ಬೆಂಗಳೂರು: ಈಜಿಪುರ ಮೇಲ್ಸೇತುವೆ ಕಾಮಗಾರಿ ಶೀಘ್ರದಲ್ಲೇ ಪುನರಾರಂಭ!

ಶ್ರೀನಿವಾಗಿಲು ಮತ್ತು ಸರ್ಜಾಪುರ ರಸ್ತೆ ಜಂಕ್ಷನ್ ನಡುವಿನ ಈಜಿಪುರ ಮೇಲ್ಸೇತುವೆ ಕಾಮಗಾರಿ ಯೋಜನೆ 15-20 ದಿನಗಳಲ್ಲಿ ಪುನರಾರಂಭಗೊಳ್ಳಲಿದೆ ಎಂದು ತಿಳಿದುಬಂದಿದೆ.
ರಸ್ತೆಯ ಮಧ್ಯದಲ್ಲಿ ಬಿದ್ದಿರುವ ಅವಶೇಷಗಳು.
ರಸ್ತೆಯ ಮಧ್ಯದಲ್ಲಿ ಬಿದ್ದಿರುವ ಅವಶೇಷಗಳು.

ಬೆಂಗಳೂರು: ಶ್ರೀನಿವಾಗಿಲು ಮತ್ತು ಸರ್ಜಾಪುರ ರಸ್ತೆ ಜಂಕ್ಷನ್ ನಡುವಿನ ಈಜಿಪುರ ಮೇಲ್ಸೇತುವೆ ಕಾಮಗಾರಿ ಯೋಜನೆ 15-20 ದಿನಗಳಲ್ಲಿ ಪುನರಾರಂಭಗೊಳ್ಳಲಿದೆ ಎಂದು ತಿಳಿದುಬಂದಿದೆ.

ಸಚಿವ ರಾಮಲಿಂಗಾ ರೆಡ್ಡಿಯವರು ಮಾತನಾಡಿ, ಚುನಾವಣಾ ಪ್ರಣಾಳಿಕೆಯಲ್ಲಿ ಅಧಿಕಾರಕ್ಕೆ ಬಂದ ಬಳಿಕ ಬಾಕಿ ಉಳಿದಿರುವ ಯೋಜನೆಯನ್ನು ಪೂರ್ಣಗೊಳಿಸುವುದಾಗಿ ಭರವಸೆ ನೀಡಲಾಗಿತ್ತು.  ಯೋಜನೆ ಪೂರ್ಣಗೊಳಿಸಲು ಹೈದರಾಬಾದ್ ಮೂಲದ ಏಜೆನ್ಸಿ BSCPL ಇನ್‌ಫ್ರಾಸ್ಟ್ರಕ್ಚರ್ ಲಿಮಿಟೆಡ್‌ನೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಯೋಜನೆಯು 2017 ರಲ್ಲಿ ಪ್ರಾರಂಭವಾಗಿತ್ತು. ಆದರೆ 2019 ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಸ್ಥಗಿತಗೊಂಡಿತ್ತು. ಯೋಜನೆ ಕೈಬಿಟ್ಟಾಗ ಶೇ 32ರಷ್ಟು ಪೂರ್ಣಗೊಂಡಿತ್ತು ಎಂದು ಮಾಹಿತಿ ನೀಡಿದರು.

ಬಿಬಿಎಂಪಿ ಯೋಜನಾ ವಿಭಾಗದ ಮುಖ್ಯ ಎಂಜಿನಿಯರ್ ಎಂ.ಲೋಕೇಶ್ ಅವರು ಮಾತನಾಡಿ, ‘ಮುಂದಿನ 15 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಲು ಖಾಸಗಿ ಸಂಸ್ಥೆ ಮುಂದಾಗಿದೆ. 176 ಕೋಟಿ ರೂ.ಗಳ ಈ ಯೋಜನೆಯು 2.5 ಕಿಲೋಮೀಟರ್‌ಗಳವರೆಗೆ ವಿಸ್ತರಿಸಿದ್ದು, ಬೆಂಗಳೂರು ದಕ್ಷಿಣ ಮತ್ತು ಪೂರ್ವಕ್ಕೆ ಸಂಪರ್ಕ ಕಲ್ಪಿಸುತ್ತದೆ ಎಂದು ಹೇಳಿದ್ದಾರೆ.

ಶ್ರೀನಿವಾಗಿಲು ಜಂಕ್ಷನ್, ಈಜಿಪುರ ಜಂಕ್ಷನ್, ಸೋನಿ ವರ್ಲ್ಡ್ ಜಂಕ್ಷನ್, ಕೋರಮಂಗಲ ಬಿಡಿಎ ಕಾಂಪ್ಲೆಕ್ಸ್ ಜಂಕ್ಷನ್, ಮಡಿವಾಳ-ಸರ್ಜಾಪುರ ವಾಟರ್ ಟ್ಯಾಂಕ್ ಜಂಕ್ಷನ್ ಮತ್ತು ಕೇಂದ್ರೀಯ ಸದನ್ ಜಂಕ್ಷನ್‌ನಂತಹ ಪ್ರಮುಖ ಟ್ರಾಫಿಕ್ ಜಂಕ್ಷನ್‌ಗಳನ್ನು ತಪ್ಪಿಸಲು ಈ ಫ್ಲೈಓವರ್ ಮುಖ್ಯವಾಗಿದೆ.

ಕೋರಮಂಗಲ 3ನೇ ಬ್ಲಾಕ್ ನಿವಾಸಿ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ನಿತಿನ್ ಶೇಷಾದ್ರಿ ಮಾತನಾಡಿ, ಬಾಕಿ ಉಳಿದಿರುವ ಕಾಮಗಾರಿಯಿಂದ ಸಾಕಷ್ಟು ಸಮಸ್ಯೆಗಳನ್ನು ಅನುಭವಿಸಿದ್ದೇವೆ. ಶೀಘ್ರದಲ್ಲೇ ಕಾಮಗಾರಿ ಆರಂಭವಾಗುವುದು ಸಂತಸ ತಂದಿದೆ. ಯೋಜನೆಗಾಗಿ ಸೇಂಟ್ ಜಾನ್ಸ್ ಆಸ್ಪತ್ರೆ ಬದಿಯಲ್ಲಿ ಮತ್ತು ಹೊಸೂರು ರಸ್ತೆಯಲ್ಲಿ ಮಡಿವಾಳಕ್ಕೆ ಸಂಪರ್ಕ ಕಲ್ಪಿಸುವ ಭೂಸ್ವಾಧೀನ ಕಾರ್ಯವೂ ಪೂರ್ಣಗೊಳ್ಳುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com