ಬೆಂಗಳೂರು: ಒಂಟಿ ಮಹಿಳೆಯರನ್ನು ಗುರಿಯಾಗಿಸಿಕೊಂಡು ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದ ವ್ಯಕ್ತಿ ಬಂಧನ

ನಗರದ ಒಂಟಿ ಮಹಿಳೆಯರನ್ನು ಗುರಿಯಾಗಿಸಿಕೊಂಡು, ನಿರ್ಜನ ಪ್ರದೇಶಗಳಲ್ಲಿ ಲೈಂಗಿಕ ಕಿರುಕುಳ ನೀಡುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಸಂತ್ರಸ್ತರೊಬ್ಬರು ಆರೋಪಿ ವಿರುದ್ಧ ದೂರು ದಾಖಲಿಸಿದಾಗ ಅಪರಾಧ ಬೆಳಕಿಗೆ ಬಂದಿದೆ. ನಂತರ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಯನ್ನು ಬಂಧಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ನಗರದ ಒಂಟಿ ಮಹಿಳೆಯರನ್ನು ಗುರಿಯಾಗಿಸಿಕೊಂಡು, ನಿರ್ಜನ ಪ್ರದೇಶಗಳಲ್ಲಿ ಲೈಂಗಿಕ ಕಿರುಕುಳ ನೀಡುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಸಂತ್ರಸ್ತರೊಬ್ಬರು ಆರೋಪಿ ವಿರುದ್ಧ ದೂರು ದಾಖಲಿಸಿದಾಗ ಅಪರಾಧ ಬೆಳಕಿಗೆ ಬಂದಿದೆ. ನಂತರ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತನನ್ನು ಬೈಕ್ ಮೆಕ್ಯಾನಿಕ್ ಮತ್ತು ವೈಯಾಲಿಕಾವಲ್ ನಿವಾಸಿ ಅಯ್ಯಪ್ಪ ಎಂದು ಗುರುತಿಸಲಾಗಿದೆ.

ವಿಚಾರಣೆ ವೇಳೆ, ಅಯ್ಯಪ್ಪ ತಾನು ಕೆಲಸ ಮಾಡುತ್ತಿದ್ದ ಗ್ಯಾರೇಜ್‌ನಿಂದ ಬೈಕ್ ತೆಗೆದುಕೊಂಡು ಪ್ರತಿದಿನ ಒಂಟಿ ಮಹಿಳೆಯನ್ನು ಹಿಂಬಾಲಿಸುತ್ತಿದ್ದ ಎಂದು ಪೊಲೀಸರಿಗೆ ತಿಳಿಸಿದ್ದಾರೆ.

ನಿರ್ಜನ ಪ್ರದೇಶದಲ್ಲಿ ಆತ ಅವರನ್ನು ಅನುಚಿತವಾಗಿ ಸ್ಪರ್ಶಿಸುತ್ತಿದ್ದ ಎಂದು ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com