ಸಾಂದರ್ಭಿಕ ಚಿತ್ರ
ರಾಜ್ಯ
ಕೆ-ಸೆಟ್ ಅರ್ಜಿ ಸಲ್ಲಿಕೆ ಅವಧಿ ವಿಸ್ತರಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನಡೆಸುವ ಕೆ-ಸೆಟ್ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಿಸ್ತರಿಸಿ ಆದೇಶ ಹೊರಡಿಸಿದೆ.
ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನಡೆಸುವ ಕೆ-ಸೆಟ್ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಿಸ್ತರಿಸಿ ಆದೇಶ ಹೊರಡಿಸಿದೆ.
ಈ ಮೊದಲು ಹೊರಡಿಸಿದ್ದ ಪ್ರಕಟಣೆಯ ಪ್ರಕಾರ, ಅರ್ಜಿ ಸಲ್ಲಿಕೆಗೆ ಅಕ್ಟೋಬರ್ 3 ಕೊನೆ ದಿನವಾಗಿತ್ತು. ಇದೀಗ ಈ ಗಡುವನ್ನು ಅಕ್ಟೋಬರ್ 9 ರವರೆಗೂ ವಿಸ್ತರಿಸಲಾಗಿದೆ. ಈ ಮೂಲಕ ಅಭ್ಯರ್ಥಿಗಳು ಕೊನೆಯ ದಿನದಂದು ಸಂಜೆ 5 ಗಂಟೆಯ ವರೆಗೂ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಶನಿವಾರ ನೀಡಿರುವ ಪತ್ರಿಕಾ ಪ್ರಕಟಣೆಯಲ್ಲಿ, ಡಿಜಿಟಲೀಕರಣಗೊಂಡ ಅಂಚೆ ಕಚೇರಿಗಳ ಮೂಲಕ ಶುಲ್ಕ ಪಾವತಿಸಲು ಅ. 11ರವರೆಗೆ ಅವಕಾಶವಿದೆ ಎಂದು ತಿಳಿಸಿದ್ದಾರೆ.
ನವೆಂಬರ್ 5ರಂದು ಪರೀಕ್ಷೆ ನಡೆಯಲಿದ್ದು, ಸಮಗ್ರ ಅಧಿಸೂಚನೆ, ಪಠ್ಯಕ್ರಮ ಮತ್ತು ಅಪ್ಲಿಕೇಶನ್ ಲಿಂಕ್ ಸೇರಿದಂತೆ ಹೆಚ್ಚಿನ ವಿವರಗಳನ್ನು ಕೆಇಎ ವೆಬ್‌ಸೈಟ್‌ನಲ್ಲಿ (http://kea.kar.nic.in) ಕಾಣಬಹುದು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