ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆ ವೇಳೆ ಹಿಂಸಾಚಾರ, 60 ಮಂದಿ ಬಂಧನ

ಜಿಲ್ಲಾ ಕೇಂದ್ರ ಶಿವಮೊಗ್ಗ ನಗರದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ 24 ಪ್ರಕರಣಗಳು ದಾಖಲಾಗಿದ್ದು, 60 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಹಿಂಸಾಚಾರ ಸಂಭವಿಸಿದ ರಾಗಿಗುಡ್ಡ ಪ್ರದೇಶದಲ್ಲಿ ಪೊಲೀಸರ ಚಿತ್ರ
ಹಿಂಸಾಚಾರ ಸಂಭವಿಸಿದ ರಾಗಿಗುಡ್ಡ ಪ್ರದೇಶದಲ್ಲಿ ಪೊಲೀಸರ ಚಿತ್ರ

ಬೆಂಗಳೂರು/ಶಿವಮೊಗ್ಗ: ಜಿಲ್ಲಾ ಕೇಂದ್ರ ಶಿವಮೊಗ್ಗ ನಗರದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ 24 ಪ್ರಕರಣಗಳು ದಾಖಲಾಗಿದ್ದು, 60 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ರಾಗಿ ಗುಡ್ಡ ಪ್ರದೇಶದಲ್ಲಿ ಭಾನುವಾರ ನಡೆದ ಕಲ್ಲು ತೂರಾಟದ ನಂತರ  ಉದ್ವಿಗ್ನತೆ ಉಂಟಾದ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಪರಿಸ್ಥಿತಿ ಈಗ ಶಾಂತಿಯುತವಾಗಿದೆ ಮತ್ತು ನಿಯಂತ್ರಣದಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

"ರಾಗಿ ಗುಡ್ಡದಲ್ಲಿನ ಘಟನೆಗೆ ಸಂಬಂಧಿಸಿದಂತೆ  24 ಎಫ್‌ಐಆರ್‌ ದಾಖಲಿಸಿದ್ದು, 60 ಜನರನ್ನು ಬಂಧಿಸಿ ಬಂಧಿಸಿದ್ದೇವೆ. ಈಗ ಪರಿಸ್ಥಿತಿ ಶಾಂತವಾಗಿದ್ದು, ಇದು ನಗರದ ಇತರೆಡೆ ಯಾವುದೇ ಪರಿಣಾಮ ಬೀರಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ ಕೆ ಮಿಥುನ್ ಕುಮಾರ್ ಸುದ್ದಿಗಾರರಿಗೆ ತಿಳಿಸಿದರು.

ಈ ಮಧ್ಯೆ ಬೆಂಗಳೂರಿನಲ್ಲಿ ಮಾತನಾಡಿದ ಗೃಹ ಸಚಿವ ಡಾ. ಜಿ.ಪರಮೇಶ್ವರ, ಎಲ್ಲವೂ ನಿಯಂತ್ರಣದಲ್ಲಿದೆ, ಆತಂಕ ಪಡುವ ಅಗತ್ಯವಿಲ್ಲ. ತನಿಖೆ ನಡೆಯುತ್ತಿದೆ, ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿಯನ್ನು ಅಲ್ಲಿಗೆ ಕಳುಹಿಸಲಾಗಿತ್ತು. ಅವರು ಈಗ ಬರುತ್ತಿದ್ದು, ತನಿಖೆ ಪೂರ್ಣಗೊಂಡ ಅವರು ಅವರು ವರದಿಯನ್ನು ಸಲ್ಲಿಸಲಿದ್ದಾರೆ ಎಂದರು.

ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಇಂದು ರಾಗಿಗುಡ್ಡದಲ್ಲಿನ ಕೆಲವು ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೆರವಣಿಗೆ ವಿಡಿಯೋಗಳಲ್ಲಿ ತೋರಿಸಲಾದ ಕೆಲವು  ಖಡ್ಗಗಳು ಒರಿಜಿನಲ್ ಅಲ್ಲ ಮತ್ತು ಪ್ಲಾಸ್ಟಿಕ್ ಅಥವಾ ಕಾರ್ಡ್‌ಬೋರ್ಡ್‌ನಿಂದ ಮಾಡಲ್ಪಟ್ಟಿದೆ. ನನ್ನ ಸಂಪ್ರದಾಯದಂತೆ ತ್ರಿಶೂಲ ಇಡಿದುಕೊಳ್ಳುತ್ತೇವೆ, ಅದೇ ರೀತಿಯಲ್ಲಿ ಇಲ್ಲಿ ಇಡಲಾಗಿದ್ದು, ಅದನ್ನು ಹಿಂಸಾಚಾರಕ್ಕೆ ಹೋಲಿಸಬಾರದು. ಒಂದು ವೇಳೆ ಅವುಗಳನ್ನು ಹಿಂಸಾಚಾರ, ಹಿಂಸಾಚಾರಕ್ಕೆ ಬಳಸಿದರೆ, ಪೊಲೀಸರು ಕ್ರಮ ತೆಗೆದುಕೊಳ್ಳುತ್ತಾರೆ ಎಂದು ತಿಳಿಸಿದರು. 

