ಶಿವಮೊಗ್ಗ: ಜಿಲ್ಲೆಯಲ್ಲಿ ಸಿಡಿಲು ಬಡಿದು ಇಬ್ಬರು ಸಹೋದರರು ಮೃತಪಟ್ಟಿರುವ ದಾರುಣ ಘಟನೆ ಬುಧವಾರ ನಡೆದಿದೆ. ಭದ್ರಾವತಿ ಪಟ್ಟಣದ ಹುಣಸಕಟ್ಟೆ ಜಂಕ್ಷನ್‌ನಲ್ಲಿ ಈ ಘಟನೆ ನಡೆದಿದೆ.
ಮೃತರನ್ನು 32 ವರ್ಷದ ಬೀರು (ಎಸ್ ಬೀರೇಶ್) ಮತ್ತು 30 ವರ್ಷದ ಎಸ್ ಸುರೇಶ್ ಎಂದು ಗುರುತಿಸಲಾಗಿದೆ.
ಇಬ್ಬರೂ ತಮ್ಮ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಸಾವಿಗೀಡಾಗಿದ್ದಾರೆ. ಕಟಾವಿಗೆ ಸಿದ್ಧವಾಗಿದ್ದ ಭತ್ತದ ಬೆಳೆಗೆ ಕಾವಲು ಕಾಯಲು ಸಹೋದರರಿಬ್ಬರು ಹೋಗಿದ್ದರು.
ರಾತ್ರಿ ಗದ್ದೆಗೆ ಕಾವಲಿಗೆಂದು ಹೋಗಿದ್ದವರು ಬೆಳಗ್ಗೆ ಮನೆಗೆ ಬಾರದ ಕಾರಣ ಆತಂಕಗೊಂಡಿದ್ದ ಕುಟುಬಸ್ಥರು ಗದ್ದೆಗೆ ತೆರಳಿ ನೋಡಿದಾಗ, ಸಹೋದರರಿಬ್ಬರೂ ಅಲ್ಲೇ ಸಾವಿಗೀಡಾಗಿರುವುದು ತಿಳಿದುಬಂದಿದೆ. ಇಬ್ಬರ ಸಾವಿಗೆ ಕುಟುಂಬವರ ಆಕ್ರಂದನ ಮುಗಿಲು ಮುಟ್ಟಿದೆ.
ಮೃತದೇಹಗಳನ್ನು ಭದ್ರಾವತಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಭದ್ರಾವತಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಶಿವಮೊಗ್ಗ ನಗರ, ಭದ್ರಾವತಿ, ಶಿಕಾಪಿಪುರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಮಂಗಳವಾರ ರಾತ್ರಿಯಿಡೀ ಭಾರಿ ಮಳೆ ಸುರಿದಿದೆ. ಬುಧವಾರೂ ಜಿಲ್ಲೆಯ ಹಲವೆಡೆ ಮೋಡ ಕವಿದ ವಾತಾವರಣ ಮುಂದುವರಿದಿದೆ.
Advertisement