಗುವಿಗೆ 5,000 ಜೀವನಾಂಶ ನೀಡಲು ಆದೇಶಿಸಿತ್ತು. ಆದರೆ ಪತಿ ಎಲ್ಲಿದ್ದಾನೆ ಎಂಬುದನ್ನು ಪತ್ತೆಯಾಗಿದ್ದರಿಂದ ನ್ಯಾಯಾಲಯದ ಈ ಆದೇಶವನ್ನು ಜಾರಿಗೊಳಿಸಿರಿರಲಿಲ್ಲ. ಹೀಗಾಗಿ ಪತ್ನಿಯು ಆರ್‌ಟಿಐ ಕಾಯಿದೆ ಅಡಿ ಯುಐಡಿಎಐ ಮೆಟ್ಟಿಲೇರಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com