ಎಸ್ ಪಿ ಮಿಥುನ್ ಕುಮಾರ್ ಮಾತನಾಡಿ, ಶಿವಮೊಗ್ಗ ನಗರದಲ್ಲಿ ವ್ಯಾಪಾರ ಮತ್ತು ಇತರ ಚಟುವಟಿಕೆಗಳು ಎಂದಿನಂತೆ ನಡೆಯುತ್ತಿವೆ .ಘಟನೆ ಬಳಿಕವೂ ನಗರದಲ್ಲಿ ಅಂದು ರಾತ್ರಿ 11.30ರವರೆಗೆ ಶಾಂತಿಯುತವಾಗಿ ಈದ್ ಮಿಲಾದ್ ಮೆರವಣಿಗೆ ನಡೆಯಿತು. ಶಿವಮೊಗ್ಗ ನಗರದ ಹೊರವಲಯ ರಾಗಿ ಗುಡ್ಡ ಪ್ರದೇಶದಲ್ಲಿ ಮಾತ್ರ ಹಿಂಸಾಚಾರ ಘಟನೆ ನಡೆದಿದೆ. ನಾನೂ ಕೂಡಾ ಅಲ್ಲಿಯೇ ಇದ್ದೆ. ಪೊಲೀಸರು ಕ್ರಮ ಕೈಗೊಂಡು ಅರ್ಧ ಗಂಟೆಯೊಳಗೆ ಪರಿಸ್ಥಿತಿಯನ್ನು ಹತೋಟಿಗೆ ತಂದರು. ಅಪರಾಧಿಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿದರು. 

ರಾಗಿ ಗುಡ್ಡ ಪ್ರದೇಶದಲ್ಲಿ ಮಾತ್ರ ಕೆಲವು ನಿರ್ಬಂಧಗಳಿದ್ದು, ಪರಿಸ್ಥಿತಿಯನ್ನು ಅವಲೋಕಿಸಿದ ನಂತರ ಅದನ್ನು ಹಿಂಪಡೆಯಲಾಗುವುದು ಎಂದು ತಿಳಿಸಿದ ಎಸ್ಪಿ, ಯಾವುದೇ ಆತಂಕ ಪಡುವ ಅಗತ್ಯವಿಲ್ಲ, ಮತ್ತು ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ಹೇಳಿದರು.

ಸ್ಥಳಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಎಲ್ಲ ಸಮುದಾಯದವರ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿರುವುದು ಗಮನಕ್ಕೆ ಬಂದಿದೆ. ಅಪರಾಧಿಗಳು ಅವರ ಸಮುದಾಯವನ್ನು ಲೆಕ್ಕಿಸದೆ ಕಲ್ಲು ತೂರಾಟ ನಡೆಸಿರುವುದು ತಪ್ಪು. ಅಮಾಯಕರು ಆತಂಕ ಪಡುವ ಅಗತ್ಯವಿಲ್ಲ, ಫೋಟೋ ಮತ್ತು ವಿಡಿಯೋ ಸಾಕ್ಷ್ಯವಿದೆಯೋ ಅವರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದರು. 

ಹಿಂಸಾಚಾರದಲ್ಲಿ ಹೊರಗಿನವರು"ಭಾಗಿಯಾಗಿರುವ ಬಗ್ಗೆ ಮತ್ತು ದುಷ್ಕರ್ಮಿಗಳು ಓಮ್ನಿ ವ್ಯಾನ್ ಬಳಸಿದ್ದಾರೆ ಎಂಬ ವರದಿಗಳ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮಿಥುನ್ ಕುಮಾರ್, ವಾಹನವನ್ನು ಪತ್ತೆಹಚ್ಚಲಾಗಿದೆ ಮತ್ತು ತನಿಖೆ ನಡೆಯುತ್ತಿದೆ ಮತ್ತು ಅದನ್ನು ಬಳಸಿದವರನ್ನು ಪ್ರಶ್ನಿಸಿದ್ದೇವೆ. ಈ ಬಗ್ಗೆ ಊಹಾಪೋಹ ಹರಡಿ ಜನರಲ್ಲಿ ಗಾಬರಿ ಮೂಡಿಸುವುದು ಬೇಡ, ಎಲ್ಲಾ ಆಯಾಮಗಳಲ್ಲ ತನಿಖೆ ನಡೆಯುತ್ತಿದೆ ಎಂದು ಅವರು ವಿವರಿಸಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com