ಗೃಹಲಕ್ಷ್ಮಿ ಯೋಜನೆ: ನಾಡದೇವತೆ ಚಾಮುಂಡೇಶ್ವರಿಗೆ 59 ತಿಂಗಳ ಹಣ ಸಂದಾಯ ಮಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಅತ್ಯಂತ ಜನಪ್ರಿಯವಾದದ್ದು ಕುಟುಂಬದ ಯಜಮಾನಿ ಖಾತೆಗೆ ನೀಡುವ ತಿಂಗಳಿಗೆ 2 ಸಾವಿರ ರೂಪಾಯಿಗಳ ಗೃಹಲಕ್ಷ್ಮಿ ಯೋಜನೆ. ಈ ಯೋಜನೆಯ ಯಶಸ್ಸಿಗೆ ಈ ಹಿಂದೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ನಾಡಿನ ಅಧಿದೇವತೆ ಮೈಸೂರು ಚಾಮುಂಡಿ ಬೆಟ್ಟಕ್ಕೆ ತೆರಳಿ ದೇವಿಗೆ ಪೂಜೆ ಸಲ್ಲಿಸಿ ಹರಕೆ ಒಪ್ಪಿಸಿದ್ದರು.
ಚಾಮುಂಡಿ ದೇವಿ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಚಾಮುಂಡಿ ದೇವಿ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಅತ್ಯಂತ ಜನಪ್ರಿಯವಾದದ್ದು ಕುಟುಂಬದ ಯಜಮಾನಿ ಖಾತೆಗೆ ನೀಡುವ ತಿಂಗಳಿಗೆ 2 ಸಾವಿರ ರೂಪಾಯಿಗಳ ಗೃಹಲಕ್ಷ್ಮಿ ಯೋಜನೆ. ಈ ಯೋಜನೆಯ ಯಶಸ್ಸಿಗೆ ಈ ಹಿಂದೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ನಾಡಿನ ಅಧಿದೇವತೆ ಮೈಸೂರು ಚಾಮುಂಡಿ ಬೆಟ್ಟಕ್ಕೆ ತೆರಳಿ ದೇವಿಗೆ ಪೂಜೆ ಸಲ್ಲಿಸಿ ಹರಕೆ ಒಪ್ಪಿಸಿದ್ದರು. ಈ ಹಿಂದೆ ಮಹಿಳಾ ಮತ್ತು ಮಕ್ಕಳ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕೂಡ ಚಾಮುಂಡಿ ಬೆಟ್ಟಕ್ಕೆ ಹೋಗಿ ದೇವತೆ ಮುಂದೆ ಹರಕೆ ಸಲ್ಲಿಸಿದ್ದರು. 

ನಾಡದೇವಿಗೆ 59 ತಿಂಗಳ ಹಣ ಸಂದಾಯ ಮಾಡಿದ ಸಚಿವೆ: ಈ ಹಿಂದೆ ಪ್ರತಿ ತಿಂಗಳು ಚಾಮುಂಡಿ ದೇವಸ್ಥಾನಕ್ಕೆ ಯೋಜನೆಯ ಹಣ ನೀಡುವಂತೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​ ಅವರಿಗೆ ಎಂಎಲ್​ಸಿ ದಿನೇಶ್ ಗೂಳಿಗೌಡ ಪತ್ರ ಬರೆದಿದ್ದರು. ಬಳಿಕ ಈ ಬಗ್ಗೆ ಕ್ರಮ ವಹಿಸುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಡಿಸಿಎಂ ಡಿಕೆ ಶಿವಕುಮಾರ್ ಸೂಚಿಸಿದ್ದರು. ಇದರ ಬೆನ್ನಲ್ಲೆ ಈಗ ಪ್ರತಿ ತಿಂಗಳು ನಾಡದೇವತೆ ತಾಯಿ ಚಾಮುಂಡೇಶ್ವರಿಗೂ 2 ಸಾವಿರ ಅರ್ಪಣೆ ಮಾಡಲಾಗುತ್ತಿದ್ದು 59 ತಿಂಗಳ ಒಟ್ಟು ಮೊತ್ತವನ್ನು ದೇವಸ್ಥಾನಕ್ಕೆ ಸಂದಾಯ ಮಾಡಲಾಗಿದೆ.

ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ನಾಡದೇವತೆಗೆ 59 ತಿಂಗಳ ಒಟ್ಟು ಹಣ 1,18,000 ರೂಗಳನ್ನು ಸಂದಾಯ ಮಾಡಲಾಗಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ತಮ್ಮ ವೈಯಕ್ತಿಕ ಹಣವನ್ನು ತಾಯಿ ಚಾಮುಂಡೇಶ್ವರಿಗೆ ಅರ್ಪಿಸಿದ್ದಾರೆ. ಪ್ರತಿ ತಿಂಗಳು 2 ಸಾವಿರ ರೂಪಾಯಿಯಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೆಸರಿನಲ್ಲಿ ಹಣ ಸಂದಾಯವಾಗಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com