ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
ರಾಜ್ಯ
ಕಾರ್ ಪೂಲಿಂಗ್ ನಿಷೇಧಿಸಿಲ್ಲ, ಇದು ಸುಳ್ಳು ಸುದ್ದಿ: ಸಚಿವ ರಾಮಲಿಂಗಾರೆಡ್ಡಿ
ಸಂಚಾರ ದಟ್ಟಣೆಗೆ ಪರಿಹಾರವಾಗಿದ್ದ 'ಕಾರ್ ಪೂಲಿಂಗ್' ನಿಷೇಧ ಮಾಡಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ ಎಂದು ವರದಿಯಾಗಿತ್ತು. ಆದರೆ, ಇದು ಸುಳ್ಳು ಸುದ್ದಿ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೋಮವಾರ ಹೇಳಿದ್ದಾರೆ.
ಬೆಂಗಳೂರು: ಸಂಚಾರ ದಟ್ಟಣೆಗೆ ಪರಿಹಾರವಾಗಿದ್ದ 'ಕಾರ್ ಪೂಲಿಂಗ್' ನಿಷೇಧ ಮಾಡಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ ಎಂದು ವರದಿಯಾಗಿತ್ತು. ಆದರೆ, ಇದು ಸುಳ್ಳು ಸುದ್ದಿ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೋಮವಾರ ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಚಿವರು, ಮೊದಲು ಅವರು ಸರ್ಕಾರದಿಂದ ಅನುಮತಿಯನ್ನು ಪಡೆದುಕೊಳ್ಳಲಿ. ಅವರು ಅನುಮತಿ ತೆಗೆದುಕೊಳ್ಳದಿರುವಾಗ ನಿಷೇಧದ ಪ್ರಶ್ನೆ ಎಲ್ಲಿದೆ ? ಎಂದು ಪ್ರಶ್ನಿಸಿದ್ದಾರೆ.
ಪ್ರತಿಯೊಬ್ಬರೂ ಸರ್ಕಾರದ ನಿಯಮಗಳು ಮತ್ತು ನಿಬಂಧನೆಗಳನ್ನು ಅನುಸರಿಸಬೇಕು. ಬಿಳಿ ನಂಬರ್ ಪ್ಲೇಟ್ ಗಳನ್ನು ಹೊಂದಿರುವ ವಾಣಿಜ್ಯೇತರ ಖಾಸಗಿ ವಾಹನಗಳನ್ನು ಕಾರ್ ಪೂಲಿಂಗ್ ಉದ್ದೇಶಗಳಿಗಾಗಿ ಬಳಸುವುದು ಕಾನೂನು ಬಾಹಿರವಾಗಿದೆ ಎಂದು ಅವರು ಹೇಳಿದ್ದಾರೆ.
ಹಳದಿ ಬಣ್ಣದ ನಂಬರ್ ಪ್ಲೇಟ್ ಗಳನ್ನು ಹೊಂದಿರುವ ವಾಣಿಜ್ಯ ವಾಹನಗಳನ್ನು ಸೂಕ್ತ ಮಾರ್ಗಸೂಚಿಗಳನ್ನು ಅನುಸರಿಸುವ ಮೂಲಕ ಕಾರ್ ಪೂಲಿಂಗ್ ಗೆ ಬಳಸಬಹುದು ಎಂದು ಅವರು ತಿಳಿಸಿದ್ದಾರೆ.


