ಸರಗೂರು: ನಾಲೆಯಲ್ಲಿ ಮುಳುಗಿ ಒಂದೇ ಕುಟುಂಬದ ಮೂವರ ಸಾವು

ಆಕಸ್ಮಿಕವಾಗಿ ಕಾಲು ಜಾರಿ ನಾಲೆಯ ನೀರಿನಲ್ಲಿ ಮುಳುಗುತ್ತಿದ್ದ ಮಹಿಳೆಯನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ ಮೂವರು ನಾಲೆಯ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಂಗೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮೈಸೂರು: ಆಕಸ್ಮಿಕವಾಗಿ ಕಾಲು ಜಾರಿ ನಾಲೆಯ ನೀರಿನಲ್ಲಿ ಮುಳುಗುತ್ತಿದ್ದ ಮಹಿಳೆಯನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ ಮೂವರು ನಾಲೆಯ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಂಗೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ.

ತಾಲ್ಲೂಕಿನ ಚಂಗೌಡನಹಳ್ಳಿ ಗ್ರಾಮದ ಶಾಹೀರಾ ಭಾನು(20), ಶಾವರ ಭಾನು(35) ಮಹಮ್ಮದ್ ಕಪೀಲ್(42) ಮೃತ ದುರ್ದೈವಿಗಳು.

ಇವರು ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡು ಅಲ್ಲಿಯೇ ವಾಸವಾಗಿದ್ದರು. ಸರಗೂರಿನ ತಮ್ಮ ಅಜ್ಜಿಯ ತಿಥಿಕಾರ್ಯ ಮುಗಿಸಿ, ನುಗು ಜಲಾಶಯದ ಬಲದಂಡೆ ನಾಲೆಯಲ್ಲಿ ಕೈ ಕಾಲು ತೊಳೆಯಲು ಹೋಗಿದ್ದಾಗ ಆಯತಪ್ಪಿ ಕಾಲು ಜಾರಿ ಬಿದ್ದು ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಕಾಲು ಜಾರಿ ನಾಲೆಯೊಳಗೆ ಬಿದ್ದ ಶಾಹೀರಾ ಭಾನು ಅವರನ್ನು ತಾಯಿ ಶಾವರ ಬಾನು ರಕ್ಷಿಸಲು ಮುಂದಾಗಿದ್ದಾರೆ. ಆಗ ಶಾವರ ಬಾನು ನಾಲೆಯಲ್ಲಿ ಮುಳುಗುತ್ತಿದ್ದುದ್ದನ್ನು ಕಂಡ ಪತಿ ಮಹಮ್ಮದ್ ಕಪೀಲ್ ಕೂಡ ಇಬ್ಬರನ್ನು ರಕ್ಷಿಸಲು ಮುಂದಾದಾಗ ತಾವೂ ಮುಳುಗಿ ಸಾವನ್ನಪ್ಪಿದ್ದಾರೆ.

ಕೂಡಲೇ ಸರಗೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಮೂವರ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಸರಗೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಸರಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com