ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣ: ಮ್ಯಾಜಿಸ್ಟ್ರೇಟ್ ತನಿಖಾ ವರದಿ ಅಂಗೀಕರಿಸಿದ ರಾಜ್ಯ ಸರ್ಕಾರ

ರಾಜ್ಯ ರಾಜಧಾನಿ ಬೆಂಗಳೂರಿನ ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣ ಸಂಬಂಧ ಮ್ಯಾಜಿಸ್ಟ್ರೇಟ್ ತನಿಖಾ ವರದಿಯನ್ನು ರಾಜ್ಯ ಸರಕಾರ ಶನಿವಾರ ಅಂಗೀಕರಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣ ಸಂಬಂಧ ಮ್ಯಾಜಿಸ್ಟ್ರೇಟ್ ತನಿಖಾ ವರದಿಯನ್ನು ರಾಜ್ಯ ಸರಕಾರ ಶನಿವಾರ ಅಂಗೀಕರಿಸಿದೆ.

2020ನೇ ಸಾಲಿನಲ್ಲಿ ಬೆಂಗಳೂರು ನಗರ ವ್ಯಾಪ್ತಿಯ ಕೆಜಿ ಹಳ್ಳಿ ಮತ್ತು ಡಿಜಿ ಹಳ್ಳಿಯಲ್ಲಿ ನಡೆದ ಅಹಿತಕರ ಘಟನೆಯಲ್ಲಿ ಮೂವರು ಮೃತಪಟ್ಟಿರುವುದು. ಗಲಭೆಗೆ ಕಾರಣಗಳು, ಘಟನಾವಳಿಗಳ ಸರಣಿ ಮತ್ತು ಸನ್ನಿವೇಶಗಳ ಬಗ್ಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳು ನಡೆಸಿದ ಮ್ಯಾಜಿಸ್ಟೀರಿಯಲ್ ವಿಚಾರಣಾ ವರದಿಯನ್ನು ಸರಕಾರ ಅಂಗೀಕರಿಸಿದೆ ಎಂದು ರಾಜಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಘಟನೆಯ ಬಗ್ಗೆ ಸಂಪೂರ್ಣವಾದ ತನಿಖೆಯನ್ನು ನಡೆಸಿ 2023ರ ಜನವರಿ ತಿಂಗಳಲ್ಲಿ ಮ್ಯಾಜಿಸ್ಟ್ರೇಟ್ ತನ್ನ ವರದಿಯನ್ನು ನೀಡಿತ್ತು. ಈ ವರದಿಯಲ್ಲಿ ಪೊಲೀಸರ ಗೋಲಿಬಾರ್ ಕ್ರಮ ಸರಿಯಿದೆ ಎಂದು ಹೇಳಲಾಗಿತ್ತು. ಅಂದು ಪೊಲಿಸರು ಗೋಲಿಬಾರ್ ಮಾಡಿರದಿದ್ದರೆ ಇಡೀ ಠಾಣೆಗೆ ಬೆಂಕಿ ಹಚ್ಚುತ್ತಿದ್ದರು. ಸ್ವಯಂ ರಕ್ಷಣೆ ಹಾಗೂ ಸಾರ್ವಜನಿಕ ಆಸ್ತಿ ಕಾಪಾಡಲು ಗೋಲಿಬಾರ್ ನಡೆದಿದೆ ಎಂದು ರಿಪೋರ್ಟ್ ನಲ್ಲಿ ಉಲ್ಲೇಖ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ವರದಿಯನ್ನು ಕಾಂಗ್ರೆಸ್ ಆಗ ಒಪ್ಪಿರಲಿಲ್ಲ. ಚುನಾವಣಾ ಸಮಯದಲ್ಲಿ ಮುಸ್ಲಿಂ ಸಮುದಾಯವನ್ನು ಗುರಿ ಮಾಡಲಾಗಿದೆ ಎಂದು ಟೀಕಿಸಿತ್ತು. ಆದರೆ, ಇದೀಗ ಅಧಿಕಾರಕ್ಕೆ ಬಂದ ಬಳಿಕ ಇದೇ ವರದಿಯನ್ನು ಕಾಂಗ್ರೆಸ್ ಸರ್ಕಾರ ಒಪ್ಪಿಕೊಂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com