ರಾಜ್ಯದಲ್ಲಿ ಹಿಂದೂಗಳು ಬದುಕುವ ಹಾಗಿಲ್ಲವೇ, ಶಿವಮೊಗ್ಗದ ಮುಗ್ಧ ನಾಗರಿಕರ ಪ್ರಶ್ನೆಗಳಿಗೆ ‘ಜಾತ್ಯಾತೀತ’ ಸಿದ್ದರಾಮಯ್ಯ ಉತ್ತರಿಸುವಿರಾ?: ಬಿಜೆಪಿ ಪ್ರಶ್ನೆ

ಕೋಮು ಸೂಕ್ಷ್ಮ ಜಿಲ್ಲೆಯಾದ ಶಿವಮೊಗ್ಗ ಮತ್ತೊಮ್ಮೆ ಹಿಂದೂ ಮುಸ್ಲಿಂ ಸಮುದಾಯಗಳ ನಡುವೆ ಗದ್ದಲಕ್ಕೆ ಕಾರಣವಾಗಿದ್ದು, ಇಷ್ಟು ದಿನ ತಣ್ಣಗಿದ್ದ ಶಿವಮೊಗ್ಗ ಮತ್ತೆ ರಣರಂಗವಾಗಿದೆ. ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಿದ್ದು  ಪರಿಸ್ಥಿತಿ ಉದ್ವಿಗ್ನವಾಗಿದೆ. 
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ

ಶಿವಮೊಗ್ಗ: ಕೋಮು ಸೂಕ್ಷ್ಮ ಜಿಲ್ಲೆಯಾದ ಶಿವಮೊಗ್ಗ ಮತ್ತೊಮ್ಮೆ ಹಿಂದೂ ಮುಸ್ಲಿಂ ಸಮುದಾಯಗಳ ನಡುವೆ ಗದ್ದಲಕ್ಕೆ ಕಾರಣವಾಗಿದ್ದು, ಇಷ್ಟು ದಿನ ತಣ್ಣಗಿದ್ದ ಶಿವಮೊಗ್ಗ ಮತ್ತೆ ರಣರಂಗವಾಗಿದೆ. ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಿದ್ದು  ಪರಿಸ್ಥಿತಿ ಉದ್ವಿಗ್ನವಾಗಿದೆ. 

ಕಿಡಿಗೇಡಿಗಳು ಸಿಕ್ಕ ಸಿಕ್ಕ ಕಡೆ ಕಲ್ಲು ತೂರಿದ್ದು ಕಾರು, ಬೈಕ್, ಆಟೋಗಳು,ಹಲವು ಮನೆಗಳ ಕಿಟಕಿ ಗಾಜುಗಳು ಜಖಂಗೊಂಡಿವೆ. ಗಲಾಟೆಯಲ್ಲಿ ಮಹಿಳೆ, ಮಕ್ಕಳು ಸೇರಿ 7ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು ಆಸ್ಪತ್ರೆ ಸೇರಿದ್ದಾರೆ. ರಾಗಿಗುಡ್ಡ ಪ್ರದೇಶದಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದೆ. ಈ ಘಟನೆಗೆ ಕರ್ನಾಟಕ ಬಿಜೆಪಿ ಖಂಡಿಸಿದ್ದು, ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದೆ.

ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲೆಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಬಿಜೆಪಿ, ರಾಜ್ಯದಲ್ಲಿ ಹಿಂದೂಗಳು ಬದುಕುವ ಹಾಗಿಲ್ಲವಾ? ಹಿಂದೂಗಳಿಗೆ ರಕ್ಷಣೆ ಕೊಡುವುದಿಲ್ಲವೇ? ಶಿವಮೊಗ್ಗದ ಮುಗ್ಧ ನಾಗರಿಕರ ಪ್ರಶ್ನೆಗಳಿಗೆ ಉತ್ತರಿಸುವ ತಾಕತ್ತು ‘ಜಾತ್ಯಾತೀತ’ ಸಿದ್ದರಾಮಯ್ಯರಿಗಿದೆಯೇ? ಎಂದು ಪ್ರಶ್ನಿಸಿದೆ.

ಶಿವಮೊಗ್ಗದ ರಾಗಿಗುಡ್ಡ ಘಟನೆಗೆ ರಾಜ್ಯ ಸರ್ಕಾರದ ನೀತಿ, ವೈಫಲ್ಯಗಳೇ ಕಾರಣ. ಹಿಂದೂಗಳನ್ನು ಮುಗಿಸುತ್ತೇವೆ ಎಂದು ಹೇಳಿದ ಜಿಹಾದಿ ಸಂಘಟನೆಗಳಿಗೆ ಬೆಂಬಲವಾಗಿ ಕಾಂಗ್ರೆಸ್ ಸರ್ಕಾರ ನಿಂತಿರುವುದಕ್ಕೆ ಬೇರೇನು ಸಾಕ್ಷಿ ಬೇಕು. ಗಣೇಶ ಚತುರ್ಥಿಗೆ ಹಿಂದೂಗಳು ಸ್ಥಾಪಿಸುವ ಗಣಪತಿಗೆ ನೂರೆಂಟು ಅನುಮತಿ ಕೇಳುವ ಕೈ ಸರ್ಕಾರ, ಸಮಾಜದ ಶಾಂತಿ ಕದಡುವ ಇಂತಹ ಮೆರವಣಿಗೆಗಳಿಗೆ ಅನುಮತಿ ನೀಡಿದ್ದರ ಹಿನ್ನಲೆ ಏನು ಎಂದು ಬಿಜೆಪಿ ಪ್ರಶ್ನಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com