ದರೋಡೆಗೆ ಯತ್ನಿಸಿ ನೇಪಾಳಿ ವ್ಯಕ್ತಿಯ ಹತ್ಯೆ: 8 ಮಂದಿ ಆರೋಪಿಗಳ ಬಂಧನ

ದರೋಡೆಗೆ ಯತ್ನಿಸಿ ನೇಪಾಳಿ ಮೂಲಕ ವ್ಯಕ್ತಿಯೊಬ್ಬರನ್ನು ಹತ್ಯೆ ಮಾಡಿದ್ದ 8 ಮಂದಿ ಆರೋಪಿಗಳನ್ನು ಆರ್‌ಎಂಸಿ ಯಾರ್ಡ್ ಪೊಲೀಸರು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ದರೋಡೆಗೆ ಯತ್ನಿಸಿ ನೇಪಾಳಿ ಮೂಲಕ ವ್ಯಕ್ತಿಯೊಬ್ಬರನ್ನು ಹತ್ಯೆ ಮಾಡಿದ್ದ 8 ಮಂದಿ ಆರೋಪಿಗಳನ್ನು ಆರ್‌ಎಂಸಿ ಯಾರ್ಡ್ ಪೊಲೀಸರು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ.

ಆರೋಪಿಗಳನ್ನು ಟಿ ಚಂದ್ರು (23), ಸಚಿನ್ (19), ಕಿರಣ್ ಕುಮಾರ್ (19), ನಿಖಿಲ್ (21), ಎಚ್ ಮುನೇಶ್ (22), ಜೀವನ್ (19), ಕಾರ್ತಿಕ್ (19) ಮತ್ತು ಟಿಪಿ ಮದನ್ (20) ಎಂದು ಗುರುತಿಸಲಾಗಿದೆ.

ಆರೋಪಿಗಳಿಂದ 8 ಮೊಬೈಲ್ ಗಳು, ರೂ.5,000 ನಗದು ಹಾಗೂ ಗೂಡ್ಸ್ ವಾಹನ ಜಪ್ತಿ ಮಾಡಲಾಗಿದೆ. ಕೆಲ ದಿನಗಳ ಹಿಂದೆ ಕೆಲಸ ಮುಗಿಸಿಕೊಂಡು ಮನೆಗೆ ಹೋಗಲು ಕ್ಯಾಬ್ ಕಾಯುತ್ತಿದ್ದ ನೇಪಾಳ ಮೂಲದ ಬಹದ್ದೂರ್, ವಿಜಯ್ ಹಾಗೂ ಅನಿಲ್ ಬೋರಾ ಮೇಲೆ ಹಲ್ಲೆ ನಡೆಸಿ, ಮೊಬೈಲ್ ದೋಚಿ ಕಿಡಿಗೇಡಿಗಳು ಪರಾರಿಯಾಗಿದ್ದರು.

ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಿಜಯ್ ಬೋರಾ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದ. ಈ ಸಂಬಂಧ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದರು. ಇದೀಗ ಆರೋಪಿಗಳನ್ನು ಬಂಧನಕ್ಕೊಳಪಡಿಸಿರುವ ಪೊಲೀಸರು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com